ಸೀಟ್‌ಬೆಲ್ಟ್, ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯ
ಉಡುಪಿ, ಜೂ.1: ಕೇಂದ್ರ ಮೋಟಾರು ವಾಹನ ಕಾಯ್ದೆ 1989 ರೂವ್ 125ರ ಪ್ರಕಾರ ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯವಾಗಿರುತ್ತದೆ. ಆದುದ ರಿಂದ ದ್ವಿಚಕ್ರ ಮತ್ತು ತ್ರಿಚಕ್ರ ವಾಹನವನ್ನು ಹೊರತು ಪಡಿಸಿ ಎಲ್ಲಾ ಲಘು ಮೋಟಾರು ವಾಹನ ಚಾಲಕರು ಹಾಗೂ ವಾಹನದ ಎದುರಿನ ಸೀಟಿನಲ್ಲಿ ಕುಳಿತು ಪ್ರಯಾಣಿಸುವ ಪ್ರಯಾಣಿಕರು ಕಡ್ಡಾಯವಾಗಿ ಸೀಟ್ ಬೆಲ್ಟ್ ಧರಿಸಿ ಪ್ರಯಾಣಿಸಬೇಕಿದೆ.
ಅದೇ ರೀತಿ ಕೇಂದ್ರ ಮೋಟಾರು ವಾಹನ ಕಾಯ್ದೆ 1989 ರೂಲ್ 129ರ ಪ್ರಕಾರ ದ್ವಿಚಕ್ರ ವಾಹನದ ಹಿಂಬದಿ ಸವಾರರೂ ಸಹ ಹೆಲ್ಮೆಟ್ ಧರಿಸುವುದು ಕಡ್ಡಾಯವಾಗಿರುವುದರಿಂದ ಉಡುಪಿ ಜಿಲ್ಲೆಯ ಎಲ್ಲಾ ದ್ವಿಚಕ್ರ ವಾಹನ ಚಾಲಕರು ಹಾಗೂ ಹಿಂಬದಿಯ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಪ್ರಯಾಣಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





