ದಲಿತರ ಮೇಲೆ ಮಾರಣಾಂತಿಕ ಹಲ್ಲೆ: ತಪ್ಪಿತಸ್ಥರ ವಿರುದ್ಧ ಗೂಂಡಾ ಕಾಯ್ದೆ ದಾಖಲಿಸಲು ದಲಿತ ಸೇನೆ ಆಗ್ರಹ

ಬೆಂಗಳೂರು, ಜೂ. 1: ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ದಲಿತ ಯುವಕನ ಮದುವೆ ಮೆರವಣಿಗೆ ವೇಳೆ ಸವರ್ಣೀಯರು ದಲಿತರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ತಪ್ಪಿತಸ್ಥರ ವಿರುದ್ಧ ಗೂಂಡಾ ಕಾಯ್ದೆ ದಾಖಲಿಸಬೇಕೆಂದು ದಲಿತ ಸೇನೆ ಆಗ್ರಹಿಸಿದೆ.
ಮೇ 25ರಂದು ಗ್ರಾಮದ ದಲಿತ ಯುವಕನ ಮದುವೆ ಮೆರವಣಿಗೆ ಗ್ರಾಮದಲ್ಲಿ ತೆಗೆದುಕೊಂಡ ಹೋದ ಕಾರಣಕ್ಕೆ ಸವರ್ಣೀಯರು 15ಕ್ಕೂ ಹೆಚ್ಚು ಮಂದಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಇಬ್ಬರ ಸ್ಥಿತಿ ಅತ್ಯಂತ ಗಂಭೀರವಾಗಿದ್ದು ಕಲಬುರಗಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಗೊತ್ತಾಗಿದೆ.
ದಲಿತ ಸೇನೆಯ ಯಡ್ರಾಮಿ ತಾಲೂಕು ಘಟಕದಿಂದ ಆರೋಪಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಧರಣಿ ಸತ್ಯಾಗ್ರಹ ನಡೆಸಲಾಯಿತು. ಈ ವೇಳೆ ಮಾತನಾಡಿದ ಮುಖಂಡರು ತಪ್ಪಿಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಅಲ್ಲದೆ, ಅವರೆಲ್ಲರ ವಿರುದ್ಧ ಗೂಂಡಾ ಕಾಯ್ದೆ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ.
Next Story





