Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಾರಾಹಿ ನೀರು ಪೂರೈಸುವ ಯೋಜನೆಯ ಅಡೆತಡೆ...

ವಾರಾಹಿ ನೀರು ಪೂರೈಸುವ ಯೋಜನೆಯ ಅಡೆತಡೆ ನಿವಾರಣೆ: ಅರ್ಜಿ ಸಮಿತಿಯಿಂದ ತಕ್ಷಣ ಕಾಮಗಾರಿ ಆರಂಭಕ್ಕೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ31 May 2019 10:02 PM IST
share
ವಾರಾಹಿ ನೀರು ಪೂರೈಸುವ ಯೋಜನೆಯ ಅಡೆತಡೆ ನಿವಾರಣೆ: ಅರ್ಜಿ ಸಮಿತಿಯಿಂದ ತಕ್ಷಣ ಕಾಮಗಾರಿ ಆರಂಭಕ್ಕೆ ಸೂಚನೆ

ಉಡುಪಿ, ಮೇ 31: ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಉಡುಪಿ ನಗರಕ್ಕೆ ವಾರಾಹಿಯಿಂದ ನೀರು ಪೂರೈಕೆ ಮಾಡುವ ಸುಮಾರು 282 ಕೋಟಿ ರೂ. ವೆಚ್ಚದ ಮಹತ್ವಾಕಾಂಕ್ಷೆಯ ಯೋಜನೆಗೆ ಎದುರಾಗಿದ್ದ ಅಡೆತಡೆಗಳು ಬೆಂಗಳೂರಿನಲ್ಲಿ ಇಂದು ನಡೆದ ವಿಧಾನ ಪರಿಷತ್ತಿನ ಅರ್ಜಿ ಸಮಿತಿ ಸಭೆಯಲ್ಲಿ ನಿವಾರಣೆಯಾಗಿದ್ದು, ಮರುಟೆಂಡರ್ ಕರೆದು ತಕ್ಷಣ ಕಾಮಗಾರಿಯನ್ನು ಆರಂಭಿುವಂತೆ ಸಭೆಯಲ್ಲಿ ಸೂಚಿಸಲಾಯಿತು.

ವಿಧಾನ ಪರಿಷತ್ ಮಾಜಿ ಉಪಸಭಾಪತಿ ಹಾಗೂ ಅರ್ಜಿ ಸಮಿತಿ ಅಧ್ಯಕ್ಷ ಬಸವರಾಜ ಹೊರಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಯಿತು. ಈ ಹಿಂದಿನ ಯೋಜನೆಯಂತೆ ವಾರಾಹಿಯಿಂದ ಶುದ್ಧೀಕರಿಸದ ನೀರನ್ನು ಪೈಪ್ ಮೂಲಕ ಬಜೆಯಲ್ಲಿ ಈಗಾಗಲೇ ಇರುವ ಶುದ್ಧೀಕರಣ ಘಟಕಕ್ಕೆ ತಂದು, ಅಲ್ಲಿ ಶುದ್ಧೀಕರಿಸಿ ನೀರನ್ನು ಮಣಿಪಾಲಕ್ಕೆ ಕೊಂಡೊಯ್ಯುವಬೇಕಾಗಿತ್ತು.

ಆದರೆ ಇದಕ್ಕೆ ರೈತ ಸಂಘ ಅರ್ಜಿ ಸಮಿತಿಗೆ ಆಕ್ಷೇಪಣೆ ಸಲ್ಲಿಸಿತ್ತು. ಈ ಆಕ್ಷೇಪದಂತೆ ಸಮಿತಿಯು ಟೆಂಡರಿಗೆ ತಡೆಯೊಡ್ಡಿ ವಿಚಾರಣೆ ಕೈಗೆತ್ತಿಕೊಂಡಿತ್ತು. ಇಂದು ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದು ಕೆಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಆ ಪ್ರಕಾರ ವಾರಾಹಿಯ ಭರತ್ಕಲ್ ಪ್ರದೇಶದಲ್ಲಿ 50 ಎಂಎಲ್‌ಡಿಯ ಶುದ್ಧೀಕರಿಸಿದ ಘಟಕವನ್ನು ನಿರ್ಮಿಸಿ, ಅಲ್ಲಿಂದ ಪೈಪ್‌ಲೈನ್ ಮೂಲಕ ನೀರನ್ನು ನೇರವಾಗಿ ಮಣಿಪಾಲದ ಜಿಎಲ್ಆರ್‌ಗೆ ತೆಗೆದುಕೊಂಡು ಬಂದು, ನೀರನ್ನು ವಿತರಿಸುವುದಾಗಿ ನಿರ್ಧಾರ ತೆಗೆದುಕೊಳ್ಳಲಾಯಿತು. ದಾರಿಯ ಮಧ್ಯೆ ಬರುವ ಎಲ್ಲ ಗ್ರಾಪಂಗಳಿಗೆ ಈ ಶುದ್ಧೀಕರಿಸಿದ ನೀರನ್ನು ಕೊಡಲು ನಿಶ್ಚಯಿಸಲಾಯಿತು.

ಅದೇ ರೀತಿ ದಾರಿಯ ಮಧ್ಯೆ ಪೈಪ್ ಅಳವಡಿಸಲು ಅವಶ್ಯಕತೆ ಇರುವಲ್ಲಿ ರಸ್ತೆಯನ್ನು ಅಗೆದರೆ, ಮತ್ತೆ ಅದನ್ನು ಮರು ಡಾಮರೀಕರಣ ನಡೆಸಿ ಪೂರ್ಣ ಗೊಳಿಸುವ ಬಗ್ಗೆ ತೀರ್ಮಾನಿಸಲಾಯಿತು. ಹೀಗಾಗಿ ಮರು ಟೆಂಡರ್ ಕರೆದು ತಕ್ಷಣ ಕಾಮಗಾರಿಯನ್ನು ಪ್ರಾರಂಭಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಟೆಂಡರ್ ಕರೆದು ಕಾಮಗಾರಿ ಆರಂಭವಾದ ಬಗ್ಗೆ ವರದಿಯನ್ನು ಅರ್ಜಿ ಸಮಿತಿಗೆ ನೀಡಬೇಕೆಂದು ಅಧ್ಯಕ್ಷ ಬಸವರಾಜ ಹೊರಟ್ಟಿ ಅಧಿಕಾರಿಗಳಿಗೆ ಸೂಚಿಸಿದರು. ಉಡುಪಿ ಶಾಸಕ ಕೆ.ರಘುಪತಿ ಭಟ್ ಸಭೆಯಲ್ಲಿ ಭಾಗವಹಿಸಿ ಉಡುಪಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ವಿವರಿಸಿ ತಕ್ಷಣ ಕಾಮಗಾರಿ ಆರಂಭಿಸುವಂತೆ ಮನವಿ ಮಾಡಿದರು.

ಈ ಸಭೆಯಲ್ಲಿ ಅರ್ಜಿ ಸಮಿತಿ ಸದಸ್ಯರು, ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೇಜ್, ಬೃಹತ್ ನೀರಾವರಿ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್, ಕೆಯುಐಡಿಎಫ್‌ಸಿ ಆಡಳಿತ ನಿರ್ದೇಶಕ ಇಬ್ರಾಹಿಂ, ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಮತ್ತು ಕೆುುಐಡಿಎಫ್‌ಸಿ ಅಧಿಕಾರಿಗಳು ಹಾಜರಿದ್ದರು.

‘ವಾರಾಹಿಯಿಂದ ಉಡುಪಿ ನಗರಕ್ಕೆ ನೀರು ಪೂರೈಸುವ ಕುರಿತು ಬಹಳ ವರ್ಷದಿಂದ ಕಾಡುತ್ತಿದ್ದ ಸಮಸ್ಯೆಯೊಂದಕ್ಕೆ ಇದೀಗ ಅರ್ಜಿ ಸಮಿತಿಯಿಂದ ಪರಿಹಾರ ಸಿಕ್ಕಂತಾಗಿದೆ’
-ಕೆ.ರಘುಪತಿ ಭಟ್, ಶಾಸಕರು, ಉಡುಪಿ

‘ಬಹಳ ಸಮಯಗಳಿಂದ ಕಾಯುತ್ತಿದ್ದ ವಾರಾಹಿ ಯೋಜನೆಗೆ ಉಂಟಾಗಿದ್ದ ಅಡ್ಡಿ ಆತಂಕಗಳನ್ನು ರಾಜ್ಯ ಸರಕಾರ ಇಂದು ನಿವಾರಣೆ ಮಾಡಿದೆ. ನಾನು ಶಾಸಕ ಹಾಗೂ ಸಚಿವನಾಗಿದ್ದ ಅವಧಿಯಲ್ಲಿ ಈ ಯೋಜನೆಗೆ ಮಂಜೂರಾತಿ ದೊರೆತಿದೆ. ಈ ಯೋಜನೆಯಿಂದ ಉಡುಪಿ ನಗರದ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಬಹುದಾಗಿದೆ’
-ಪ್ರಮೋದ್ ಮಧ್ವರಾಜ್, ಮಾಜಿ ಸಚಿವರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X