ಲೈಂಗಿಕ ಕಿರುಕುಳ ಆರೋಪ: ಯುವಕ ಸೆರೆ

ಬೆಂಗಳೂರು, ಜೂ.2:ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ಯುವಕನೋರ್ವನನ್ನು ಇಲ್ಲಿನ ಜೀವನ್ ಭೀಮಾನಗರದ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಶ್ರೀನಿವಾಸರೆಡ್ಡಿ ಎಂಬಾತನನ್ನು ಪೊಲೀಸರು ಬಂಧಿಸಿ, ಐಪಿಸಿ ಸೆಕ್ಷನ್ 354 (ಲೈಂಗಿಕ ಕಿರುಕುಳ) 506(ಜೀವ ಬೆದರಿಕೆ) ಪ್ರಕರಣ ದಾಖಲು ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಆರೋಪಿ ಜೀವನ್‌ಭೀಮಾನಗರ, ಹಲಸೂರು, ದೊಮ್ಮಲೂರು ಪಾರ್ಕ್ ಪ್ರದೇಶಗಳಲ್ಲಿ ರಾತ್ರಿ ವೇಳೆ ಸಂಚರಿಸಿ ಪಾದಚಾರಿ ಯುವತಿಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಎಂದು ಹೇಳಲಾಗಿದೆ. ಉತ್ತರ ಭಾರತ ಮೂಲದ ಯುವತಿಯರನ್ನೇ ಗುರಿಯಾಗಿಸಿಕೊಂಡು ಇಂತಹ ಚಟುವಟಿಕೆ ನಡೆಸುತ್ತಿದ್ದ ಎಂದು ತಿಳಿದುಬಂದಿದೆ. ಕಳೆದ 3 ದಿನಗಳ ಹಿಂದೆ ಯುವತಿಯೊಬ್ಬರು ನೀಡಿದ ಮಾಹಿತಿ ಆಧರಿಸಿ ಈತನ ವಿರುದ್ಧ ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.
Next Story





