ಉಡುಪಿ: 7ಕ್ಕೆ ಸಿಇಟಿ, ನೀಟ್ ಅಭ್ಯರ್ಥಿಗಳಿಗೆ ಮಾರ್ಗದರ್ಶನ ಶಿಬಿರ
ಉಡುಪಿ, ಜೂ.3: ಪರ್ಕಳದ ನೇತಾಜಿ ಸ್ಪೋರ್ಟ್ಸ್ ಕ್ಲಬ್ ಹಾಗೂ ಉಡುಪಿ ಬನ್ನಂಜೆಯ ಬಿಲ್ಲವರ ಸೇವಾಸಂಘಗಳ ಜಂಟಿ ಆಶ್ರಯದಲ್ಲಿ ಮಂಗಳೂರಿನ ಕೆರಿಯರ್ ಗೈಡೆನ್ಸ್ ಎಂಡ್ ಇನ್ಫೋರ್ಮೇಶನ್ ಸೆಂಟರ್‌ನಿಂದ ಉಡುಪಿಯಲ್ಲಿ ಸಿಇಟಿ ಮತ್ತು ನೀಟ್ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಉಪಯುಕ್ತವಾದ ಮಾರ್ಗದರ್ಶನ ಶಿಬಿರವೊಂದನ್ನು ಆಯೋಜಿಸಿದೆ.
ಕಾರ್ಯಕ್ರಮ ಜೂ.7ರ ಶುಕ್ರವಾರ ಅಪರಾಹ್ನ 2:30ಕ್ಕೆ ಬನ್ನಂಜೆಯಲ್ಲಿರುವ ಬಿಲ್ಲವರ ಸೇವಾ ಸಂಘದ ಶಿವಗಿರಿ ಸಭಾಂಗಣದಲ್ಲಿ ಕೌನ್ಸಿಲಿಂಗ್ ಪೂರ್ವ ಮಾರ್ಗದರ್ಶನ ಕಾರ್ಯಕ್ರಮ ನಡೆಯಲಿದೆ. ಈ ಬಾರಿ ಸಿಇಟಿ ಹಾಗೂ ನೀಟ್ ಪ್ರವೇಶ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಇದರಲ್ಲಿ ಪಾಲ್ಗೊಳ್ಳಬಹುದು.
ಶಿಬಿರದಲ್ಲಿ ವೈದ್ಯಕೀಯ, ದಂತವೈದ್ಯಕೀಯ, ಆಯುರ್ವೇದ, ಯುನಾನಿ, ಹೋಮಿಯೋಪಥಿ,ಯೋಗ,ನ್ಯಾಚುರೋರಪಥಿ,ಬಿ.ಫಾರ್ಮ, ಫಾರ್ಮಡಿ, ಇಂಜಿನಿಯರಿಂಗ್‌ಮತ್ತುಫಾಮ ಸಾರ್ಯನ್ಸ್‌ನ ವಿವಿಧ ಕೋರ್ಸುಗಳಿಗೆ ನಡೆಯಲಿರುವ ಆನ್‌ಲೈನ್‌ಸಿಇಟಿ/ನೀಟ್ಕೌನ್ಸಿಲಿಂಗ್‌ನ ವಿಧಾನ, ದಾಖಾತಿ ಪರಿಶೀಲನೆ, ಬೇಕಾಗಿರುವ ಅಗತ್ಯ ದಾಖಲೆಗಳು, ಸೀಟುಗಳ ಆಯ್ಕೆ ಪ್ರಕ್ರಿಯೆ ಮತ್ತು ಇತರ ಪೂರಕ ಮಾಹಿತಿ ನೀಡಲಾಗುವುದು ಎಂದು ಬಿಲ್ಲವರ ಸೇವಾ ಸಂಘದ ಅಧ್ಯಕ್ಷ ನರಸಿಂಹ ತಿಳಿಸಿದ್ದಾರೆ.





