ನಿವೃತ್ತ ಪೊಲೀಸ್ ಅಧಿಕಾರಿಗಳ ಕುಟುಂಬಕ್ಕೆ ಉಚಿತ ನೇತ್ರ ತಪಾಸಣೆ
ಉಡುಪಿ, ಜೂ.3: ಉಡುಪಿ ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರಿಗೆ ಹಾಗೂ ಅವರ ಕುಟುಂಬ ವರ್ಗದವರಿಗೆ ಉಚಿತವಾಗಿ ನೇತ್ರ ತಪಾಸಣಾ ಶಿಬಿರ ಜೂ.16ರಂದು ಬೆಳಗ್ಗೆ 10 ಗಂಟೆಗೆ ಉಡುಪಿಯ ಪ್ರಸಾದ್ ನೇತ್ರಾಲಯದಲ್ಲಿ ನಡೆಯಲಿದೆ.
ಈ ಶಿಬಿರದಲ್ಲಿ ಉಚಿತ ನೇತ್ರ ತಪಾಸಣೆ, ಉಚಿತ ಸ್ಯಾಂಪಲ್ ಔಷಧ, ಹೆಚ್ಚಿನ ರಿಯಾಯಿತಿ ದರದಲ್ಲಿ ಕಣ್ಣು ಪರೀಕ್ಷಿಸಿ, ಕಣ್ಣಿನ ಶಸ್ತ್ರಚಿಕಿತ್ಸೆ ಇತ್ಯಾದಿ ರಿಯಾಯಿತಿ ದರದಲ್ಲಿ ಕನ್ನಡಕಗಳು ಲಭ್ಯವಿರುತ್ತದೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ನಿವೃತ್ತ ಪೊಲೀಸ್ ಅಧಿಕಾರಿಗಳು ಈ ಸೌಲಭ್ಯ ಪಡೆದುಕೊಳ್ಳುವಂತೆ ಸಂಘದ ಅಧ್ಯಕ್ಷ ಡಾ.ಪ್ರಭುದೇ ಬಿಮಾನೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





