ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ: ಉಡುಪಿ ಪ್ರೆಸ್ ಕ್ಲಬ್ ಸಂಚಾಲಕ ನಾಗರಾಜ ರಾವ್

ಉಡುಪಿ, ಜೂ.5:ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಹೆಸರಾಂತ ಮೊಬೈಲ್ ಕಂಪೆನಿಯಾದ ವೀವೋ ಉಡುಪಿ ಶಾಖೆಯ ವತಿಯಿಂದ ನಗರದ ಪ್ರೆಸ್‌ಕ್ಲಬ್ ಆವರಣದಲ್ಲಿ ಗಿಡಗಳನ್ನು ನೆಡುವುದರ ಮೂಲಕ ರಿಸರ ದಿನವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಉಡುಪಿ ಪ್ರೆಸ್ ಕ್ಲಬ್ ಸಂಚಾಲಕ ನಾಗರಾಜ ರಾವ್, ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಗೂ ಪರಿಸರ ಅಗತ್ಯ. ಪ್ರತಿಯೊಬ್ಬರು ತಮ್ಮ ಮನೆಗಳ ಮುಂದೆ ಗಿಡ ನೆಡುವ ಮೂಲಕ ಪರಿಸರ ರಕ್ಷಿಸಬೇಕು. ಪರಿಸರ ರಕ್ಷಣೆ ಮಾಡುವುದರಿಂದ ಉಸಿರಾಟಕ್ಕೆ ಸ್ವಚ್ಛ ಗಾಳಿ ದೊರೆಯುತ್ತದೆ. ಉತ್ತಮ ಆರೋಗ್ಯಕ್ಕೆ ಉತ್ತಮ ಪರಿಸರ ಕೂಡ ಅಗತ್ಯ. ಪರಿಸರ ನಾಶದಿಂದ ನಮ್ಮ ನಾಶವಾಗುತತಿದೆ. ಆದ್ದರಿಂದ ಪರಿಸರ ಸಂರಕ್ಷಣೆ ಹೊಣೆ ನಮ್ಮೆಲ್ಲರ ಮೇಲಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಸಂತೋಷ್ ಸರಳೇಬೆಟ್ಟು, ಸಹಕಾರ್ಯದರ್ಶಿ ಮೈಕಲ್ ರೊಡ್ರಿಗಸ್, ವಿವೋ ಕಂಪೆನಿಯ ಅಧಿಕಾರಿಗಳಾದ ಅಖಿಲೇಶ್, ದೇವಿದಾಸ್, ಪ್ರಮೋದ್, ಗೋಪಾಲ್ ಹಾಗೂ ಇತರರು ಉಪಸ್ಥಿತರಿದ್ದರು.

Next Story





