Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಧಾರ್ಮಿಕ ಕ್ಷೇತ್ರಗಳಂತೆ ಶಾಲೆಗಳನ್ನೂ...

ಧಾರ್ಮಿಕ ಕ್ಷೇತ್ರಗಳಂತೆ ಶಾಲೆಗಳನ್ನೂ ಪ್ರೀತಿಸಿ: ಶಾಸಕ ರಾಜೇಶ್ ನಾಯ್ಕ್

ಕಲ್ಲಡ್ಕ ಶಾಲೆಯ ಶತಮಾನೋತ್ತರ ಬೆಳ್ಳಿಹಬ್ಬದ ವಿಜ್ಞಾಪನಾ ಪತ್ರ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ1 Jun 2019 6:06 PM IST
share
ಧಾರ್ಮಿಕ ಕ್ಷೇತ್ರಗಳಂತೆ ಶಾಲೆಗಳನ್ನೂ ಪ್ರೀತಿಸಿ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ, ಜೂ. 1: ದೇವಸ್ಥಾನ, ಮಸೀದಿ, ಚರ್ಚ್‍ಗಳಂತೆ ಶಾಲೆಗಳನ್ನೂ ಪ್ರೀತಿಸಿ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದ್ದಾರೆ.

ಕಲ್ಲಡ್ಕ ಜಿ.ಪಂ.ಮಾದರಿ ಹಿ.ಪ್ರಾ.ಶಾಲೆಯಲ್ಲಿ ಆಂಗ್ಲಮಾಧ್ಯಮ ವಿಭಾಗವನ್ನು ಶನಿವಾರ ಉದ್ಘಾಟಿಸಿ, ಶಾಲೆಯ ಶತಮಾನೋತ್ತರ ಬೆಳ್ಳಿಹಬ್ಬದ ವಿಜ್ಞಾಪನಾ ಪತ್ರ "ಮುನ್ನೋಟ" ವನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶಗಳ ಶಾಲೆಗಳು ಮತ್ತು ವಾತಾವರಣ ಜೀವನಪಾಠವನ್ನು ಹೇಳಿಕೊಡುತ್ತಿದೆ. ನಗರ ಕೇಂದ್ರಿತ ಶಿಕ್ಷಣಕ್ಕಿಂತ ಗ್ರಾಮೀಣ ಪ್ರದೇಶದ ಶಿಕ್ಷಣ ಸೊಗಸು, ಇದಕ್ಕೆ ಕಲ್ಲಡ್ಕ ಉದಾಹರಣೆ ಎಂದರು.

ಕಾಲ ಕಳೆಯುತ್ತಿದ್ದಂತೆಯೇ, ಸ್ಪರ್ಧಾತ್ಮಕ ಮನೋಭಾವವೂ ಅಗತ್ಯವಿದ್ದು, ಕನ್ನಡದ ಜೊತೆಗೆ ಇಂಗ್ಲಿಷ್‍ಗೂ ಒತ್ತು ನೀಡಬೇಕಾದ ಅನಿವಾರ್ಯತೆ ಇದೆ. ಶತಮಾನೋತ್ತರ ಬೆಳ್ಳಿಹಬ್ಬದ ಸುಸಂದರ್ಭದಲ್ಲಿ ಹೊಸರೂಪ ಪಡೆದುಕೊಂಡಿರುವ ಕಲ್ಲಡ್ಕ ಸರಕಾರಿ ಶಾಲೆ ಮತ್ತಷ್ಟು ವರ್ಷಗಳ ಕಾಲ ಶಿಕ್ಷಣದ ಧಾರೆ ಎರೆಯುವಂತಾಗಲಿ ಎಂದರು.

ದಾನಿ ರಾಜೇಂದ್ರ ಹೊಳ್ಳರು ಮಾತನಾಡಿ, ಶಾಲಾ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದದ ಮುತುವರ್ಜಿಯಿಂದ ಶಾಲೆ ಅಭಿವೃದ್ಧಿ ಯತ್ತ ಮುಖ ಮಾಡುತ್ತಿದೆ, ಎಲ್ಲಾ ಪೊಷಕರ ಸಹಕಾರ ಅಗತ್ಯ ಇದೆ ಎಂದರು. ದಾನಿ ಶಿವರಾಮ ಹೊಳ್ಳರು ಮಾತನಾಡಿ, ಆಂಗ್ಲಮಾಧ್ಯಮ ಆರಂಭಗೊಂಡಿರುವುದು ಶಾಲೆಗೆ ಹೊಸ ಬಲ ತಂದಂತಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಕ್ರಿಯಾಶೀಲತೆ ಪಡೆದುಕೊಳ್ಳಬೇಕಿದೆ ಎಂದರು.

ಶತಮಾನೋತ್ತರ ಬೆಳ್ಳಿ ಹಬ್ಬ ಸಮಿತಿ ಅಧ್ಯಕ್ಷ ನಾಗೇಶ್.ಕೆ ಹಾಗೂ ಮಾಜಿ ಶಾಸಕ ಎ.ರುಕ್ಮಯ ಪೂಜಾರಿ ಮಾತನಾಡಿದರು.
ತಾಪಂ ಸದಸ್ಯ ಮಹಾಬಲ ಆಳ್ವ, ಕರ್ನಾಟಕ ಬೀಡಿ ಮಾಲಕ ಮುಹಮ್ಮದ್ ಶಾಫಿ, ಗ್ರಾಪಂ ಅಧ್ಯಕ್ಷೆ ಜಯಲಕ್ಷ್ಮೀ, ಸದಸ್ಯೆ ಆಯಿಷಾ, ಶತಮಾನೋತ್ತರ ಬೆಳ್ಳಿಹಬ್ಬ ಸಮಿತಿ ಉಪಾಧ್ಯಕ್ಷ ಶಿವಶಂಕರ್, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಐಡಾ ಸುರೇಶ್, ಶಿಕ್ಷಣ ಸಂಯೋಜಕಿ ಸುಶೀಲಾ, ಕಲ್ಲಡ್ಕ ರೈತರ ಸೇವಾ ಸಹಕಾರಿ ಬ್ಯಾಂಕ್‍ನ ವ್ಯವಸ್ಥಾಪಕ ಸುರೇಶ್ ಆಚಾರ್ಯ, ಎಸ್‍ಡಿಎಂಸಿ ಅಧ್ಯಕ್ಷ  ರಾಜೇಶ್ ಕೊಟ್ಟಾರಿ ವೇದಿಕೆಯಲ್ಲಿದ್ದರು.

ಶಾಲಾ ಮುಖ್ಯ ಶಿಕ್ಷಕ ಅಬೂಬಕರ್ ಅಶ್ರಫ್ ಪ್ರಸ್ತಾವಿಸಿ, ಸ್ವಾಗತಿಸಿದರು. ಕಲ್ಲಡ್ಕ ಶಾಲೆಯ ಗತವೈಭವ ಮತ್ತೆ ಮರುಕಳಿಸುವ ಹಂತದಲ್ಲಿದ್ದು, ಶಾಲಾ ಏಳಿಗೆಗೆ ಸರ್ವರ ಸಹಕಾರ ಅಗತ್ಯ ಎಂದರು. ಶಿಕ್ಷಕಿ ಸಂಗೀತಾ ಕಾರ್ಯಕ್ರಮ ನಿರ್ವಹಿಸಿದರು. ಹಿರಿಯ ಶಿಕ್ಷಕಿ ವಾರಿಜಾಕ್ಷಿ ವಂದಿಸಿದರು.

ಇದೇ ಸಂದರ್ಭ ಕಲ್ಲಡ್ಕ ರೈತರ ಸೇವಾಸಹಕಾರಿ ಸಂಘದ ವತಿಯಿಂದ ನೀಡಲಾದ ಲ್ಯಾಪ್‍ಟಾಪ್ ಹಾಗೂ ಪ್ರಾಜೆಕ್ಟರ್‍ಗಳನ್ನು ಹಾಗೂ ಶತಮಾನೋತ್ತರ ಬೆಳ್ಳಿಹಬ್ಬಸಮಿತಿಯ ಕೊಡುಗೆಯಾದ 3 ಲಕ್ಷ ರೂ. ಮೌಲ್ಯದ ಪೀಠೋಪಕರಣಗಳನ್ನು ಶಾಸಕರು ಶಾಲೆಗೆ ಹಸ್ತಾಂತರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X