Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ನಿಪಾಹ್' ಬಗ್ಗೆ ವಿಶೇಷ ಮುಂಜಾಗ್ರತೆ...

'ನಿಪಾಹ್' ಬಗ್ಗೆ ವಿಶೇಷ ಮುಂಜಾಗ್ರತೆ ಅಗತ್ಯ: ಹಾಸನ ಜಿ.ಪಂ. ಸಿಇಒ ಡಾ.ವಿಜಯ್ ಪ್ರಕಾಶ್

ವಾರ್ತಾಭಾರತಿವಾರ್ತಾಭಾರತಿ7 Jun 2019 7:41 PM IST
share
ನಿಪಾಹ್ ಬಗ್ಗೆ ವಿಶೇಷ ಮುಂಜಾಗ್ರತೆ ಅಗತ್ಯ: ಹಾಸನ ಜಿ.ಪಂ. ಸಿಇಒ ಡಾ.ವಿಜಯ್ ಪ್ರಕಾಶ್

ಹಾಸನ, ಜೂ, 07: ನೆರೆ ರಾಜ್ಯದಲ್ಲಿ ಕಂಡುಬಂದಿರುವ ನಿಪಾಹ್ ವೈರಾಣು ಜ್ವರದ ಬಗ್ಗೆ ಜಿಲ್ಲೆಯಲ್ಲಿಯೂ ಸೂಕ್ತ ಕಟ್ಟೆಚ್ಚರ ವಹಿಸಿ, ಸಾರ್ವಜನಿಕರು ಮುಂಜಾಗ್ರತೆ ವಹಿಸಲು ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಡಾ.ಕೆ.ಎನ್.ವಿಜಯ್‍ಪ್ರಕಾಶ್ ಅವರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು ಸಾರ್ವಜನಿಕ ಶಿಕ್ಷಣ ಇಲಾಖೆ, ಆರೋಗ್ಯ, ಕೃಷಿ, ಅಬಕಾರಿ, ಅರಣ್ಯ, ಮಹಿಳಾ ಮತ್ತು ಮಕ್ಕಳ ಇಲಾಖೆಗಳು, ನಗರಸಭೆ  ಸೇರಿದಂತೆ ಸಂಬಂಧಪಟ್ಟ ವಿವಿಧ ಇಲಾಖೆಗಳು ಈ ಬಗ್ಗೆ ಹೆಚ್ಚಿನ ನಿಗಾವಹಿಸಿ ಕೆಲಸ ನಿರ್ವಹಿಸಬೇಕೆಂದು ತಿಳಿಸಿದರು.

ಅನಾರೋಗ್ಯದ ಪ್ರಾಣಿಗಳೊಂದಿಗೆ ನೇರ ಸಂಪರ್ಕವನ್ನು ತಪ್ಪಿಸುವುದು, ಬಾವಲಿಗಳ ಪ್ರವೇಶವನ್ನು ತಪ್ಪಿಸಲು, ತೆರದ ಬಾವಿಗಳಿಗೆ ಜಾಲರಿಯನ್ನು ಅಳವಡಿಸಿಕೊಳ್ಳುವಂತಹ ಜಾಗೃತಿ ಕಾರ್ಯಕ್ರಮಗಳು ಎಲ್ಲಾ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿನ ಸಾರ್ವಜನಿಕರಿಗೆ ತಲುಪುವಂತೆ ಗಮನಹರಿಸಬೇಕು ಎಂದು ಅವರು ಹೇಳಿದರು.

ಅರಣ್ಯ ಹಾಗೂ ಮಲೆನಾಡು ಪ್ರದೇಶ, ಅಂಗನವಾಡಿ ಕೇಂದ್ರ, ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಈ ನಿಪಾಹ್ ವೈರಾಣುವಿನ ಬಗ್ಗೆ ಹೆಚ್ಚಿನ ತಿಳುವಳಿಕೆ ಮೂಡಬೇಕಿದ್ದು, ಇದಕ್ಕೆ ಸಂಬಂಧಪಟ್ಟ ಇಲಾಖೆಗಳು ಗಮನಹರಿಸಬೇಕಿದೆ ಎಂದು ವಿಜಯ್ ಪ್ರಕಾಶ್ ಅವರು ಹೇಳಿದರು.  

ಅಪರ ಜಿಲ್ಲಾಧಿಕಾರಿ ಎಂ.ಎಲ್.ವೈಶಾಲಿ ಮಾತನಾಡಿ, ನಿಪಾಹ್ ತಡೆಗಟ್ಟಲು ಹೆಚ್ಚಾಗಿ ಅಂಗನವಾಡಿ, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕಿದ್ದು, ಈ ಬಗ್ಗೆ ಸಾರ್ವಜನಿಕವಾಗಿ ಪ್ರಕಟಣೆಗಳು ಪ್ರತಿ ಮನೆಮನೆಗೂ ತಲುಪುವಂತಾಗಬೇಕು. ಅಲ್ಲದೇ  ಪ್ರತಿಯೊಬ್ಬರಲ್ಲಿಯೂ ಜಾಗೃತಿ ಮೂಡಿಸುವುದರ ಜೊತೆಗೆ ವಿಶೇಷ ನಿಗಾವಹಿಸಬೇಕಿದೆ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಮಾತನಾಡಿ, ಬಾವಲಿ ಕಚ್ಚಿದ ಅಥವಾ ಸೋಂಕಿತ ಬಾವಲಿಗಳ ನೇರ ಸಂಪರ್ಕದಿಂದ  ಹಾಗೂ ಬಾವಲಿಗಳು ಬಿಸಾಡಿದ ಹಣ್ಣು ಹಂಪಲುಗಳನ್ನು ಸೇವಿಸುವುದರ ಮೂಲಕ, ಸೋಂಕಿತ ಪ್ರಾಣಿಗಳಿಂದ ಇತರೆ ಪ್ರಾಣಿಗಳಿಗೆ ಮಲ, ಮೂತ್ರ, ಜೊಲ್ಲು ಮತ್ತು ರಕ್ತ ಇವುಗಳ ನೇರ ಸಂಪರ್ಕದಿಂದ ಹಾಗೂ ಸೋಂಕಿತ ಪ್ರಾಣಿಗಳಿಂದ ಇತರೆ ಪ್ರಾಣಿಗಳಿಗೆ ಮಲ, ಮೂತ್ರ, ಜೊಲ್ಲು ಮತ್ತು ರಕ್ತ ಇವುಗಳ ನೇರ ಸಂಪರ್ಕದಿಂದ, ಸೋಂಕಿತ ಬಾವಲಿಗಳು ಕಚ್ಚಿದ ಹಣ್ಣುಗಳನ್ನು ಸೇವಿಸುವುದರಿಂದ ಮನುಷ್ಯರಿಗೆ ಹರಡಲಿದ್ದು ಇದರ ಬಗ್ಗೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲು ಸೂಚನೆ ನೀಡಿದರು.

ಸೋಂಕಿತ ರೋಗಿಗಳನ್ನು ನಿರ್ವಹಿಸುವಾಗ ಆಸ್ಪತ್ರೆಯ ಸಿಬ್ಬಂದಿ ವಿಶೇಷ ಮುಖವಾಡ ಉಪಯೋಗಿಸಬೇಕು. ಈ ರೀತಿಯ ಕ್ರಮಗಳನ್ನು ಅನುಸರಿಸಿದಲ್ಲಿ  ವೈರಾಣು ಹರಡುವುದನ್ನು ತಡೆಯಬಹುದಾಗಿದೆ. ಎಲ್ಲಾ ಸಾರ್ವಜನಿಕರು ಈ ಬಗ್ಗೆ ಎಚ್ಚರ ಹಾಗೂ ವಿಶೇಷ ಕಾಳಜಿ ವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ಕೃಷ್ಣ ಮೂರ್ತಿ ನಗರಸಭೆ ಆಯುಕ್ತರಾದ ರೂಪಶೆಟ್ಟಿ, ತಾಲೂಕು ಆರೋಗ್ಯಾಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X