ಬೈಕ್ ಕಳವು ಪ್ರಕರಣ: ಇಬ್ಬರ ಬಂಧನ

ಬೆಂಗಳೂರು, ಜೂ.1: ಹಣದ ಆಸೆಗಾಗಿ ಬೈಕ್‌ಗಳನ್ನು ಗುರಿಯಾಗಿಸಿಕೊಂಡು ಕಳವು ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ಬಂಧಿಸಿರುವ ಇಲ್ಲಿನ ಕೊತ್ತನೂರು ಠಾಣಾ ಪೊಲೀಸರು, 6 ಲಕ್ಷ ರೂ. ಮೌಲ್ಯದ 17 ಬೈಕ್‌ಗಳನ್ನು ಜಪ್ತಿ ಮಾಡಿದ್ದಾರೆ.
ಲಿಂಗಾರಾಜಪುರದ ಜಾನ್(20) ಹಾಗೂ ಸಂಜಯ್(19) ಎಂಬುವರು ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ಈ ಹಿಂದೆಯೇ ಪ್ರಕರಣವೊಂದರಲ್ಲಿ ಭಾಗಿಯಾಗಿ ಜೈಲಿಗೆ ಹೋಗಿದ್ದರು. ಜೈಲಿನಿಂದ ಹೊರಬಂದ ಬಳಿಕ ಕಳವು ಚಾಳಿಯನ್ನು ಮುಂದುವರೆಸಿರುವುದಾಗಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.
Next Story





