ಜಮ್ಮು ಕಾಶ್ಮೀರದಲ್ಲಿ ಎನ್ಕೌಂಟರ್: ಮೂವರು ಉಗ್ರರು ಹತ

ಶೋಪಿಯಾನ, ಮೇ 31: ಶೋಪಿಯಾನ ಜಿಲ್ಲೆಯ ದ್ರಾಗಾಡ್ ಸುಗಾನ್ ಪ್ರದೇಶದಲ್ಲಿ ಭದ್ರತಾ ಪಡೆ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಎನ್ಕೌಂಟರ್ನಲ್ಲಿ ಹತರಾದ ಉಗ್ರರ ಬಗ್ಗೆ ಖಚಿತ ಮಾಹಿತಿ ಇದುವರೆಗೆ ದೊರೆತಿಲ್ಲ. ಶುಕ್ರವಾರ ಬೆಳಗ್ಗೆ ಭದ್ರತಾ ಪಡೆ ಎನ್ಕೌಂಟರ್ ಆರಂಭಿಸತು. ಶೋಪಿಯಾನದ ಎನ್ಕೌಂಟರ್ ನಡೆದ ಪ್ರದೇಶದಲ್ಲಿ ಯೋಧರು ಶಸ್ತ್ರಾಸ್ತ್ರ ಹಾಗೂ ಸ್ಫೋಟಕ ಸಾಮಗ್ರಿಗಳು ಪತ್ತೆಯಾಗಿವೆ. ರಾಜ್ಯದ ಸೊಪೊರೆ ಜಿಲ್ಲೆಯ ದಂಗೇರ್ಪೋರಾ ಪ್ರದೇಶದಲ್ಲಿ ಭದ್ರತಾ ಪಡೆ ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರು ಹತರಾದ ದಿನದ ಬಳಿಕ ಈ ಘಟನೆ ನಡೆದಿದೆ.
Next Story