ಪುತ್ತೂರಿನಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ

ಪುತ್ತೂರು: ತಾಲೂಕಿನ ಎಲ್ಲಾ ಮಸೀದಿಗಳಲ್ಲಿ ಈದುಲ್ ಫಿತ್‍ರ್ ಅನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.
ಪುತ್ತೂರಿನ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಮುದರ್ರಿಸ್ ಸಯ್ಯದ್ ಅಹ್ಮದ್ ಪೂಕೋಯ ತಂಙಳ್ ಅವರು ಈದ್ ಖುತ್‍ಬಾ ಪಾರಾಯಣ ಮತ್ತು ನಮಾಝ್ ನೆರವೇರಿಸಿದರು.
ಪುತ್ತೂರು ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಖತೀಬ್ ಮೊಯ್ದು ಫೈಝಿ ಕೊಡಗು ಈದ್ ಖುತ್‍ಬಾ ಪಾರಾಯಣ ಮತ್ತು ಈದ್ ನಮಾಝ್ ನೆರವೇರಿಸಿದರು. ಜಮಾಅತ್ ಕಮಿಟಿ ಅಧ್ಯಕ್ಷ ಎಲ್.ಟಿ. ಅಬ್ದುಲ್ ರಝಾಕ್ ಹಾಜಿ, ಪ್ರಧಾನ ಕಾರ್ಯದರ್ಶಿ ಯಾಕೂಬ್ ಖಾನ್ ಮತ್ತಿತರರು ಉಪಸ್ಥಿತರಿದ್ದರು.
Next Story





