ಜೂ.9: ಉಡುಪಿ ಜಿಲ್ಲಾ ವರ್ತಕರ ಸಂಘದ ಸಮಾವೇಶ
ಉಡುಪಿ, ಜೂ.4:ಉಡುಪಿ ಜಿಲ್ಲಾ ವರ್ತಕರ ಸಂಘದ ಸಮಾವೇಶವು ಅಂಬಲಪಾಡಿ ದೇವಸ್ಥಾನದ ಭವಾನಿ ಮಂಟಪದಲ್ಲಿ ಜೂ.9ರ ರವಿವಾರ ಅಪರಾಹ್ನ 3 ಗಂಟೆಗೆ ನಡೆಯಲಿದೆ.
ಸಂಘದ ಅಧ್ಯಕ್ಷ ಐರೋಡಿ ಸಹನಶೀಲ ಪೈ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾವೇಶದಲ್ಲಿ ಅಂಬಲಪಾಡಿ ದೇವಸ್ಥಾನದ ಧರ್ಮದರ್ಶಿ ಗಳಾದ ಡಾ.ನಿ.ಬಿ.ವಿಜಯ ಬಲ್ಲಾಳ್ ಆಶೀರ್ವಚನ ನೀಡಲಿದ್ದಾರೆ. ಬನ್ನಂಜೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಾಧವ ಬನ್ನಂಜೆ, ಉಡುಪಿ ಪೊಲೀಸ್ ವೃತ್ತ ನಿರೀಕ್ಷಕ ಮಂಜುನಾಥ ಮುಖ್ಯ ಅತಿಥಿ ಯಾಗಿ ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮದಲ್ಲಿ ಈಗಾಗಲೇ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ವಿದ್ಯಾದಾನ ಯೋಜನೆಯಡಿ ಉಚಿತ ಪುಸ್ತಕ ವಿತರಣೆ, ಸಪ್ತಪದಿ ಯೋಜನೆಯಂತೆ ಮದುವೆಗೆ ಸಹಕಾರ, ಗಾಯತ್ರಿ ಯೋಜನೆಯಂತೆ ಉಪನಯನಕ್ಕೆ ಸಹಕಾರ, ಆಶ್ರಯ ಯೋಜನೆಯಡಿ ಗೃಹಪ್ರವೇಸಕ್ಕೆ ಸಹಕಾರ, ಆರೋಗ್ಯದಾನ ಯೋಜನೆಯಡಿ ಅನಾರೋಗ್ಯಪೀಡಿತರಿಗೆ ಆರ್ಥಿಕ ನೆರವು ವಿತರಿಸಲಾಗುವುದು.
ಅಲ್ಲದೇ ಸಾಹಿತ್ಯ, ಕ್ರೀಡಾ, ಭಾಷಣ, ಸಂಗೀತ, ಸಾಮಾಜಿಕ ಹಾಗೂ ವ್ಯಾಪಾರಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗೌರವಿಸಲಾಗುವುದು ಎಂದು ಸಂಘದ ಅಧ್ಯಕ್ಷ ಐರೋಡಿ ಸಹನಶೀಲ ಪೈ ಹಾಗೂ ಕಾರ್ಯದರ್ಶಿ ಪಾದೆಮಠ ನಾಗರಾಜ ಅಡಿಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







