ಜೂ.3ರಿಂದ ತೀವ್ರತರ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ
ಉಡುಪಿ, ಮೇ 31:ರಾಷ್ಟ್ರೀಯ ತೀವ್ರತರ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ (ಐಡಿಸಿಎಫ್) ಕಾರ್ಯಕ್ರಮ ಜೂ.3ರಿಂದ 17ರವರೆಗೆ ಜರುಗಲಿದೆ. 5 ವರ್ಷದೊಳಗಿನ ಮಕ್ಕಳಲ್ಲಿ ಅತಿಸಾರ ಭೇದಿಯಿಂದ ಸಂಭವಿಸುವ ಮರಣ ಸಂಖ್ಯೆಯನ್ನು ಕಡಿಮೆ ಮಾಡಲು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ 5 ವರ್ಷದೊಳಗಿನ ಜಿಲ್ಲೆಯ 70,796 ಮಕ್ಕಳನ್ನು ತಲುಪುವ ಗುರಿ ಇದ್ದು, 5 ವರ್ಷದೊಳಗಿನ ಮಕ್ಕಳಿರುವ ಎಲ್ಲಾ ಮನೆಗಳಿಗೆ ಆಶಾ /ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಓಆರ್‌ಎಸ್ ಪ್ಯಾಕೆಟ್ ವಿತರಣೆ ಮಾಡುವುದು ಮತ್ತು ಅತಿಸಾರ ಬೇಧಿ ಆದಾಗ ಓಆರ್‌ಎಸ್ ಚಿಕಿತ್ಸೆ ನೀಡುವ ಬಗ್ಗೆ ಮಾಹಿತಿ ನೀಡಲಾಗುವುದು.
ಈ ಕಾರ್ಯಕ್ರಮದಲ್ಲಿ 5 ವರ್ಷದೊಳಗಿನ ಜಿಲ್ಲೆಯ 70,796 ಮಕ್ಕಳನ್ನು ತಲುಪುವ ಗುರಿ ಇದ್ದು, 5 ವರ್ಷದೊಳಗಿನ ಮಕ್ಕಳಿರುವ ಎಲ್ಲಾ ಮನೆಗಳಿಗೆ ಆಶಾ /ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಓಆರ್‌ಎಸ್ ಪ್ಯಾಕೆಟ್ ವಿತರಣೆ ಮಾಡುವುದು ಮತ್ತು ಅತಿಸಾರ ಬೇಧಿ ಆದಾಗ ಓಆರ್‌ಎಸ್ ಚಿಕಿತ್ಸೆ ನೀಡುವ ಬಗ್ಗೆ ಮಾಹಿತಿ ನೀಡಲಾಗುವುದು. ಆರೋಗ್ಯ ಸಂಸ್ಥೆಗಳಲ್ಲಿ ಮತ್ತು ಉಪಕೇಂದ್ರಗಳಲ್ಲಿ ಓಆರ್‌ಎಸ್ ಮತ್ತು ಜಿಂಕ್ ಕಾರ್ನರ್ ರಚಿಸಲಾಗುವುದು. ಅತಿಸಾರ ಬೇಧಿ ಪ್ರಕರಣಗಳಿಗೆ ಓಆರ್‌ಎಸ್ ಮತ್ತು ಜಿಂಕ್ ಚಿಕಿತ್ಸೆ ನೀಡಲಾಗುವುದು. ತೀವ್ರ ನಿರ್ಜಲೀಕರಣ ಇರುವ ಪ್ರಕರಣಗಳಿಗೆ ತಾಲೂಕು/ಜಿಲ್ಲಾಸ್ಪತ್ರೆಗಳಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗುವುದು.
ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ, ಅಡುಗೆಯವರಿಗೆ, ಅಂಗನವಾಡಿಯಲ್ಲಿ ಅಂಗನವಾಡಿ ಸಹಾಯಕಿಯರಿಗೆ ಹಾಗೂ ಮಕ್ಕಳಿಗೆ ವೈಜ್ಞಾನಿಕವಾಗಿ ಕೈತೊಳೆಯುವ ಬಗ್ಗೆ ಶಾಲಾ ಶಿಕ್ಷಕರು, ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಅಂಗನವಾಡಿ ಶಿಕ್ಷಕಿಯರು ಮಾರ್ಗದರ್ಶನ ನೀಡುವರು.
ಜೂ.3ರಂದು ಬೆಳಗ್ಗೆ 9:30ಕ್ಕೆ ಉಡುಪಿಯ ಸರಕಾರಿ ಕೂಸಮ್ಮ ಶಂು ಶೆಟ್ಟಿ ಮೆಮೋರಿಯಲ್ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ತೀವ್ರತರ ಅತಿಸಾರ ಭೇದಿ ಪಾಕ್ಷಿಕ ಕಾರ್ಯಕ್ರಮದ ಉದ್ಘಾಟನಾ ಸಮಾರಂ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.







