Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜಾತಿ ವ್ಯವಸ್ಥೆ ಇರುವವರೆಗೂ ಸಮಾನತೆ...

ಜಾತಿ ವ್ಯವಸ್ಥೆ ಇರುವವರೆಗೂ ಸಮಾನತೆ ಬರುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ4 Jun 2019 8:45 PM IST
share
ಜಾತಿ ವ್ಯವಸ್ಥೆ ಇರುವವರೆಗೂ ಸಮಾನತೆ ಬರುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜೂ.4: ಜಾತಿ ವ್ಯವಸ್ಥೆ ಇರುವವರೆಗೂ ಸಮಾಜದಲ್ಲಿ ಸಮಾನತೆ ಬರಲು ಸಾಧ್ಯವಿಲ್ಲ. ಹಾಗೆಯೇ ಆರ್ಥಿಕ, ಸಾಮಾಜಿಕ ಶಕ್ತಿ ಸಿಗದಿದ್ದರೆ ಜಾತಿ ವ್ಯವಸ್ಥೆ ನಿರ್ಮೂಲನೆಯೂ ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಗಳವಾರ ನಗರದ ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್‌ರ 128 ನೆ ಜಯಂತೋತ್ಸವ ಹಾಗೂ ಕಾರ್ಮಿಕ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಜಾತಿ ವ್ಯವಸ್ಥೆ ಸುಮ್ಮನೆ ನಿರ್ಮೂಲನೆ ಆಗಲ್ಲ. ತುಳಿತಕ್ಕೆ ಒಳಗಾದವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬಿದಾಗ ಜಾತಿ ವ್ಯವಸ್ಥೆ ನಾಶ ಸಾಧ್ಯ. ಸ್ವಾತಂತ್ರದ ಮೊದಲು ಗುಲಾಮಗಿರಿ ಇತ್ತು, ನಂತರವೂ ಇತ್ತು. ಇದೀಗ ಆ ಮನಸ್ಥಿತಿ ಹೋಗಬೇಕು. ಸ್ವಾಭಿಮಾನ ಇದ್ದವರು ಗುಲಾಮಗಿರಿಯನ್ನು ಕಿತ್ತು ಎಸೆದು ಹಾಕುತ್ತಾರೆ. ಅಂಬೇಡ್ಕರ್‌ಗೆ ಸ್ವಾಭಿಮಾನ ಇತ್ತು. ಅದಕ್ಕೆ ನಮಗೆ ಮೀಸಲಾತಿ, ಸಮಾನತೆ ಕಲ್ಪಿಸಿಕೊಡಲು ಸಾಧ್ಯವಾಯಿತು. ಹೀಗಾಗಿ, ಸ್ವಾಭಿಮಾನದಿಂದ ಬದುಕಲು ಶೋಷಿತ ಸಮುದಾಯಗಳಿಗೆ ಆರ್ಥಿಕ ಶಕ್ತಿ ತುಂಬಬೇಕು. ಅವಕಾಶ ವಂಚಿತರನ್ನು ಸಮಾಜದ ಮುಖ್ಯ ವಾಹಿನಿಗೆ ತರುವುದು ಮೊದಲ ಆದ್ಯತೆ ಆಗಿರಬೇಕು ಎಂದು ಹೇಳಿದರು.

ಈ ಹಿಂದೆ ಅಂಬೇಡ್ಕರ್ ಇಲ್ಲದಿದ್ದರೆ, ಅವರಿಗೆ ಸಂವಿಧಾನ ರಚನೆ ಅವಕಾಶ ಸಿಗದೇ ಇಲ್ಲದಿದ್ದರೆ ಇಂದಿನ ಸ್ಥಿತಿ ಊಹಿಸಿಕೊಳ್ಳಲು ಆಗುತ್ತಿರಲಿಲ್ಲ. ಅಂದು ಅಂಬೇಡ್ಕರ್‌ರ ಸಂವಿಧಾನವನ್ನು ವಿರೋಧಿಸಿದ ಕೊಳಕು ಮನಸ್ಥಿತಿಗಳೇ ಇಂದು ಸಂವಿಧಾನ ಬದಲಾವಣೆ ಮಾಡುವ ಮಾತಾಡುತ್ತಿದ್ದಾರೆ. ಸಾಮಾಜಿಕ ನ್ಯಾಯದಿಂದ, ಅವಕಾಶದಿಂದ ವಂಚಿತರಾದ ಎಲ್ಲರಿಗೂ ಸಂವಿಧಾನ ಬೇಕಿದ್ದು, ಬದಲಾವಣೆ ಮಾಡಲು ಬಿಡಲ್ಲ ಎಂಬ ದೃಢಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು.

ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಮಾತನಾಡಿ, ಸಾರಿಗೆ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವವರಿಗೆ ಸರಿಯಾದ ವಸತಿ ವ್ಯವಸ್ಥೆಯಿಲ್ಲ. ಆದುದರಿಂದಾಗಿ ಎಸ್‌ಟಿಪಿ, ಟಿಎಸ್‌ಪಿಯಿಂದ ಮನೆಗಳನ್ನು ಕಟ್ಟಿಸಿಕೊಡಲು ಹಣ ನೀಡುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ ಖರ್ಗೆಗೆ ಮನವಿ ಮಾಡಲಾಗಿದೆ. ಅವರು ಸ್ಪಂದಿಸುವ ಭರವಸೆಯಿದೆ ಎಂದ ಅವರು, ಈ ವರ್ಷ ಎಲ್ಲರಿಗೂ ಬೋನಸ್ ನೀಡಲಾಗುವುದು. ಉಳಿದಂತೆ ಸಮವಸ್ತ್ರ ನೀಡುವಲ್ಲಿ ವಿಳಂಬವಾಗಿದ್ದು, ಈ ವರ್ಷದಲ್ಲಿಯೇ ಮೂರು-ನಾಲ್ಕು ವರ್ಷದ ಸಮವಸ್ತ್ರಗಳನ್ನು ನೀಡುತ್ತೇವೆ ಎಂದು ಹೇಳಿದರು.

ಸಾರಿಗೆ ಸಂಸ್ಥೆಯಲ್ಲಿ ಕೆಲಸ ಮಾಡುವ ಕೆಲವು ನೌಕರರನ್ನು ಸಣ್ಣ ಸಣ್ಣ ತಪ್ಪುಗಳಿಗೆ ಸಸ್ಪೆಂಡ್ ಮಾಡಲಾಗಿದೆ. ಅದಕ್ಕೆ ಒಂದು ಸಮಿತಿ ಮಾಡುತ್ತಿದ್ದು, ನೌಕರರು ಮಾಡಿರುವ ತಪ್ಪುಗಳ ಬಗ್ಗೆ ತನಿಖೆ ಮಾಡಿ ಮರು ನೇಮಕ ಮಾಡುವ ಕೆಲಸ ಮಾಡಲಾಗುತ್ತಿದೆ. ಶೀಘ್ರದಲ್ಲಿಯೇ ಮರು ನೇಮಕ ಮಾಡುವ ಕಾರ್ಯ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬಿಎಂಟಿಸಿ ಅಧ್ಯಕ್ಷ ಎನ್.ಎ.ಹಾರೀಸ್, ಶಾಸಕ ಡಾ.ಕೆ.ಅನ್ನದಾನಿ, ಶಾಸಕಿ ಸೌಮ್ಯರೆಡ್ಡಿ, ರಾಮಲಿಂಗಾರೆಡ್ಡಿ, ಮಾಜಿ ಶಾಸಕಿ ಬಿ.ಟಿ.ಲಲಿತಾ ನಾಯಕ್ ಸೇರಿದಂತೆ ಹಲವರಿದ್ದರು. ಇದೇ ವೇಳೆ ಎಲ್.ಜಯಪ್ರಕಾಶ್‌ಗೆ ಅಂಬೇಡ್ಕರ್ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಹಾಗೂ ವರದಿಗಾರ್ತಿ ಎಸ್.ಎಸ್.ಕಾವೇರಿ, ಎ.ಪ್ರಿಯಾಂಕ, ಎಚ್.ಕೆ.ರಮಾಮಣಿ ಸೇರಿದಂತೆ ಹಲವರನ್ನು ಗೌರವಿಸಿ ಸನ್ಮಾನಿಸಲಾಯಿತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X