ಉಡುಪಿ, ಜೂ.4: ಉಡುಪಿ ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಜೂ.5ರಂದು ನಗರದ ಸಿಟಿ, ಸರ್ವಿಸ್ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಗಳಲ್ಲಿ ಸಾರ್ವಜನಿಕರಿಗೆ ಸಿಹಿ ತಿಂಡಿ ವಿತರಿಸುವ ಮೂಲಕ ಈದುಲ್ ಫಿತ್ರ್ ಹಬ್ಬವನ್ನು ಆಚರಿಸಲಾಗುವುದು ಎಂದು ಉಡುಪಿ ಸ್ಥಾನೀಯ ಅಧ್ಯಕ್ಷ ಅಬ್ದುಲ್ ಅಝೀಝ್ ಮಣಿಪಾಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.