Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸರಕಾರಿ ಶಾಲೆಗಳ ಶಿಕ್ಷಣದ ಗುಣಮಟ್ಟ...

ಸರಕಾರಿ ಶಾಲೆಗಳ ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಆದ್ಯತೆ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸಿಎಂ

ವಾರ್ತಾಭಾರತಿವಾರ್ತಾಭಾರತಿ7 Jun 2019 8:17 PM IST
share
ಸರಕಾರಿ ಶಾಲೆಗಳ ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಆದ್ಯತೆ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸಿಎಂ

ಬೆಂಗಳೂರು, ಜೂ. 7: ಸರಕಾರಿ ಶಾಲೆಗಳಲ್ಲಿ ಶಿಕ್ಷಣ ಗುಣಮಟ್ಟ ಸುಧಾರಣೆಗೆ ಅಧಿಕಾರಿಗಳು ಹೆಚ್ಚಿನ ಆದ್ಯತೆ ನೀಡಬೇಕು. ಇದರಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವಂತಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಶುಕ್ರವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಮಕ್ಕಳ ಕಲಿಕೆಯ ಮಟ್ಟ ಕುರಿತು ಏಕಕಾಲದಲ್ಲಿ 40 ಲಕ್ಷ ಮಕ್ಕಳ ಮೌಲ್ಯಮಾಪನ ನಡೆಸಿದ ಏಕೈಕ ರಾಜ್ಯ ನಮ್ಮದು. ಈ ಮೌಲ್ಯಮಾಪನದ ಆಧಾರದಲ್ಲಿ 12 ಲಕ್ಷಕ್ಕೂ ಹೆಚ್ಚು ಮಕ್ಕಳನ್ನು ಗುರುತಿಸಿ ಪರಿಹಾರ ಬೋಧನೆಗೆ ಕ್ರಮ ವಹಿಸಲಾಗಿದೆ. ಮುಂದಿನ ದಿನಗಳಲ್ಲಿ ಸರಕಾರಿ ಶಾಲೆಗಳಲ್ಲಿ ಶಿಕ್ಷಣ ಗುಣಮಟ್ಟ ಹೆಚ್ಚಿಸಲು ಹೆಚ್ಚಿನ ಆದ್ಯತೆ ನೀಡಬೇಕು. ಮಕ್ಕಳ ಆಲೋಚನಾ ಮತ್ತು ಅನ್ವಯಿಕ ಶಕ್ತಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ಪರೀಕ್ಷಾ ವಿಧಾನದಲ್ಲಿ ಸೂಕ್ತ ಬದಲಾವಣೆ ತರುವ ಬಗ್ಗೆ ಪರಿಶೀಲಿಸಿ ಕ್ರಮ ವಹಿಸುವಂತೆ ಅವರು ಸೂಚಿಸಿದರು.

ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಸಮರ್ಪಕವಾಗಿ ನಡೆಯುವಂತೆ ಹಾಗೂ ಕೇಂದ್ರದ ಅನುದಾನಕ್ಕೆ ಕಾಯದೆ, ಎರಡು ಜೊತೆ ಸಮವಸ್ತ್ರ ವಿತರಿಸುವಂತೆ ಸೂಚನೆ ನೀಡಿದರು. ಸರಕಾರಿ ಇಂಗ್ಲಿಷ್ ಮಾಧ್ಯಮ ಶಾಲೆಗಳಿಗೆ 300 ಶಾಲೆಗಳಲ್ಲಿ ಹೆಚ್ಚುವರಿ ತರಗತಿಗಳನ್ನು ಪ್ರಾರಂಭಿಸುವಂತೆ ಬೇಡಿಕೆ ಬಂದಿದೆ. ನುರಿತ ತರಬೇತಿ ಹೊಂದಿದ ಶಿಕ್ಷಕರು ಈ ಶಾಲೆಗಳಲ್ಲಿ ಲಭ್ಯವಿದ್ದರೆ ಇನ್ನು ಒಂದು ಹೆಚ್ಚುವರಿ ತರಗತಿಯನ್ನು ಪ್ರಾರಂಭಿಸುವಂತೆ ಸಿಎಂ ಅಧಿಕಾರಿಗಳಿಗೆ ತಿಳಿಸಿದರು.

ಶಿಕ್ಷಕರು ತಮ್ಮ ಸೇವಾ ವಿಷಯಗಳಿಗೆ ಸರಕಾರಿ ಕಚೇರಿಗಳಿಗೆ ಓಡಾಡುವುದನ್ನು ತಪ್ಪಿಸಲು ಶೀಘ್ರವೇ ಸೇವಾ ಸೌಲಭ್ಯಗಳನ್ನು ಆನ್‌ಲೈನ್‌ನಲ್ಲಿ ನೀಡಲು ತಂತ್ರಾಂಶ ರೂಪಿಸಿ, ವ್ಯವಸ್ಥೆ ಮಾಡಲಾಗಿದೆ. ಇದಕ್ಕೆ ನಡೆಸಿದ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿದರು.

ಪೂರ್ವ ಪ್ರಾಥಮಿಕ ಶಾಲೆಗಳನ್ನು ತೆರೆಯುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳ ಜಂಟಿ ಸಭೆ ನಡೆಸಲು ತೀರ್ಮಾನಿಸಲಾಯಿತು. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಬಿಡುಗಡೆ ಮಾಡಿದ ರಾಷ್ಟ್ರೀಯ ಶಿಕ್ಷಣ ನೀತಿ ಕರಡು ಕುರಿತಾಗಿ ಸರಕಾರದ ಅಭಿಪ್ರಾಯ ತಿಳಿಸುವ ನಿಟ್ಟಿನಲ್ಲಿ ಶಿಕ್ಷಣ ತಜ್ಞರು, ಪೋಷಕರು, ಶಾಲಾಭಿವೃದ್ಧಿ ಸಮಿತಿಗಳು ಮತ್ತಿತರ ಸಂಬಂಧಪಟ್ಟ ಭಾಗೀದಾರರೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.

ಮಂಡಳಿ ವಿಲೀನ: ಪ್ರೌಢ ಶಿಕ್ಷಣ ಹಾಗೂ ಪದವಿ ಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಗಳನ್ನು ವಿಲೀನಗೊಳಿಸಿ, ಒಂದೇ ಮಂಡಳಿಯ ಮೂಲಕ 10ನೆ ತರಗತಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಚರ್ಚಿಸಿದ್ದು, ಇದಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಗ್ರಂಥಾಲಯ ಇಲಾಖೆಯಡಿಯಲ್ಲಿ ಡಿಜಿಟಲ್ ಲೈಬ್ರರಿಗಳನ್ನು ಜಿಲ್ಲಾ ಮಟ್ಟದಲ್ಲಿ ಸ್ಥಾಪಿಸಲು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು. ಸಭೆಯಲ್ಲಿ ಸಿಎಂ ಆರ್ಥಿಕ ಸಲಹೆಗಾರ ಡಾ.ಎಸ್.ಸುಬ್ರಹ್ಮಣ್ಯ, ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣರೆಡ್ಡಿ, ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್, ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್, ಆಯುಕ್ತ ಡಾ.ಪಿ.ಸಿ.ಜಾಫರ್, ಯೋಜನಾ ನಿರ್ದೇಶಕರು ಡಾ.ಎಂ.ಟಿ.ರೆಜು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X