Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತಣ್ಣಿಮಾನಿಯಲ್ಲಿ ಅರಣ್ಯ ಇಲಾಖೆಯಿಂದ...

ತಣ್ಣಿಮಾನಿಯಲ್ಲಿ ಅರಣ್ಯ ಇಲಾಖೆಯಿಂದ ದಿಢೀರ್ ಸರ್ವೆ: ಗ್ರಾಮಸ್ಥರಲ್ಲಿ ಆತಂಕ

ವಾರ್ತಾಭಾರತಿವಾರ್ತಾಭಾರತಿ1 Jun 2019 11:12 PM IST
share
ತಣ್ಣಿಮಾನಿಯಲ್ಲಿ ಅರಣ್ಯ ಇಲಾಖೆಯಿಂದ ದಿಢೀರ್ ಸರ್ವೆ: ಗ್ರಾಮಸ್ಥರಲ್ಲಿ ಆತಂಕ

ಮಡಿಕೇರಿ ಜೂ.1 : ಡಾ.ಕಸ್ತೂರಿರಂಗನ್ ವರದಿಯ ತೂಗುಗತ್ತಿಯಡಿಯಲ್ಲೇ ದಿನದೂಡುತ್ತಿದ್ದ ಭಾಗಮಂಡಲದ ತಣ್ಣಿಮಾನಿ ಗ್ರಾಮಸ್ಥರಿಗೆ ಆಘಾತವೊಂದು ಎದುರಾಗಿದೆ. ಕಳೆದ ಎರಡು ದಿನಗಳಿಂದ ಈ ಭಾಗದಲ್ಲಿ ದಿಢೀರ್ ಸರ್ವೆ ಕಾರ್ಯ ಆರಂಭಿಸಿರುವ ಅರಣ್ಯ ಇಲಾಖೆ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ.

ಅರಣ್ಯಾಧಿಕಾರಿಗಳ ಕ್ರಮದಿಂದ ದಾರಿ ತೋಚದಾಗಿರುವ ಗ್ರಾಮಸ್ಥರು ಇಂದು ಜಿಲ್ಲಾಡಳಿತವನ್ನು ಭೇಟಿಯಾಗಿ ಸರ್ವೆ ಕಾರ್ಯವನ್ನು ಸ್ಥಗಿತಗೊಳಿಸಲು ಸೂಚನೆ ನೀಡುವಂತೆ ಮನವಿ ಮಾಡಿದರು. 

ಇದಕ್ಕೂ ಮೊದಲು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತಣ್ಣಿಮಾನಿ ಗ್ರಾಮ ನಿವಾಸಿಗಳು ಏಕಾಏಕಿ ಸರ್ವೆ ಕಾರ್ಯ ಆರಂಭಿಸುವ ಮೂಲಕ ಕೃಷಿ ಜಮೀನುಗಳನ್ನು ‘ಅರಣ್ಯ’ ಎಂದು ಹೇಳುವ ಮೂಲಕ ಅರಣ್ಯ ಅಧಿಕಾರಿಗಳು ಕಿರುಕುಳ ನೀಡಲಾರಂಭಿಸಿದ್ದಾರೆ ಎಂದು ಆರೋಪಿಸಿದರು. ಸರ್ವೆ ಕಾರ್ಯವನ್ನು ಸ್ಥಗಿತಗೊಳಿಸದಿದ್ದಲ್ಲಿ ಭಾಗಮಂಡಲ ಹೋಬಳಿಯ ಎಲ್ಲಾ ಗ್ರಾಮಗಳ ಗ್ರಾಮಸ್ಥರು ಒಗ್ಗೂಡಿ ಅರಣ್ಯ ಇಲಾಖೆ ವಿರುದ್ಧ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಗ್ರಾಮಸ್ಥರ ಪರವಾಗಿ ಮಾತನಾಡಿದ ಮಡಿಕೇರಿ ತಾಲೂಕು ಲ್ಯಾಂಪ್ಸ್ ನಿರ್ದೇಶಕ ಹಾಗೂ ಬಿಜೆಪಿ ಎಸ್‍ಟಿ ಮೋರ್ಚಾದ ಅಧ್ಯಕ್ಷ ಮಿಟ್ಟು ರಂಜಿತ್ ಹಾಗೂ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಕಾಳನ ರವಿ ಅವರುಗಳು ಅರಣ್ಯ ಇಲಾಖೆ ಕಾರ್ಯವೈಖರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಕೊಡಗಿಗೆ ಮಾರಕವಾಗಿರುವ ಕಸ್ತೂರಿರಂಗನ್ ವರದಿಯ ಹೆಸರಿನಲ್ಲಿ ಅರಣ್ಯದ ಅಂಚಿನಲ್ಲಿರುವ ಗ್ರಾಮಗಳಲ್ಲಿ ಸರ್ವೆ ಕಾರ್ಯವನ್ನು ದಿಢೀರ್ ಆಗಿ ಆರಂಭಿಸಿರುವ ಅರಣ್ಯ ಇಲಾಖೆಯ ಅಧಿಕಾರಿಗಳು, ಆ ಜಾಗ ಅರಣ್ಯ ಇಲಾಖೆಗೆ ಸೇರಿದ್ದೆಂದು ಹೇಳುವ ಮೂಲಕ ವಿನಾ ಕಾರಣ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸುತ್ತಿದ್ದಾರೆ ಎಂದು ದೂರಿದರು. 

ಕಳೆದ 25-30 ವರ್ಷಗಳ ಹಿಂದೆ ಕಂದಾಯ ಜಮೀನಿನ ಪಕ್ಕದಲ್ಲಿದ್ದ ಜಮೀನನ್ನು ಅರಣ್ಯ ಇಲಾಖೆಯವರು ಸರ್ವೆ ಮಾಡಿ ತಮ್ಮ ಗಡಿ ಭಾಗ ಗುರುತಿಸಿ ಹದ್ದುಬಸ್ತು ಮಾಡಿ ಸೋಲಾರ್ ಬೇಲಿ ಅಳವಡಿಸಿದ್ದರೂ, ಇದೀಗ ಜನ ವಸತಿ ಇರುವ ಕಂದಾಯ ಜಾಗವನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರುಗಳು ಆರೋಪಿಸಿದರು.

ಗ್ರಾಮದ ಅರಣ್ಯದ ಅಂಚಿನಲ್ಲಿರುವ ಪ್ರದೇಶವು ಕಂದಾಯ ಜಾಗವಾಗಿದ್ದು, ಇಲ್ಲಿ ಸುಮಾರು 70-80 ವರ್ಷಗಳಿಂದ ಜನರು ಕೃಷಿ ಮಾಡಿಕೊಂಡು ವಾಸವಾಗಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಹಾಗೂ ಇತರ ಎಲ್ಲಾ ಜನಾಂಗದ ಕಡು ಬಡವರೇ ಈ ಪ್ರದೇಶದಲ್ಲಿದ್ದು ಅತ್ಯಂತ ಕಷ್ಟದಿಂದ ಕೂಲಿ ಮಾಡಿ ಜೀವನ ಸಾಗಿಸಿಕೊಂಡು ಬರುತ್ತಿದ್ದಾರೆ. ಈ ಪ್ರದೇಶಗಳಿಗೆ ಭಾಗಮಂಡಲ ಗ್ರಾಮ ಪಂಚಾಯತ್ ನಿಂದ ಮೂಲಭೂತ ಸೌಕರ್ಯಗಳಾದ ರಸ್ತೆ, ಕುಡಿಯುವ ನೀರು ಸೇರಿದಂತೆ ವಿವಿಧ ಸವಲತ್ತುಗಳನ್ನು ಒದಗಿಸಲಾಗಿದೆ. ಆದರೂ ಕೂಡ ಅರಣ್ಯ ಇಲಾಖೆಯವರು ಏಕಾಏಕಿ ಈ ಜಾಗ ಅರಣ್ಯಕ್ಕೆ ಸೇರಿದ್ದೆಂದು ಹೇಳಿಕೊಂಡು ಸರ್ವೆ ಕಾರ್ಯ ಆರಂಭಿಸಿದ್ದಾರೆ ಎಂದು ಟೀಕಿಸಿದರು.

ಕಳೆದ ಎರಡು ವರ್ಷಗಳ ಹಿಂದೆ ಇದೇ ರೀತಿ ಸರ್ವೆ ಕಾರ್ಯ ಆರಂಭಿಸಿದಾಗ, ಗ್ರಾಮಸ್ಥರು ಮೂರು ದಿನಗಳ ಕಾಲ ಅರಣ್ಯ ಇಲಾಖೆ ಕಚೇರಿ ಎದುರು ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದಾಗ ಮುಂದೆ ಈ ರೀತಿಯ ತೊಂದರೆ ಮಾಡುವುದಿಲ್ಲ ಎಂದು ಇಲಾಖೆಯ ಹಿರಿಯ ಅಧಿಕಾರಿಗಳು ಭರವಸೆ ನೀಡಿದ್ದರು. ಆದರೆ ಇದೀಗ ರಾಜ್ಯ ಸರಕಾರದ ಆದೇಶವಿದೆ ಎಂದು ಹೇಳಿಕೊಂಡು ಅಧಿಕಾರಿಗಳು ಸರ್ವೆ ಕಾರ್ಯ ಆರಂಭಿಸಿದ್ದು, ಗ್ರಾಮಸ್ಥರು ಕಷ್ಟಪಟ್ಟು ಬೆಳೆದಿರುವ ಕೃಷಿಯನ್ನೂ ಹಾಳುಗೆಡವಿದ್ದಾರೆ. ಜಾಗದ ವಾರಸುದಾರರು ಇಲ್ಲದಿರುವ ಸಂದರ್ಭದಲ್ಲಿ ಸರ್ವೆ ಕಾರ್ಯ ನಡೆಸುತ್ತಿದ್ದು, ಮನೆಯಲ್ಲಿರುವವರಿಂದ ಬಲವಂತವಾಗಿ ಸಹಿ ಮಾಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಅರಣ್ಯ ಇಲಾಖೆ ತೆಗೆದುಕೊಂಡಿರುವ ಜನವಿರೋಧಿ ಕ್ರಮದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಈ ಕ್ಷೇತ್ರದ ಸಂಸದರ ಗಮನ ಸೆಳೆಯುವುದಾಗಿ ರವಿ ತಿಳಿಸಿದರು. 

ಸುದ್ದಿಗೋಷ್ಠಿಯಲ್ಲಿ ಗ್ರಾಮಸ್ಥರಾದ ಕೆ.ಆರ್.ದಾಸಪ್ಪ, ದೇವಂಗೋಡಿ ಭಾಸ್ಕರ, ಕೆ.ಕೆ.ಪಾರ್ವತಿ ಹಾಗೂ ಕೆ.ಸಿ.ಸರಸ್ವತಿ ಉಪಸ್ಥಿತರಿದ್ದರು. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವ ಸಂದರ್ಭ ಗ್ರಾಮದ 20 ಕ್ಕೂ ಹೆಚ್ಚು ಕುಟುಂಬಗಳ ಸದಸ್ಯರು ಹಾಗೂ ಸ್ಥಳೀಯ ಬಿಜೆಪಿ ಪ್ರಮುಖರು ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X