ಲೈಂಗಿಕ ಕಿರುಕುಳದಿಂದ ಮನನೊಂದ ಬಾಲಕಿ ಬೆಂಕಿ ಹಚ್ಚಿ ಆತ್ಮಹತ್ಯೆ

ನಾಗೌರ್,ಜೂ.2: ವ್ಯಕ್ತಿಯೋರ್ವನಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದ 17ರ ಹರೆಯದ ಬಾಲಕಿಯೋರ್ವಳು ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು,ಬೆಂಕಿಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ನಾಗೌರ್ ಜಿಲ್ಲೆಯಲ್ಲ್ಲಿ ಸಂಭವಿಸಿದೆ.
ಈ ಬಗ್ಗೆ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ. ಮರಣೋತ್ತರ ಪರೀಕ್ಷೆಯ ಬಳಿಕ ಶವವನ್ನು ಹೆತ್ತವರಿಗೆ ಒಪ್ಪಿಸಲಾಗಿದೆ ಎಂದು ತಿಳಿಸಿದ ಪೊಲೀಸರು, ಬಾಲಕಿಗೆ ಲೈಂಗಿಕ ಕಿರುಕುಳದ ವಿರುದ್ಧ ಆಕೆಯ ತಂದೆ ಕಳೆದ ಮೇ ಆರಂಭದಲ್ಲಿ ದೂರು ಸಲ್ಲಿಸಿದ್ದರು. ಪೋಕ್ಸೊ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿತ್ತು. ಪ್ರಕರಣ ತನಿಖಾ ಹಂತದಲ್ಲಿರುವಾಗಲೇ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದರು.
Next Story





