Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿದ್ದಗಂಗಾ ಮಠದಲ್ಲಿ ವಿಶ್ವ ಪರಿಸರ...

ಸಿದ್ದಗಂಗಾ ಮಠದಲ್ಲಿ ವಿಶ್ವ ಪರಿಸರ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ5 Jun 2019 5:54 PM IST
share
ಸಿದ್ದಗಂಗಾ ಮಠದಲ್ಲಿ ವಿಶ್ವ ಪರಿಸರ ದಿನಾಚರಣೆ

ತುಮಕೂರು,ಜೂ 5: ಬೆಂಗಳೂರಿನ ರೀಚ್‍ಫಾರ್ ಕಾಸ್ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್‍ ವತಿಯಿಂದ ಇಲ್ಲಿನ ಸಿದ್ಧಗಂಗಾ ಮಠದ ವಸ್ತು ಪ್ರದರ್ಶನ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಇಂದು ಬೆಳಗ್ಗೆ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಗಿತ್ತು.

ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಂದ್ರ ಬಾದಾಮಿಕರ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಪ್ರಚಾರಕ್ಕಾಗಿ ಗಿಡಗಳನ್ನು ನೆಟ್ಟರೆ ಸಾಲದು ಅವುಗಳ ಪೋಷಣೆ ಮಾಡಿ, ನಿಗದಿತ ಅವಧಿಯವರೆಗೆ ಬೆಳೆಸಬೇಕು ಎಂದ ಅವರು, ಈಗ ಮುಂಗಾರು ಆರಂಭವಾಗಿರುವುದರಿಂದ ಈ ಅವಧಿಯಲ್ಲಿ ಗಿಡಗಳನ್ನು ನೆಟ್ಟರೆ ಅವು ಚೆನ್ನಾಗಿ ಬೆಳೆಯುತ್ತವೆ. 1990ರಿಂದ ವಿಶ್ವ ಪರಿಸರ ದಿನವನ್ನು ಆಚರಿಸಿ ಕೊಂಡು ಬರುತ್ತಿದ್ದು, ಜನರು ಈ ಬಗ್ಗೆ ಸಾಕಷ್ಟು ಅರಿವು ಮೂಡಿಸಿಕೊಂಡಿದ್ದಾರೆ. ಆದರೂ ಸಹ ಪರಿಸರದ ಮೇಲೆ ನಿರಂತರವಾದ ದೌರ್ಜನ್ಯ ತಪ್ಪಿಲ್ಲ. ಇದರಿಂದಾಗಿಯೇ ಸಾಕಷ್ಟು ಪ್ರಾಕೃತಿಕ ವಿಕೋಪಗಳು ಸಂಭವಿಸುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಿದ್ಧಗಂಗಾ ಮಠದ ಅಧ್ಯಕ್ಷರಾದ ಶ್ರೀಸಿದ್ಧಲಿಂಗಸ್ವಾಮಿಜೀ ಮಾತನಾಡಿ, ಪ್ರತಿವರ್ಷ ಜೂನ್ ತಿಂಗಳಲ್ಲಿ ವಿಶ್ವ ಪರಿಸರ ದಿನವನ್ನು ನಾವು ಆಚರಿಸುತ್ತಿದ್ದೇವೆ. ಇದು ಒಂದು ದಿನಕ್ಕೆ ಸೀಮಿತವಾಗದೆ ಪ್ರತಿ ನಿತ್ಯದ ಆಚರಣೆಯಾಗಬೇಕು. ಪರಿಸರ ಉಳಿದರೆ ದೇಶ ಉಳಿಯುತ್ತದೆ. ಇದು ಮನುಷ್ಯನ ಬದುಕಿಗೆ ಪಾಠ ಆಗಬೇಕು. ಸಕಲ ಜೀವ ಜಂತು ಗಳಿಗೂ ಪರಿಸರ ಅಗತ್ಯವಾಗಿದ್ದು, ಸ್ವಾರ್ಥಕ್ಕಾಗಿ ಪ್ರತಿನಿತ್ಯ ಪರಿಸರವನ್ನು ಹಾಳು ಮಾಡುತ್ತಿದ್ದು, ಭೂಮಿ, ನೀರು, ಗಾಳಿ ಎಲ್ಲವೂ ಕಲುಷಿತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಾವು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಈ ಕಾರ್ಯಕ್ರಮ ವನ್ನು ಹಮ್ಮಿಕೊಂಡಿದ್ದು, ಪ್ರತಿಯೊಬ್ಬರು ಪರಿಸರದ ಬಗ್ಗೆ ಕಾಳಜಿ ಹೊಂದಿ ಸಸಿಗಳನ್ನು ನೆಟ್ಟು ಮಗುವಿನಂತೆ ಪೋಷಣೆ ಮಾಡಬೇಕೆಂದರು.

ಜಿಲ್ಲಾಧಿಕಾರಿ ಡಾ. ರಾಕೇಶ್‍ಕುಮಾರ್ ಮಾತನಾಡಿ, ಪರಿಸರದ ಮೇಲೆ ಒತ್ತಡ ಹೆಚ್ಚಾಗುತ್ತಿರುವುದರಿಂದ ಅಸಮತೋಲನಕ್ಕೆ ಕಾರಣ ವಾಗಿದೆ. ಮನುಷ್ಯರು, ಮರ, ಗಿಡ, ಮರಳು, ಗಣಿಗಾರಿಕೆ ಇತ್ಯಾದಿಗಳಿಂದ ಪರಿಸರದ ಮೇಲೆ ಒತ್ತಡ ಉಂಟು ಮಾಡುತ್ತಿದ್ದು, ಇದರಿಂದಾಗಿ ಅಸಮತೋಲನ ಉಂಟಾಗಿದೆ. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, 148 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಬಹುತೇಕ ಕೊಳವೆ ಬಾವಿಗಳು ಬತ್ತಿ ಹೋಗಿದ್ದು, ಇದಕ್ಕೆ ಪರಿಸರ ಅಸಮ ತೋಲನ ಕಾರಣ ಎಂದರು.

ಜಿ.ಪಂ. ಸಿಇಒ ಶುಭಾ ಕಲ್ಯಾಣ್, ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಕೆ.ವಂಶಿಕೃಷ್ಣ, ಉಪಅರಣ್ಯ ಸಂರಕ್ಷಣಾಧಿ ಕಾರಿಗಳಾದ ಹೆಚ್.ಸಿ.ಗಿರೀಶ್, ಸತೀಶ್‍ಬಾಬಾರೈ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಚಂದ್ರಪ್ಪ ಮುಂತಾದವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X