ಅಲ್ಪಸಂಖ್ಯಾತ ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ
ಮಂಗಳೂರು, ಜೂ.1: ದ.ಕ. ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಡೆಸಲ್ಪಡುವ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಬೋಳಾರ ಮಂಗಳೂರು ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯ ಚಿಲಿಂಬಿ, ದೇರಳಕಟ್ಟೆ, ಗುರುಕಂಬ್ಲ, ಬೆಂಜನಪದವು ಹಾಗೂ ಕಡಬ ಇಲ್ಲಿಗೆ ದಾಖಲಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಅರ್ಹ ಅಭ್ಯರ್ಥಿಗಳು ಇದರ ಪ್ರಯೋಜನ ಪಡೆಯಬಹುದಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿ ಕಾರಿ ಕಚೇರಿ, ಮೌಲಾನಾ ಆಝಾದ್ ಭವನ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ, ಮಂಗಳೂರು ಮತ್ತು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮಂಗಳೂರು ಬೆಳ್ತಂಗಡಿ, ಪುತ್ತೂರು, ಸುಳ್ಯ, ಬಂಟ್ವಾಳ ಅವರನ್ನು ಸಂಪರ್ಕಿಸಲು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





