ವಾಸ್ತವಾಂಶ ಅರಿಯುವಲ್ಲಿ ವಿಫಲವಾದ ಜನ: ಸಿದ್ದರಾಮಯ್ಯ

ಬೆಂಗಳೂರು, ಜೂ.1: ಲೋಕಸಭಾ ಚುನಾವಣೆಗೆ ಮುನ್ನವೇ ನಿರುದ್ಯೋಗ ಪ್ರಮಾಣವು ಕಳೆದ 45 ವರ್ಷಗಳಲ್ಲೇ ಅತ್ಯಧಿಕ ಪ್ರಮಾಣದಲ್ಲಿದೆ ಎಂದು ಕೇಂದ್ರ ಸರಕಾರದ ಮಾಹಿತಿ ಪುಷ್ಠಿಕರಿಸಿತ್ತು. ಈ ವಿಚಾರವನ್ನು ನಾನು ಟ್ವೀಟ್ ಮಾಡಿದ್ದೆ. ಆದರೆ, ಈ ವಾಸ್ತವಾಂಶವನ್ನು ಅರ್ಥ ಮಾಡಿಕೊಳ್ಳುವಲ್ಲಿ ಹಲವರು ವಿಫಲರಾದರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ, ಲೋಕಸಭಾ ಚುನಾವಣಾ ಫಲಿತಾಂಶದ ಆಧಾರದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಕಾಲ ಮುಗಿಯಿತು ಎಂದು ತೀರ್ಪು ನೀಡಿದವರಿಗೆ ರಾಜ್ಯದ ಪ್ರಜ್ಞಾವಂತ ಮತದಾರರು ನೀಡಿದ ಉತ್ತರದಂತಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
Next Story





