Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಎಂ ಗ್ರಾಮ ವಾಸ್ತವ್ಯದ ಸ್ವರೂಪ ಬದಲು

ಸಿಎಂ ಗ್ರಾಮ ವಾಸ್ತವ್ಯದ ಸ್ವರೂಪ ಬದಲು

ವಾರ್ತಾಭಾರತಿವಾರ್ತಾಭಾರತಿ2 Jun 2019 8:02 PM IST
share
ಸಿಎಂ ಗ್ರಾಮ ವಾಸ್ತವ್ಯದ ಸ್ವರೂಪ ಬದಲು

ಬೆಂಗಳೂರು, ಜೂ. 2: ಗ್ರಾಮೀಣ ಪ್ರದೇಶದ ಜನರ ಸಮಸ್ಯೆಗಳ ಅಧ್ಯಯನ ಹಾಗೂ ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ದೃಷ್ಟಿಯಿಂದ ಮುಖ್ಯಮಂತ್ರಿ ಕುಮಾರಸ್ವಾಮಿ ಕೈಗೊಳ್ಳಲಿರುವ ಗ್ರಾಮ ವಾಸ್ತವ್ಯ ಕಳೆದ ಸಾಲಿನ ಗ್ರಾಮ ವಾಸ್ತವ್ಯಕ್ಕಿಂತ ಭಿನ್ನವಾಗಿ ಆಯೋಜನೆಗೊಳ್ಳಲಿದೆ.

ಸಿಎಂ ಕುಮಾರಸ್ವಾಮಿ ಸರಕಾರಿ ಶಾಲೆಯಲ್ಲಿ ವಾಸ್ತವ್ಯ ಮಾಡಲಿದ್ದು, ರೈತರು ಕಾರ್ಯಕ್ರಮದ ಆದ್ಯತಾ ವಲಯದಲ್ಲಿರುತ್ತಾರೆ. ರೈತರ ಹಿತವನ್ನು ಗಮನದಲ್ಲಿರಿಸಿ ಈವರೆಗಿನ ರೈತಪರ ಕಾರ್ಯಕ್ರಮಗಳಿಂದ ಕಂಡುಕೊಂಡ ಉತ್ತಮ ಅಂಶಗಳನ್ನು ರೈತರಿಗೆ ಹೇಳುವ ಮತ್ತು ಆಧುನಿಕ ಕೃಷಿ ಪದ್ಧತಿಗೆ ಪೂರಕ, ಯಾಂತ್ರೀಕೃತ ಕೃಷಿಗೆ ನೆರವು ಹಾಗೂ ರೈತ ಮಾಹಿತಿಗಳು ಗ್ರಾಮ ವಾಸ್ತವ್ಯ ಆದ್ಯತೆಯಾಗಲಿವೆ. ಸಿಎಂ ಭೇಟಿ ನೀಡುವ ಗ್ರಾಮಗಳಿಗೆ ಹಿರಿಯ ಅಧಿಕಾರಿಗಳ ತಂಡ ಭೇಟಿ ನೀಡಿ ಭೇಟಿ ನೀಡುವ ಮತ್ತು ಸುತ್ತಮುತ್ತಲ ಗ್ರಾಮಗಳ ಜನರ ಸಮಸ್ಯೆಗಳು, ಬೇಡಿಕೆ ಹಾಗೂ ನೆರವು ನೀಡಲು ಪೂರಕ ಸಮಗ್ರ ವರದಿಯನ್ನು ತಯಾರಿಸಲಿದ್ದಾರೆ. ಸಿಎಂ ಗ್ರಾಮ ವಾಸ್ತವ್ಯ ವೇಳೆ ಸ್ಥಳದಲ್ಲೆ ಹಲವು ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು. ನೀತಿ-ನಿರೂಪಣೆಗೂ ಇದು ಸಹಕಾರಿಯಾಗಲಿದೆ ಎನ್ನುವುದು ಕುಮಾರಸ್ವಾಮಿ ನಂಬಿಕೆಯಾಗಿದೆ.

ತಾವು ಉಳಿದುಕೊಂಡ ಗ್ರಾಮಕ್ಕೆ, ಜಿಲ್ಲೆಗೆ ಏನು ಬೇಕು? ಯಾವ ಇಲಾಖೆಯಿಂದ ಕೆಲಸ ಕಾರ್ಯಗಳು ಬಾಕಿ ಉಳಿದಿವೆ? ಎಂಬುದನ್ನು ಮನಗಂಡು ಸಮಸ್ಯೆಗಳ ಶಾಶ್ವತ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕೆನ್ನುವುದು ಮುಖ್ಯಮಂತ್ರಿ ಕುಮಾರಸ್ವಾಮಿಯವರ ಅಭಿಲಾಷೆಯಾಗಿದೆ.

ಗ್ರಾಮ ವಾಸ್ತವ್ಯದ ಹಿನ್ನೆಲೆ: ಕುಮಾರಸ್ವಾಮಿ ಮೊತ್ತ ಮೊದಲ ಗ್ರಾಮ ವಾಸ್ತವ್ಯ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಪಿ.ಕೆ.ನಾಗನೂರೆಂಬ ಹಳ್ಳಿಯಿಂದ ಆರಂಭವಾಯಿತು. ಕೃಷ್ಣೆಯಲ್ಲಿ ಪ್ರವಾಹ ಬಂದಾಗ ಪರಿಸ್ಥಿತಿ ಅವಲೋಕಿಸಲು ತೆರಳಿದ ಸಿಎಂ ಸಂಜೆ ಆರು ಗಂಟೆಗೆ ಬೆಳಗಾವಿಗೆ ಹೊರಡಲು ಹೆಲಿಕಾಪ್ಟರ್ ಹೊರಡಿಸಿ ಎಂದು ಜಿಲ್ಲಾಧಿಕಾರಿ ಅವಸರಿಸುತ್ತಿದ್ದರು. ಸಿಎಂ ಕುಮಾರಸ್ವಾಮಿ ಕಾರಣ ಕೇಳಿದಾಗ ಇಲ್ಲೆಲ್ಲೂ ತಂಗಲು ಸ್ಥಳವಿಲ್ಲವಾದ್ದರಿಂದ ಬೆಳಗಾವಿಗೆ ಹೊರಡುವುದು ಅನಿವಾರ್ಯ ಎಂದರು. ಆಗ ಸಿಎಂ ಇಲ್ಲೇ ಹತ್ತಿರ ಯಾರ ಮನೆಯಲ್ಲಾದರೂ ತಂಗುವ ಎಂದು ಪ್ರತಿಕ್ರಿಯಿಸಿದರು.

ಸ್ಥಳದಲ್ಲೇ ಉಪಸ್ಥಿತರಿದ್ದ ಶಾಸಕರು ನಾಗನೂರಿನಲ್ಲೊಂದು ಮಠದಲ್ಲಿ ತಂಗಲು ಅವಕಾಶವಿರುವುದಾಗಿ ಹೇಳಿದರು. ಬಳಿಕ ನೆರೆ ಬಂದ ಕೃಷ್ಣೆಯನ್ನು ಮೂರು ಟ್ರ್ಯಾಕ್ಟರ್‌ಗಳಲ್ಲಿ ದಾಟಿ ನಾಗನೂರಿಗೆ ಬಂದು ಮಠದಲ್ಲಿ ವಾಸ್ತವ್ಯ ಮಾಡಿದ್ದು ಸಿಎಂ ಕುಮಾರಸ್ವಾಮಿ ಅವರ ಮೊದಲ ಗ್ರಾಮ ವಾಸ್ತವ್ಯ.

ಅಂದು ಊರ ಜನರೊಂದಿಗೆ ಇದ್ದು ಅಲ್ಲಿನವರೊಂದಿಗೆ ಬೆರೆತು ಅಲ್ಲಿನ ಜನರ ಕಷ್ಟಸುಖಗಳ ಪರಿಚಯವನ್ನು ಸಿಎಂ ಮಾಡಿಕೊಂಡದ್ದು ಇತಿಹಾಸ. ಮುಖ್ಯಮಂತ್ರಿ ತಮ್ಮ 20 ತಿಂಗಳ ಆಡಳಿತಾವಧಿಯಲ್ಲಿ 47 ಗ್ರಾಮ ವಾಸ್ತವ್ಯ ಮಾಡಿದ್ದಾರೆ ಎಂದು ತಿಳಿಸಲಾಗಿದೆ.

ಎಚ್‌ಐವಿ ಪೀಡಿತರ ಮನೆ ವಾಸ್ತವ್ಯಕ್ಕೆ ‘ರಿಚರ್ಡ್ ಗೇರ್’ ಮೆಚ್ಚುಗೆ: ನಂತರದ ದಿನಗಳಲ್ಲಿ ವಿಜಯಪುರದ ಎಚ್‌ಐವಿ ಪೀಡಿತರೊಬ್ಬರ ಮನೆಯನ್ನು ಆರಿಸಿಕೊಂಡು, ಎಚ್‌ಐವಿ ಪೀಡಿತರ ಕುರಿತ ಸಮಾಜದ ತಪ್ಪು ನಂಬಿಕೆಗಳನ್ನು ದೂರ ಮಾಡಿದರು.

ಈ ಘಟನೆಯನ್ನು ಓದಿದ ಹಾಲಿವುಡ್ ನಟ, ಎಚ್‌ಐವಿ ಜಾಗೃತಿ ಮೂಡಿಸುವ ರಾಯಭಾರಿಯೂ ಆಗಿದ್ದ ರಿಚರ್ಡ್ ಗೇರ್ ಅವರು ಈ ಘಟನೆಯಿಂದ ಪ್ರಭಾವಿತರಾಗಿ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದು ಗ್ರಾಮ ವಾಸ್ತವ್ಯದ ಅಪರೂಪದ ಅನುಭವಗಳಲ್ಲೊಂದಾಗಿ ದಾಖಲಾಯಿತು.

ತಮ್ಮ ಆಡಳಿತಾವಧಿಯ ಅತ್ಯುತ್ತಮ ಅನುಭವಗಳು ಗ್ರಾಮ ವಾಸ್ತವ್ಯದಿಂದ ದೊರೆಯಿತಲ್ಲದೆ ಹಲವು ಯೋಜನೆಗಳನ್ನು ರೂಪಿಸಲು ಪ್ರೇರಣೆಯೂ ದೊರೆತಿದ್ದು ಗ್ರಾಮ ವಾಸ್ತವ್ಯದಿಂದಲೇ ಎಂಬುದು ಮುಖ್ಯಮಂತ್ರಿ ಕುಮಾರಸ್ವಾಮಿ ಅನುಭವ ಎಂದು ಗೊತ್ತಾಗಿದೆ.

ಕಾರ್ಯಕ್ರಮ ರೂಪಿಸಲು ಗ್ರಾಮ ವಾಸ್ತವ್ಯ ನೆರವು: ಗ್ರಾಮ ವಾಸ್ತವ್ಯದಿಂದಾಗಿ ಸುಮಾರು ಸಾವಿರದಷ್ಟು ಪ್ರೌಢಶಾಲೆಗಳು, ಸುಮಾರು 500ರಷ್ಟು ಪಿಯು ಹಾಗೂ ಪದವಿ ಕಾಲೇಜುಗಳ ಸ್ಥಾಪನೆಗೆ ಕಾರಣವಾಯಿತು. ಸಾಲಮನ್ನಾ, ಸಾರಾಯಿ ನಿಷೇಧ, ಲಾಟರಿ ನಿಷೇಧ, ಅಂಗವಿಕಲರಿಗೆ ಮಾಸಾಶನ ಸೌಲಭ್ಯಗಳು ಗ್ರಾಮ ವಾಸ್ತವ್ಯದ ಕೊಡುಗೆಗಳು ಎಂದು ಸಿಎಂ ಕಚೇರಿ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X