ಸೊರ್ನಾಡು: ಮಣ್ಣಿನ ದಿಬ್ಬಕ್ಕೆ ಗುದ್ದಿದ ಬಸ್; 23 ಮಂದಿಗೆ ಗಾಯ

ಬಂಟ್ವಾಳ, ಜೂ. 3: ಮೂಡುಬಿದಿರೆಯಿಂದ ಬಿ.ಸಿ.ರೋಡಿಗೆ ಆಗಮಿಸುತ್ತಿದ್ದ ಖಾಸಗಿವೊಂದು ಮಣ್ಣಿನ ದಿಬ್ಬಕ್ಕೆ ಗುದ್ದಿದ ಪರಿಣಾಮ, 23 ಮಂದಿಗೆ ಗಾಯಗಳಾಗಿವೆ.
ಬಂಟ್ವಾಳ ತಾಲೂಕಿನ ಸೊರ್ನಾಡು ಎಂಬಲ್ಲಿ ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಸುಮಾರು 30 ಕ್ಕೂ ಅಧಿಕ ಪ್ರಯಾಣಿಕರು ಬಸ್ಸಿನಲ್ಲಿದ್ದರು. ಈ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಕ್ಕದಲ್ಲಿದ್ದ ಮಣ್ಣಿನ ದಿಬ್ಬಕ್ಕೆ ಡಿಕ್ಕಿ ಹೊಡೆದು ವಾಲಿತು. ಘಟನೆಯಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿ. ಈ ಪೈಕಿ ಆರು ಮಂದಿ ಖಾಸಗಿ ಅಸ್ಪತ್ರೆಗೆ ದಾಖಲಾಗಿದ್ದಾರೆ.
ಉಳಿದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಬಂಟ್ವಾಳ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿಸಿದ್ದಾರೆ.
.jpg)
Next Story





