ತುಳು ಸಾಹಿತ್ಯ ಅಕಾಡಮಿಯ ಸಭೆ

ಮಂಗಳೂರು, ಜೂ.7: ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯು ಆಗಸ್ಟ್ 4ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿರುವ ಅಕಾಡಮಿಯ 2018ನೇ ಸಾಲಿನ ಪ್ರಶಸ್ತಿ ಪ್ರದಾನ ಹಾಗೂ ಪುಸ್ತಕ ಬಹುಮಾನ ಮತ್ತು ಸಾಂಸ್ಕೃೃತಿಕ ಕಾರ್ಯಕ್ರಮದ ಯಶಸ್ವಿಗಾಗಿ ಇತ್ತೀಚೆಗೆ ಬೆಂಗಳೂರಿನಲ್ಲಿ ಪೂರ್ವಭಾವಿ ಸಭೆ ನಡೆಸಿತು.
ಸಭೆಯಲ್ಲಿ ಬೆಂಗಳೂರಿನಲ್ಲಿರುವ ಎಲ್ಲಾ ತುಳು ಸಂಘಟನೆಗಳ ಪದಾಧಿಕಾರಿಗಳು ಹಾಗೂ ತುಳು ಅಭಿಮಾನಿಗಳು ಸೇರಿಕೊಂಡು ಆಗಸ್ಟ್ 4ರಂದು ವಿವಿಧ ಸ್ಪರ್ಧೆಗಳು, ತುಳು ಕವಿತಾ ವಾಚನ, ಬಹುಭಾಷಾ ಕವಿಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು.
ಮಾಜಿ ಮುಖ್ಯಮಂತ್ರಿ ಹಾಗೂ ತುಳು ಅಕಾಡಮಿಯ ಸ್ಥಾಪನೆಗೆ ಕಾರಣಕರ್ತರಾದ ಡಾ. ವೀರಪ್ಪಮೊಲಿ, ಕನ್ನಡ ಸಂಸ್ಕೃೃತಿ ಇಲಾಖೆ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಮತ್ತು ಕನ್ನಡ ಸಂಸ್ಕೃೃತಿ ಇಲಾಖೆಯ ನಿರ್ದೇಶಕಿ ಕೆ.ಎಂ.ಜಾನಕಿ ಅವರನ್ನು ಆಹ್ವಾನಿಸಲಿ ನಿರ್ಧರಿಸಲಾಯಿತು.
ಸಭೆಯಲ್ಲಿ ಅಕಾಡಮಿಯ ಅಧ್ಯಕ್ಷ ಎ.ಸಿ.ಭಂಡಾರಿ, ಸದಸ್ಯರಾದ ಬೆನೆಟ್ ಜಿ. ಅಮ್ಮನ್ನ, ತಾರನಾಥ ಗಟ್ಟಿ ಕಾಪಿಕಾಡ್, ಪುರುಷೋತ್ತಮ ಚೇಂಡ್ಲ ಮತ್ತು ಬೆಂಗಳೂರಿನ ಕೆಲವು ತುಳು ಸಂಘಟನೆಗಳ ಮುಖ್ಯಸ್ಥರು ಹಾಗೂ ಅಭಿಮಾನಿಗಳು ಪಾಲ್ಗೊಂಡಿದ್ದರು.







