ಹೊಂಡಕ್ಕೆ ಬಿದ್ದು ಸಾವು
ಬೈಂದೂರು, ಜೂ.1: ವಿಪರೀತ ಮದ್ಯಪಾನ ಚಟ ಹೊಂದಿದ್ದ ವೃದ್ಧರೊಬ್ಬರು ಶುಕ್ರವಾರ ರಾತ್ರಿ 10:30ರ ಸುಮಾರಿಗೆ ನಡೆದುಕೊಂಡು ಬರುತಿದ್ದಾಗ ಕಾಲು ಜಾರಿ ಹೊಂಡಕ್ಕೆ ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಶಿರೂರು ಕೆಳಪೇಟೆ ಸೇತುವೆ ಬಳಿ ನಡೆದಿದೆ.
ಮೃತರನ್ನು ಪರಮೇಶ್ವರ (70) ಎಂದು ಗುರುತಿಸಲಾಗಿದೆ.
ಇವರು ಶುಕ್ರವಾರ ರಾತ್ರಿ ಶಿರೂರು ಕೇಳಪೇಟೆ ಸೇತುವೆ ಬಳಿ ನಡೆದುಕೊಂಡು ಹೋಗುತ್ತಿ ರುವಾಗ ಕಾಲುಜಾರಿ ಹೊಂಡಕ್ಕೆ ಬಿದ್ದಿದ್ದು, ಸೊಂಟಕ್ಕೆ, ಬೆನ್ನಿಗೆ, ಕಾಲಿಗೆ ತೀವ್ರ ಸ್ವರೂಪದ ಗಾಯವಾಗಿತ್ತು. ಅವರನ್ನು ಕೂಡಲೇ ಬೈಂದೂರು ಸಮುದಾಯ ಆಸ್ಪತ್ರೆ ಹಾಗೂ ಅಲ್ಲಿಂದ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದೊಯ್ದರೂ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.
ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





