Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜನತೆ ಕಾಂಗ್ರೆಸ್ ಪರವಾಗಿದ್ದಾರೆ...

ಜನತೆ ಕಾಂಗ್ರೆಸ್ ಪರವಾಗಿದ್ದಾರೆ ಎಂಬುದಕ್ಕೆ ಸ್ಥಳೀಯ ಸಂಸ್ಥೆಗಳ ಫಲಿತಾಂಶವೇ ಸಾಕ್ಷಿ: ಸಚಿವ ಕೆ.ಜೆ.ಜಾರ್ಜ್

ಕಾಂಗ್ರೆಸ್ ಮುಖಂಡರು-ಕಾರ್ಯಕರ್ತರ ಸಭೆ

ವಾರ್ತಾಭಾರತಿವಾರ್ತಾಭಾರತಿ2 Jun 2019 10:18 PM IST
share
ಜನತೆ ಕಾಂಗ್ರೆಸ್ ಪರವಾಗಿದ್ದಾರೆ ಎಂಬುದಕ್ಕೆ ಸ್ಥಳೀಯ ಸಂಸ್ಥೆಗಳ ಫಲಿತಾಂಶವೇ ಸಾಕ್ಷಿ: ಸಚಿವ ಕೆ.ಜೆ.ಜಾರ್ಜ್

ಚಿಕ್ಕಮಗಳೂರು, ಜೂ.21: ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲೆಡೆ ಕಾಂಗ್ರೆಸ್ ಪರ ಜನಬೆಂಬಲ ಇತ್ತು. ಆದರೆ ಭಾರೀ ಸೋಲುಂಟಾಗಿರುವುದು ಏಕೆ ಎಂಬುದು ಅರ್ಥವಾಗುತ್ತಿಲ್ಲ. ಈ ಚುನಾವಣೆಯ ಸೋಲಿನಿಂದ ಹತಾಶರಾಗುವುದು ಬೇಡ. ಕಾಂಗ್ರೆಸ್ ಪರವಾಗಿ ಜನತೆ ಒಲವು ಹೊಂದಿದ್ದಾರೆ ಎಂಬುದಕ್ಕೆ ನಗರ ಸ್ಥಳೀಯ ಸಂಸ್ಥೆಗಳಲ್ಲಿ ದೊರೆತ ಫಲಿತಾಂಶವೇ ಸಾಕ್ಷಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿನ ತಮ್ಮ ಕ್ಷೇತ್ರದಲ್ಲೇ ನಲವತ್ತೆಂಟು ಸಾವಿರ ಮತ ದೊರೆತಿತ್ತು. ಆದರೆ ಉಳಿದೆಡೆ ಏಕೆ ಕಾಂಗ್ರೆಸ್ಸಿಗೆ ಹಿನ್ನಡೆಯಾಯಿತು ಎಂಬುವುದು ಗೊತ್ತಾಗುತ್ತಿಲ್ಲ. ಲೋಕಸಭಾ ಚುನಾವಣೆಯ ಅಂತಹ ಫಲಿತಾಂಶವನ್ನು ನಿರೀಕ್ಷಿಸಿರಲಿಲ್ಲ. ಪ್ರಚಾರದ ವೇಳೆ ಎಲ್ಲಡೆ ಜನ ಬೆಂಬಲ ಕಂಡುಬಂದರೂ ಫಲಿತಾಂಶ ಏಕೆ ವ್ಯತಿರಿಕ್ತವಾಯಿತು ಎಂಬುವುದು ಗೊತ್ತಿಲ್ಲ ಎಂದರು.

ಕಳೆದ ಆರು ತಿಂಗಳ ಹಿಂದೆ ಬಳ್ಳಾರಿಯಲ್ಲಿ ನಡೆದ ಉಪಚುನಾವಣೆಯಲ್ಲಿ ಉಗ್ರಪ್ಪ ಅವರು ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು, ಆದರೆ ಈ ಚುನಾವಣೆಯಲ್ಲಿ ಸೋತಿದ್ದಾರೆ. ಅಂದರೆ ಈ ಆರು ತಿಂಗಳಲ್ಲಿ ಅವರು ಮಾಡಿದ ತಪ್ಪೇನು ಎಂದು ಪ್ರಶ್ನಿಸಿದ ಅವರು, ಲೋಕಸಭಾ ಚುನಾವಣೆ ನಡೆದು ಕೆಲವೇ ದಿನಗಳಲ್ಲಿ ನಡೆದ ನಗರ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯಾದ್ಯಂತ ಗೌರವದ ಸ್ಥಾನಗಳನ್ನು ಪಡೆದಿದೆ. ಅದು ಕೂಡ ನಗರ ಪ್ರದೇಶದಲ್ಲಿ ಬಿಜೆಪಿ ಪರವಾದ ಒಲವು ಹೊಂದಿದ ಮತದಾರರಿರುತ್ತಾರೆ ಎಂದು ಹೇಳಲಾಗುತ್ತಿದ್ದರೂ ಜನತೆ ಕಾಂಗ್ರೆಸ್‍ಗೆ ಮತ ನೀಡಿದ್ದಾರೆ. ಮಾಧ್ಯಮಗಳು, ಬಿಜೆಪಿಯವರು ಜನತೆ ಮೋದಿ ನೋಡಿ ಮತ ನೀಡಿದ್ದಾರೆ ಎನ್ನುತ್ತಾರೆ. ಹಾಗಾದರೆ ಕಳೆದ ಐದು ವರ್ಷದಲ್ಲಿ ಮೋದಿ ಕೊಡುಗೆ ಏನು?, ಜನಪರವಾದ ಯಾವ ಕಾರ್ಯಕ್ರಮ ಜಾರಿಗೊಳಿಸಿದ್ದಾರೆ. ಬಡಜನರ ಸಂಕಷ್ಟ ನಿವಾರಣೆಗೆ ಅವರ ಪ್ರಯತ್ನ ಏನು ಎಂಬ ಪ್ರಶ್ನೆಗಳಿಗೆ ಉತ್ತರವಿಲ್ಲದಂತಾಗಿದೆ ಎಂದು ಜಾರ್ಜ್ ಹೇಳಿದರು.

ಲೋಕಸಭಾ ಚುನಾವಣೆಯ ಫಲಿತಾಂಶದಿಂದ ಧೃತಿಗೆಡುವ ಅಗತ್ಯವಿಲ್ಲ. ಅಂತಹ ಫಲಿತಾಂಶದ ನಡುವೆಯೂ ಕಾಂಗ್ರೆಸ್ ಕಾರ್ಯಕರ್ತರು ಕೆಲಸ ಮಾಡಿ ನಗರ ಪ್ರದೇಶದ ಸ್ಥಳೀಯ ಸಂಸ್ಥೆಗಳಲ್ಲಿ ಸಾಧನೆ ತೋರಿದ್ದಾರೆ. ಕಾರ್ಯಕರ್ತರು ಸದಾ ಜನರ ಜೊತೆಗಿದ್ದರೆ ಗೆಲುವು ನಮ್ಮದೆ. ಸೋಲು, ಗೆಲುವು ಸಹಜ. ಈ ಹಿಂದೆ ಇಂದಿರಾಗಾಂಧಿ ಅಂತಹವರೇ ಸೋಲು ಕಂಡಿದ್ದರು. ಆದರೆ ಒಂದೇ ವರ್ಷದಲ್ಲಿ ಮತ್ತೆ ಜಯ ಸಾಧಿಸಿದ್ದರು ಎಂದು ನೆನಪು ಮಾಡಿಕೊಂಡ ಜಾರ್ಜ್, ಚುನಾವಣೆಗಳು ನಿರಂತರ. ಈಗ ನಡೆದ ಚುನಾವಣೆಯ ಜೊತೆಗೆ ಜಿಲ್ಲೆಯಲ್ಲಿ ನಗರಸಭೆ ಸೇರಿದಂತೆ ಬೀರೂರು ಮತ್ತು ತರೀಕೆರೆ ಪುರಸಭೆಗಳಿಗೆ ಚುನಾವಣೆ ನಡೆಯಲಿದೆ. ಅದನ್ನು ಸಮರ್ಥವಾಗಿ ಎದುರಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕೆಂದರು.

ಜಿಲ್ಲಾಕಾಂಗ್ರೆಸ್ ಅಧ್ಯಕ್ಷ ಡಾ. ವಿಜಯಕುಮಾರ್ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಮೈತ್ರಿಯಿಂದ ಯಶಸ್ಸು ದೊರೆಯಬಹುದು ಎಂದು ಭಾವಿಸಿದ್ದು ನಿಜವಾಗಲಿಲ್ಲ. ಮುಂದಿನ ದಿನಗಳಲ್ಲಿ ಪಕ್ಷವನ್ನು ಇನ್ನಷ್ಟು ಪ್ರಬಲವಾಗಿ ಸಂಘಟಿಸಲು ಮುಂದಾಗಬೇಕು. ಹೋರಾಟ ನಿರಂತರವಾಗಿರಲಿದೆ. ಕಳೆದ ಬಾರಿಗಿಂತ ಈ ಬಾರಿ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನವನ್ನು ಕಾಂಗ್ರೆಸ್ ಪಡೆದಿರುವುದು ಜನರ ಮನಸ್ಸಿನಲ್ಲಿ ಕಾಂಗ್ರೆಸ್ ಭದ್ರವಾಗಿ ನೆಲೆಯೂರಿರುವುದಕ್ಕೆ ಸಾಕ್ಷಿಯಾಗಿದೆ. ಕಾಂಗ್ರೆಸ್ ಮುಕ್ತ ಭಾರತ ಬಿಜೆಪಿಯವರ ತಿರುಕನ ಕನಸಾಗಿದೆ ಎಂದು ವ್ಯಂಗ್ಯವಾಡಿದರು.

ಸಭೆಯಲ್ಲಿ ಮಾಜಿ ಸಚಿವ ಸಗೀರ್ ಅಹ್ಮದ್, ಎಂ.ಎಲ್.ಮೂರ್ತಿ, ರೇಖಾ ಹುಲಿಯಪ್ಪಗೌಡ, ಕೆಂಪನಹಳ್ಳಿ ಮಂಜುನಾಥ್, ಶಿವಾನಂದ ಸ್ವಾಮಿ ಮತ್ತಿತರರು ಭಾಗಿಯಾಗಿದ್ದರು.

ವಂಶಪಾರಂಪರ್ಯ ಅಧಿಕಾರ ಎಂಬ ಬಿಜೆಪಿ ಟೀಕೆಯನ್ನು ಪ್ರಸ್ತಾಪಿಸಿದ ಜಾರ್ಜ್, ಕಾಂಗ್ರೆಸ್ ಹೋರಾಟದ ಪಕ್ಷ. ಸ್ವಾತಂತ್ರ್ಯ ಪೂರ್ವದಿಂದಲೂ ಹೋರಾಟದ ಮೂಲಕವೇ ಜನ ಹಾಗೂ ಪಕ್ಷ ಸಂಘಟನೆ ಮಾಡುತ್ತಿದೆ. ಮೋತಿಲಾಲ್ ನೆಹರು ಅವರು ಆಗರ್ಭ ಶ್ರೀಮಂತರು. ಬ್ಯಾರಿಷ್ಟರ್ ಆಗಿದ್ದವರು. ಆಗಿನ ಕಾಲದಲ್ಲೇ ಲಕ್ಷಾಂತರ ಆದಾಯ ಹೊಂದಿದವರು. ಅದನ್ನು ಬಿಟ್ಟುಬಂದು ದೇಶದ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗಿಯಾದವರು. ಅವರ ಪುತ್ರ ಜವಹರಲಾಲ್ ನೆಹರು ಕೂಡ ಸ್ವಾತಂತ್ರ್ಯ ಹೋರಾಟ ನಡೆಸಿ ಹದಿನೇಳು ವರ್ಷ ಜೈಲು ವಾಸ ಅನುಭವಿಸಿದವರು. ಆನಂತರ ಪ್ರಧಾನಿಯಾಗಿ ದೇಶಕ್ಕೆ ಸ್ಪಷ್ಟ ಅಡಿಪಾಯ ಹಾಕಿದವರು. ಇಂದಿರಾಗಾಂಧಿ ಕೂಡ ದೇಶವನ್ನು ಸಮರ್ಥವಾಗಿ ಮುನ್ನಡೆಸಿದ್ದು, ಅವರ ಪುತ್ರ ರಾಜೀವ್‍ಗಾಂಧಿ ಕೂಡ ಪ್ರಧಾನಿ ಆಗಿದ್ದವರು. ಸಾಮರ್ಥ್ಯವೇ ಅವರುಗಳನ್ನು ಆ ಉನ್ನತ ಹುದ್ದೆಗೆ ತಂದಿದೆ. ಅಧಿಕಾರಕ್ಕಾಗಿ ಆ ಕುಟುಂಬ ಎಂದೂ ಹಾತೊರಿದಿಲ್ಲ. ಸೋನಿಯಗಾಂಧಿ ಅವರು ಕಾಂಗ್ರೆಸ್ಸಿನ ಎಲ್ಲಾ ಸಂಸದರೂ ಒತ್ತಾಯಿಸಿದರೂ ಪ್ರಧಾನಿ ಹುದ್ದೆ ಬೇಡವೆಂದು ತಿರಸ್ಕರಿಸಿದವರು ಎಂದು ನೆಹರು ಕುಟುಂಬದ ಇತಿಹಾಸ ಬಿಡಿಸಿಟ್ಟರು. ಕಾಂಗ್ರೆಸ್ ಸದಾ ಜನರೊಂದಿಗೆ ಇರಬೇಕು. ಕಾರ್ಯಕರ್ತರು ಬೂತ್ ಹಂತದ ಜನರ ಸಮಸ್ಯೆ ಆಲಿಸಿ ಪರಿಹರಿಸುವ ಪ್ರಯತ್ನ ಮಾಡಬೇಕೆಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X