ಶೀಘ್ರವೇ ನನ್ನ ಗ್ರಾಮ ವಾಸ್ತವ್ಯ ಆರಂಭ: ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು, ಜೂ. 2: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ‘ಶೀಘ್ರವೇ ನನ್ನ ಗ್ರಾಮ ವಾಸ್ತವ್ಯ ಪ್ರಾರಂಭವಾಗಲಿದೆ, ಸರಕಾರಿ ಶಾಲೆಗಳಲ್ಲಿ’ ಎಂದು ಇಂದಿಲ್ಲಿ ಪ್ರಕಟಿಸಿದ್ದಾರೆ.
‘ಜನರೊಂದಿಗೆ ಬೆರೆಯಲು, ಅವರ ಸಮಸ್ಯೆಗಳನ್ನು ಅರಿಯಲು, ಸರಕಾರದ ಕಾರ್ಯವೈಖರಿ ತಿಳಿಯಲು ನೆರವಾಗುವುದು ಗ್ರಾಮ ವಾಸ್ತವ್ಯ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.
ಈ ಹಿಂದೆ ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಗ್ರಾಮ ವಾಸ್ತವ್ಯ ಆರಂಭಿಸಿದ್ದ ಕುಮಾರಸ್ವಾಮಿ, ಇದರಿಂದ ಭಾರೀ ಜನಪ್ರಿಯತೆ ಪಡೆದುಕೊಂಡಿದ್ದರು. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರದಲ್ಲಿ ಮುಖ್ಯಮಂತ್ರಿಯಾದ ಬಳಿಕ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ನಡೆಸಿರಲಿಲ್ಲ.
ಇದೀಗ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳು ಹೀನಾಯ ಸೋಲಿನಿಂದ ಎಚ್ಚೆತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರಕ್ಕೆ 1ವರ್ಷ ಪೂರೈಸಿದ ಬಳಿಕ ಗ್ರಾಮ ವಾಸ್ತವ್ಯ ಆರಂಭಿಸಿರುವುದು ಸಾರ್ವಜನಿಕ ವಲಯದಲ್ಲಿ ಅಚ್ಚರಿ ಮೂಡಿಸಿದೆ.
Next Story





