Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರಕು ವಾಹನಗಳಲ್ಲಿ ಕಾರ್ಮಿಕರ ಸಾಗಾಟ...

ಸರಕು ವಾಹನಗಳಲ್ಲಿ ಕಾರ್ಮಿಕರ ಸಾಗಾಟ ನಿಷೇಧ: ಆದೇಶ ಮರುಪರಿಶೀಲನಾ ಅರ್ಜಿ ಸಲ್ಲಿಕೆಗೆ ಒತ್ತಾಯಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ30 May 2019 11:39 PM IST
share
ಸರಕು ವಾಹನಗಳಲ್ಲಿ ಕಾರ್ಮಿಕರ ಸಾಗಾಟ ನಿಷೇಧ: ಆದೇಶ ಮರುಪರಿಶೀಲನಾ ಅರ್ಜಿ ಸಲ್ಲಿಕೆಗೆ ಒತ್ತಾಯಿಸಿ ಧರಣಿ

ಚಿಕ್ಕಮಗಳೂರು, ಮೇ 30: ಸರಕು ಸಾಗಣೆ ವಾಹನಗಳಲ್ಲಿ ಕಾರ್ಮಿಕರನ್ನು ಸಾಗಾಟ ಮಾಡಬಾರದೆಂದು ಇತ್ತೀಚೆಗೆ ನ್ಯಾಯಾಲಯ ಆದೇಶ ನೀಡಿದ್ದು, ಈ ಆದೇಶದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ ಲಕ್ಷಾಂತರ ಕೃಷಿ ಕೂಲಿ ಕಾರ್ಮಿಕರಿಗೆ ಉದ್ಯೋಗವಿಲ್ಲದಂತಾಗಿದೆ. ಕಾರ್ಮಿಕರ ಹಿತರಕ್ಷಣೆ ಮಾಡಬೇಕಿದ್ದ ಜಿಲ್ಲೆಯ ಜನಪ್ರತಿನಿಧಿಗಳು ಚುನಾವಣೆ ಬಳಿಕ ಕ್ಷೇತ್ರದಿಂದ ನಾಪತ್ತೆಯಾಗಿದ್ದಾರೆಂದು ಸಿಪಿಐ ಮುಖಂಡ ಎಚ್.ಎಮ್.ರೇಣುಕಾರಾಧ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುರುವಾರ ಭಾರತ ಕಮ್ಯೂನಿಷ್ಟ್ ಪಕ್ಷದ ನೇತೃತ್ವದಲ್ಲಿ ಜಿಲ್ಲಾ ಕೃಷಿ ಕೂಲಿ ಕಾರ್ಮಿಕರ ಸಂಘ ನಗರದ ಆಝಾದ್ ಪಾರ್ಕ್ ವೃತ್ತದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಕಾರ್ಮಿಕರನ್ನುದ್ದೇಶಿಸಿ ಮಾತನಾಡಿದ ಅವರು, ಚಿಕ್ಕಮಗಳೂರು ಜಿಲ್ಲೆ ಮಲೆನಾಡು ಹಾಗೂ ಬಯಲುಸೀಮೆ ಪ್ರದೇಶಗಳನ್ನು ಹೊಂದಿದ್ದು, ಬಯಲುಸೀಮೆ ಪ್ರದೇಶ ತೀವ್ರ ಬರಗಾಲಕ್ಕೆ ತುತ್ತಾಗಿರುವ ಪರಿಣಾಮ ಇಲ್ಲಿನ ಸಣ್ಣ ರೈತರು, ಕೃಷಿ ಕಾರ್ಮಿಕರು ಕಳೆದೊಂದು ದಶಕದಿಂದ ಮಲೆನಾಡು ಭಾಗದಲ್ಲಿರುವ ಕಾಫಿ ತೋಟಗಳನ್ನು ಕೂಲಿ ಕೆಲಸಕ್ಕಾಗಿ ಆಶ್ರಯಿಸಿದ್ದಾರೆ. ಈ ಕಾರ್ಮಿಕರು ಜಿಲ್ಲೆಯ ಮಲೆನಾಡು ಭಾಗದ ಗುಡ್ಡಗಾಡು ಪ್ರದೇಶದಲ್ಲಿರುವ ಕಾಫಿ ತೋಟಗಳನ್ನು ತಲುಪಲು ಸಾರಿಗೆ ಸೌಕರ್ಯದ ವ್ಯವಸ್ಥೆ ಇಲ್ಲದ ಪರಿಣಾಮ ಗೂಡ್ಸ್ ಆಟೊ, ಟ್ರ್ಯಾಕ್ಟರ್, ಲಾರಿಗಳಂತಹ ಸರಕು ಸಾಗಣೆ ವಾಹನಗಳ ಮೂಲಕ ಕಾಫಿತೋಟಗಳಿಗೆ ಉದ್ಯೋಗ ಅರಸಿ ಹೋಗುತ್ತಿದ್ದಾರೆ. ಇದೀಗ ಸುಪ್ರೀಂ ಕೋರ್ಟ್ ಸರಕು ಸಾಗಣೆ ವಾಹನಗಳಲ್ಲಿ ಕಾರ್ಮಿಕರ ಸಾಗಣೆಯನ್ನು ನಿಷೇಧಿಸಿ ಆದೇಶ ನೀಡಿರುವುದರಿಂದ ಜಿಲ್ಲೆಯ ಕೂಲಿ ಕಾರ್ಮಿಕರಿಗೆ ಉದ್ಯೋಗವಿಲ್ಲದಂತಾಗಿದೆ ಎಂದರು.

ಕೂಲಿ ಕೆಲಸಕ್ಕೆ ಹೋಗಲು ಪರ್ಯಾಯ ವ್ಯವಸ್ಥೆ ಇಲ್ಲದ ಪರಿಣಾಮ ಲಕ್ಷಾಂತರ ಕಾರ್ಮಿಕರ ಕುಟುಂಬಗಳು ಕೆಲಸವಿಲ್ಲದೇ ಉಪವಾಸ ಮಲಗುವಂತಾಗಿದೆ ಎಂದ ಅವರು, ಕಾಫಿ ತೋಟಗಳಲ್ಲಿ ಕೆಲಸವಿದ್ದರೂ ಸಾರಿಗೆ ಸೌಕರ್ಯದ ಕೊರತೆಯಿಂದಾಗಿ ಕಾರ್ಮಿಕರು ತೊಂದರೆಗೀಡಾಗಿದ್ದಾರೆ. ನ್ಯಾಯಾಲಯದ ಆದೇಶವನ್ನು ಪಾಲಿಸುವ ನಿಟ್ಟಿನಲ್ಲಿ ಕಾರ್ಮಿಕರನ್ನು ಪೊಲೀಸರ ಕಣ್ತಪ್ಪಿಸಿ ಸಾಗಣೆ ಮಾಡುವ ಸರಕು ವಾಹನಗಳನ್ನು ಕಂಡಕಂಡಲ್ಲಿ ಅಡ್ಡ ಹಾಕುತ್ತಾ ವಾಹನಗಳನ್ನು ಜಪ್ತಿ ಮಾಡುವುದಲ್ಲದೇ ಸಾವಿರಾರು ರೂ. ದಂಡ ವಿಧಿಸುತ್ತಿದ್ದಾರೆ. ಈ ಭೀತಿಯಿಂದಾಗಿ ಕಾರ್ಮಿಕರು ಹಾಗೂ ವಾಹನಗಳ ಮಾಲಕರೂ ಕಾರ್ಮಿಕರ ಸಾಗಣೆ ಮಾಡಲು ಮುಂದಾಗುತ್ತಿಲ್ಲ ಎಂದು ಅವರು ಇದೇ ವೇಳೆ ಆರೋಪಿಸಿದರು.

ನ್ಯಾಯಾಲಯದ ಆದೇಶ ಜಿಲ್ಲೆಯ ಕಾರ್ಮಿಕರ ಪಾಲಿಗೆ ಮರಣಶಾಸನದಂತಾಗಿದ್ದರೂ ಈ ಸಂಬಂಧ ಪರ್ಯಾಯ ಪರಿಹಾರೋಪಾಯಗಳನ್ನು ಕಂಡುಕೊಳ್ಳಲು ಜಿಲ್ಲೆಯ ಯಾವ ಜನಪ್ರತಿನಿಧಿಗಳೂ ಮುಂದಾಗುತ್ತಿಲ್ಲ. ಜಿಲ್ಲೆಯ ಐವರು ಶಾಸಕರು ಹಾಗೂ ಓರ್ವ ಸಂಸದ ಚುನಾವಣೆ ಸಂದರ್ಭದಲ್ಲಿ ಕಾರ್ಮಿಕರ ಮನೆಗಳಿಗೆ ಪ್ರತಿದಿನ ಮತಯಾಚನೆ ಹೋಗುತ್ತಿದ್ದರು. ಆದರೆ ಈಗ ಕಾರ್ಮಿಕರು ಸಂಕಷ್ಟದ ದಿನಗಳನ್ನು ಎದುರಿಸುತ್ತಿದ್ದರೂ ಓರ್ವ ಜನಪ್ರತಿನಿಧಿಯೂ ಈ ಸಮಸ್ಯೆ ಬಗ್ಗೆ ಸರಕಾರಗಳ ಗಮನಸೆಳೆಯುತ್ತಿಲ್ಲ. ಕಾರ್ಮಿಕರ ಓಟು ಪಡೆದು ಗೆದ್ದವರು ಇದೀಗ ಜಿಲ್ಲೆಯಿಂದ ನಾಪತ್ತೆಯಾಗಿದ್ದಾರೆಂದು ರೇಣುಕಾರಾಧ್ಯ ಆರೋಪಿಸಿದರು.

ಸರಕು ಸಾಗಣೆ ವಾಹನಗಳಲ್ಲಿ ಕಾರ್ಮಿಕ ಸಾಗಣೆಗೆ ನಿಷೇಧ ಹೇರಿರುವುದರಿಂದ ಆಗಿರುವ ಸಮಸ್ಯೆಯನ್ನು ಜಿಲ್ಲಾಧಿಕಾರಿ ಬಳಿ ಚರ್ಚಿಸಲಾಗಿದೆ. ಆದರೆ ಸೂಕ್ತ ಕ್ರಮವಹಿಸುವ ಭರವಸೆ ನೀಡಿದ್ದ ಅವರು ಇದುವರೆಗೂ ಯಾವುದೇ ಕ್ರಮಕೈಗೊಂಡಿಲ್ಲ ಎಂದ ಅವರು, ಜಿಲ್ಲೆಯ ಐವರು ಶಾಸಕರು ಈ ಕೂಡಲೆ ಕಾರ್ಮಿಕರ ಸಮಸ್ಯೆಯನ್ನು ರಾಜ್ಯ ಸರಕಾರದ ಗಮನಕ್ಕೆ ತಂದು ನ್ಯಾಯಾಲಯದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಒತ್ತಡ ಹೇರಬೇಕು. ಉದ್ಭವಿಸಿರುವ ಸಮಸ್ಯೆಯ ಪರಿಹಾರಕ್ಕೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಬೇಕೆಂದು ಆಗ್ರಹಿಸಿದ ಅವರು, ತಪ್ಪಿದಲ್ಲಿ ಜಿಲ್ಲೆಯ ಎಲ್ಲ ಕಾರ್ಮಿಕರ ನೇತೃತ್ವದಲ್ಲಿ ಬೃಹತ್ ಹೋರಾಟಕ್ಕೆ ಕರೆ ನೀಡಲಾಗುವುದು ಎಂದು ಎಚ್ಚರಿಸಿದರು.

ಸಿಪಿಐ ಮುಖಂಡ ಹಾಗೂ ಕೃಷಿ ಕೂಲಿ ಕಾರ್ಮಿಕರ ಸಂಘದ ಗೌರವಾಧ್ಯಕ್ಷ ವಿಜಯ್‍ಕುಮಾರ್ ಮಾತನಾಡಿ, ಜಿಲ್ಲೆಯ ಬರಪೀಡಿತ ಪ್ರದೇಶಗಳಲ್ಲಿ ನೀರಾವರಿ ಯೋಜನೆಗಳನ್ನು ಜಾರಿ ಮಾಡುವಂತೆ ಹಲವಾರು ವರ್ಷಗಳಿಂದ ಪ್ರತಿಭಟನೆ, ಹೋರಾಟಗಳು ನಡೆಯುತ್ತಿವೆ. ಆದರೆ ಯಾವ ಜನಪ್ರತಿನಿಧಿಗಳೂ ಬಯಸೀಮೆ ಭಾಗಕ್ಕೆ ನೀರು ತರುವ ಯೋಜನೆಗಳ ಜಾರಿಗೆ ಮುಂದಾಗಿಲ್ಲ. ಜಿಲ್ಲೆಯಲ್ಲಿ ಐದು ನದಿಗಳು ಹರಿಯುತ್ತಿದ್ದರೂ ಬಯಸಲುಸೀಮೆ ಪ್ರದೇಶದಲ್ಲಿ ನೀರಿಲ್ಲದೆ ರೈತರು ಕೂಲಿ ಕಾರ್ಮಿಕರಾಗಿದ್ದಾರೆ. ಕೆಲಸಕ್ಕಾಗಿ ಮಲೆನಾಡು ಭಾಗದ ಕಾಫಿ ತೋಟಗಳನ್ನು ಆಶ್ರಯಿಸುತ್ತಿದ್ದಾರೆ. ಆದರೆ ನ್ಯಾಯಾಲಯದ ಆದೇಶದಿಂದಾಗಿ ಬರ ಪೀಡಿತ ಪ್ರದೇಶಗಳ ಕೂಲಿ ಕಾರ್ಮಿಕರಿಗೆ ಇದೀಗ ಕೂಲಿ ಕೆಲಸಕ್ಕೂ ಹೋಗದಂತಾಗಿದೆ. ಜನಪ್ರತಿನಿಧಿಗಳು ಬಯಲುಸೀಮೆ ಭಾಗಕ್ಕೆ ನೀರಾವರಿ ಯೋಜನೆಗಳ ಜಾರಿಗೆ ಮುಂದಾದಲ್ಲಿ ಅಲ್ಲಿನ ಕಾರ್ಮಿಕರಿಗೆ ಸ್ಥಳೀಯವಾಗಿ ಕೆಲಸ ಸಿಗುತ್ತದೆ. ಕೃಷಿ ಜಮೀನುಗಳಲ್ಲಿ ಕೃಷಿ ಕೆಲಸ ಸಿಗುತ್ತದೆ. ಇದರಿಂದಾಗಿ ಕಾರ್ಮಿಕರ ವಲಸೆ ತಪ್ಪುತ್ತದೆ ಎಂದ ಅವರು, ಕಾರ್ಮಿಕರ ಈ ಸಮಸ್ಯೆಗ ಜಿಲ್ಲಾಡಳಿತ ಕಾನೂನಾತ್ಮಕವಾಗಿ ಪರಿಹಾರ ಸೂಚಿಸಬೇಕೆಂದರು.

ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಇದಕ್ಕೂ 300ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿದ್ದ ಕೃಷಿ ಕಾರ್ಮಿಕರು ನಗರದ ಬಸವನಹಳ್ಳಿ ರಸ್ತೆಯಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ ಇಂದಿರಾಗಾಂಧಿ ರಸ್ತೆ ಮೂಲಕ ಆಝಾದ್ ಪಾರ್ಕ್ ವೃತ್ತಕ್ಕಾಗಮಿಸಿ ಸಮಾವೇಶಗೊಂಡರು. ಸಂಘದ ಅಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷ ವಿಜಯ್, ಮುಖಂಡರಾದ ನಾಗರಾಜ್, ಅರುಣಾ, ಚಂದ್ರು, ಮಲ್ಲಯ್ಯ, ಹೆಡದಾಳು ಕುಮಾರ್ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಜಿಲ್ಲೆಯಲ್ಲಿ ಶೀಘ್ರ ಕೃಷಿ ಕೂಲಿ ಕಾರ್ಮಿಕರು ಮತ್ತು ಬೆಳೆಗಾರರ ಸಮಾವೇಶ ಆಯೋಜಿಸಲಾಗುವುದು, ಸಮಾವೇಶದಲ್ಲಿ ಕಾರ್ಮಿಕರ ಸಮಸ್ಯೆಗಳು, ಹಕ್ಕುಗಳ ಬಗ್ಗೆ ಚರ್ಚಿಸಲಾಗುವುದು. ಕೃಷಿ ಕೂಲಿ ಕಾರ್ಮಿಕರಿಗೆ ಸರಕಾರದಿಂದ ಸಿಗಬೇಕಾದ ಸೌಲಭ್ಯಗಳ ಜತೆಗೆ ಕಾರ್ಮಿಕರು ಅಫಘಾತಕ್ಕೀಡಾದಾಗ ಸಿಗಬೇಕಾದ ವಿಮಾ ಸೌಲಭ್ಯ ಮತ್ತಿತರ ವಿಷಯಗಳನ್ನು ಚರ್ಚಿಸಲಾಗುವುದು.
- ವಿಜಯ್‍ ಕುಮಾರ್, ಗೌರವಾಧ್ಯಕ್ಷ, ಕೃಷಿ ಕೂಲಿ ಕಾರ್ಮಿಕರ ಸಂಘದ

ಬೇಡಿಕೆಗಳು:
1. ಕಾರ್ಮಿಕರ ಸಾಗಣೆಗೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ನಾಟಕ ಮೋಟಾರು ವಾಹನ ನಿಯಮ 1989 ಅನುಸಾರ ಅಧೀಕೃತವಾಗಿ ಸರಕು ಸಾಗಣೆ ವಾಹನಗಳಿಗೆ ಇಲಾಖೆಯಿಂದ ಪರವಾನಿಗೆ ನೀಡಲಾಗಿದ್ದು, ಇದರಂತೆ ಜಿಲ್ಲೆಯ ಪರಿಸ್ಥಿತಿ, ಅನಿವಾರ್ಯತೆ ಪರಿಗಣಿಸಿ ಕೃಷಿ ಕಾರ್ಮಿಕರ ಸಾಗಣೆ ವಾಹನಗಳಿಗೆ ಪರವಾನಿಗೆ ವಾಹನವೆಂದು ಅನುಮತಿ ನೀಡಬೇಕು.
2. ಬರಪೀಡಿತ ಪ್ರದೇಶಗಳಲ್ಲಿ ಕಾರ್ಮಿಕರ ವಲಸೆ ತಪ್ಪಿಸಲು ಆ ಪ್ರದೇಶಗಳಲ್ಲಿ ನೀರಾವರಿ ಯೋಜನೆಗಳನ್ನು ಜಾರಿ ಮಾಡಬೇಕು.
3. ಸ್ಥಳೀಯವಾಗಿ ಕೈಗಾರಿಕೆಗಳನ್ನು ಆರಂಭಿಸಿ ಸ್ಥಳೀಯ ಕಾರ್ಮಿಕರಿಗೆ ಉದ್ಯೋಗ ನೀಡಬೇಕು.
4. ಕಾರ್ಮಿಕರು ಕೆಲಸಕ್ಕೆ ಹೋಗಲು ಅನುಕೂಲವಾಗುವಂತೆ ಸಾಧ್ಯವಿರು ಕಡೆ ಸಾರಿಗೆ ಬಸ್‍ಗಳ ಸಂಚಾರ ಆರಂಭಿಸಬೇಕು.
5. ಕಾರ್ಮಿಕರ ಭವಿಷ್ಯ ಹಾಗೂ ಸುರಕ್ಷಿತ ಸಾಗಣೆಗಾಗಿ ನ್ಯಾಯಾಲಯದ ಆದೇಶ ಸಂಬಂಧ ಮರುಪರಿಶೀಲನಾ ಅರ್ಜಿ ಸಲ್ಲಿಸಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X