Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅತಿಸಾರ ಭೇದಿ: ಸರಳ ಮಾರ್ಗೋಪಾಯದ ಮೂಲಕ...

ಅತಿಸಾರ ಭೇದಿ: ಸರಳ ಮಾರ್ಗೋಪಾಯದ ಮೂಲಕ ಮಕ್ಕಳ ರಕ್ಷಣೆ ಸಾಧ್ಯ- ಜಾವೇದ್ ಅಖ್ತರ್

ಅತಿಸಾರ ಭೇದಿ ನಿಯಂತ್ರಣಾ ಪಾಕ್ಷಿಕ ಕಾರ್ಯಕ್ರಮಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ3 Jun 2019 8:33 PM IST
share
ಅತಿಸಾರ ಭೇದಿ: ಸರಳ ಮಾರ್ಗೋಪಾಯದ ಮೂಲಕ ಮಕ್ಕಳ ರಕ್ಷಣೆ ಸಾಧ್ಯ- ಜಾವೇದ್ ಅಖ್ತರ್

ಬೆಂಗಳೂರು, ಜೂ.3: ಅತಿಸಾರ ಭೇದಿ ರೋಗವನ್ನು ಸುಲಭವಾಗಿ ತಡೆಗಟ್ಟಬಹುದಾಗಿದ್ದು, ಸಕಾಲದಲ್ಲಿ ಸರಳ ಮಾರ್ಗೋಪಾಯ ಅನುಸರಿಸುವುದರಿಂದ ಮಕ್ಕಳನ್ನು ಸಾವಿನಿಂದ ರಕ್ಷಿಸಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್ ಹೇಳಿದರು.

ಸೋಮವಾರ ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಭಾಂಗಣದಲ್ಲಿ ಇಂದಿನಿಂದ ಜೂ.17 ವರೆಗೆ ರಾಜ್ಯ ವ್ಯಾಪ್ತಿ ಆಚರಿಸಲಾಗುತ್ತಿರುವ ತೀವ್ರ ಅತಿಸಾರ ಭೇದಿ ನಿಯಂತ್ರಣಾ ಪಾಕ್ಷಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ದಿನದಲ್ಲಿ ಸಾಮಾನ್ಯಕ್ಕಿಂತಲೂ ಹೆಚ್ಚು ಬಾರಿ ಹಾಗೂ ನೀರಾಗಿ ಮಲವಿಸರ್ಜನೆ ಮಾಡುವುದನ್ನು ಅತಿಸಾರ ಭೇದಿ ಎಂದು ಗುರುತಿಸಬಹುದಾಗಿದೆ. ಸಾಮಾನ್ಯವಾಗಿ ಬೇಸಿಗೆ ಕಾಲದಲ್ಲಿ ಮತ್ತು ಮಳೆಗಾಲದಲ್ಲಿ ಅತಿಸಾರ ಭೇದಿ ರೋಗದಿಂದ ಬಳಲುವ ಮಕ್ಕಳ ಸಂಖ್ಯೆ ಹೆಚ್ಚಾಗಿ ಕಾಣಬಹುದು. ಬಡತನ ರೇಖೆಗಿಂತಲೂ ಕೆಳಗಿರುವ ಕುಟುಂಬಗಳಲ್ಲಿ ರೋಗದ ತೀವ್ರತೆ ಅಧಿಕವಾಗಿ ಕಂಡು ಬರುತ್ತದೆ ಎಂದರು. ವೈದ್ಯರ ಮಾರ್ಗದರ್ಶನದಲ್ಲಿ ಓಆರ್‌ಎಸ್ ಎಂದೇ ಕರೆಯಲ್ಪಡುವ ಓರಲ್ ರೀ-ಹೈಡ್ರೇಷನ್ ಸಲೂಷನ್ ಮತ್ತು ಜಿಂಕ್ ಮಾತ್ರೆಗಳನ್ನು ಸೇವಿಸುವುದರಿಂದ ಅತಿಸಾರ ಭೇದಿಯ ಪರಿಣಾಮ ದೇಹದಲ್ಲಿ ಉಂಟಾಗುವ ನಿರ್ಜಲೀಕರಣವನ್ನು ನಿಯಂತ್ರಿಸಬಹುದು. ಶುದ್ಧ ಕುಡಿಯುವ ನೀರು, ಕೈಗಳ ಶುಚಿತ್ವ, ಶೌಚಾಲಯ ಉಪಯೋಗ, ಪರಿಸರ ನೈರ್ಮಲ್ಯ, ಲಸಿಕೆಗಳನ್ನು ಹಾಕಿಸುವುದು, ಪೌಷ್ಠಿಕ ಆಹಾರ ಹಾಗೂ ಸರಿಯಾಗಿ ಎದೆ ಹಾಲು ಉಣಿಸುವುದರಿಂದ ಮಕ್ಕಳಲ್ಲಿ ಅತಿಸಾರ ಭೇದಿಯನ್ನು ತಡೆಗಟ್ಟಬಹುದೆಂದು ಅವರು ಹೇಳಿದರು.

ತೀವ್ರತರ ಅತಿಸಾರ ಭೇದಿಯಿಂದ ಶೂನ್ಯ ಮಕ್ಕಳ ಮರಣ ಎಂಬ ಧ್ಯೇಯ ವಾಕ್ಯ ಹೊತ್ತ ಈ ಪಾಕ್ಷಿಕದಲ್ಲಿ ರಾಜ್ಯದ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, ತಾಲೂಕು ಆಸ್ಪತ್ರೆಗಳಲ್ಲಿ ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಹಾಗೂ ವೈದ್ಯಕೀಯ ಮಹಾದ್ಯಾಲಯಗಳಲ್ಲಿ ಅತಿಸಾರ ಭೇದಿ ನಿಯಂತ್ರಣ ಚಿಕಿತ್ಸೆಯ ಸೌಲಭ್ಯವಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಪಂಕಜ್ ಕುಮಾರ್ ಪಾಂಡೆ, ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕ ಡಿ.ಎಸ್.ರಮೇಶ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕ ಡಾ.ಟಿ.ಎಸ್.ಪ್ರಭಾಕರ್, ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಪರ ನಿರ್ದೇಶಕ ಡಾ.ಓಂ.ಪ್ರಕಾಶ್ ಪಾಟೀಲ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕ ಎನ್ ಭೃಂಗೀಶ್, ಬೆಂ.ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್.ಪ್ರಕಾಶ್ ಸೇರಿದಂತೆ ಪ್ರಮುಖರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X