Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಲ್ತಾನ್‌ಬತ್ತೇರಿ ‘ಐತಿಹಾಸಿಕ ಕೋಟೆ’ಗೆ...

ಸುಲ್ತಾನ್‌ಬತ್ತೇರಿ ‘ಐತಿಹಾಸಿಕ ಕೋಟೆ’ಗೆ ಕಬ್ಬಿಣದ ಬೇಲಿಯ ಭದ್ರತೆ!

ಕೊನೆಗೂ ಕೋಟೆ ರಕ್ಷಣೆಗೆ ಮುಂದಾದ ಪುರಾತತ್ವ ಇಲಾಖೆ

ವಾರ್ತಾಭಾರತಿವಾರ್ತಾಭಾರತಿ7 Jun 2019 8:54 PM IST
share
ಸುಲ್ತಾನ್‌ಬತ್ತೇರಿ ‘ಐತಿಹಾಸಿಕ ಕೋಟೆ’ಗೆ ಕಬ್ಬಿಣದ ಬೇಲಿಯ ಭದ್ರತೆ!

ಮಂಗಳೂರು, ಜೂ.7: ಐತಿಹಾಸಿಕ ಕೋಟೆಗಳಲ್ಲಿ ಒಂದಾಗಿರುವ ನಗರದ ಸುಲ್ತಾನ್ ಬತ್ತೇರಿ ಈಗಾಗಲೇ ಸಾಕಷ್ಟು ಹಾನಿಗೊಳಗಾಗಿದ್ದು, ಕೊನೆಗೂ ಎಚ್ಚೆತ್ತುಕೊಂಡಿರುವ ಪುರಾತತ್ವ ಇಲಾಖೆ ಕೋಟೆಗೆ ಕಬ್ಬಿಣದ ಬೇಲಿ ಮೂಲಕ ರಕ್ಷಣೆಗೆ ಮುಂದಾಗಿದೆ.

ಐತಿಹಾಸಿಕ ಸ್ಥಳ, ಕೋಟೆ, ಕಟ್ಟಡಗಳಿಗೆ ರಕ್ಷಣೆ ನೀಡುವುದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ. ಹೊಸದಿಲ್ಲಿಯ ಕೇಂದ್ರ ಕಚೇರಿಯ ನಿರ್ದೇಶನದ ಮೇರೆಗೆ ಸುಲ್ತಾನ್ ಬತ್ತೇರಿ ಕೋಟೆಯ ಸುತ್ತ ಕಬ್ಬಿಣದ ಬೇಲಿ ಹಾಕುವ ಕಾರ್ಯ ಆರಂಭವಾಗಿದೆ.

ಕೋಟೆಯ ಸುತ್ತ ಕಬ್ಬಿಣದ ಬೇಲಿ ಹಾಕಲು ಕಬ್ಬಿಣದ ರಾಡ್, ಗೇಟ್‌ಗಳು ಬಂದಿವೆ. ಕೋಟೆಯ ಸುತ್ತ ಇದಕ್ಕಾಗಿ ಮಣ್ಣು ತೆಗೆದು ರಾಡ್ ಅಳವಡಿಸಿ ಬೇಲಿ ಹಾಕುವ ಕಾಮಗಾರಿಗೆ ಚಾಲನೆಯೂ ದೊರಕಿದೆ. ಭಾರತೀಯ ಪುರಾತತ್ವ ಸರ್ವೆಕ್ಷಣಾ ಇಲಾಖೆಯ ಅಧೀನದಲ್ಲಿರುವ ಎಲ್ಲಾ ಮಹತ್ವದ ಸ್ಥಳಗಳ ಸುತ್ತ ರಕ್ಷಣೆ ಹಾಗೂ ಭದ್ರತೆ ಒದಗಿಸುವ ನೆಲೆಯಲ್ಲಿ ಕ್ರಮ ಕೈಗೊಳ್ಳುವಂತೆ ಹೊಸದಿಲ್ಲಿಯ ಕೇಂದ್ರ ಕಚೇರಿ ಮೇರೆಗೆ ಬೆಂಗಳೂರಿನಲ್ಲಿ ರುವ ಇಲಾಖೆಯ ವತಿಯಿಂದ ಸುಲ್ತಾನ್‌ಬತ್ತೇರಿ ಐತಿಹಾಸಿಕ ಕೋಟೆಗೆ ರಕ್ಷಣೆ ಒದಗಿಸುವ ಕಾಮಗಾರಿಗೆ ಇತ್ತೀಚೆಗೆ ಟೆಂಡರ್ ಕರೆಯಲಾಗಿತ್ತು.

ಸುಲ್ತಾನ್ ಬತ್ತೇರಿ ಕೋಟೆಯ ಹೊರಭಾಗ ಕಸ ಕಡ್ಡಿ, ತ್ಯಾಜ್ಯಗಳು ತುಂಬಿ ಅವಗಣನೆಗೆ ಒಳಗಾಗಿತ್ತು. ಲಾರಿ ಮುಖೇನ ಮಣ್ಣನ್ನು ಸುರಿದು ಇಲ್ಲಿ ಡಂಪಿಂಗ್ ಯಾರ್ಡ್ ರೀತಿ ಮಾಡಿದ್ದರು. ಮಳೆಗಾಲದಲ್ಲಿ ಈ ವ್ಯಾಪ್ತಿಯಲ್ಲಿ ನಿರ್ವಹಣೆ ಇಲ್ಲದೆ ಗಿಡಗಂಟಿಗಳು ತುಂಬಿಕೊಳ್ಳುತ್ತದೆ. ಇದರಿಂದ ಮುಕ್ತಿ ನೀಡುವ ಹಿನ್ನೆಲೆಯಲ್ಲಿ ಇದೀಗ ಕೋಟೆಯ ಹೊರಭಾಗದಲ್ಲಿ ಕಬ್ಬಿಣದ ಬೇಲಿ ಅಳವಡಿಸಲು ಉದ್ದೇಶಿಸಲಾಗಿದೆ. ಈ ಮೂಲಕ ಕೋಟೆಯ ಸುತ್ತ ಯಾವುದೇ ಧಕ್ಕೆ ಆಗದಂತೆ ನೋಡಿಕೊಳ್ಳುವುದು ಈ ಯೋಜನೆಯ ಉದ್ದೇಶ.

1985ರಲ್ಲೇ ರಾಷ್ಟ್ರೀಯ ಮಹತ್ವದ ಸ್ಮಾರಕವಾಗಿ ಘೋಷಣೆ

ಪುರಾತತ್ವ ಇಲಾಖೆಗೆ ಸಂಬಂಧಿಸಿ ಮಂಗಳೂರಿನಲ್ಲಿ ಕಚೇರಿ ಇಲ್ಲದ ಹಿನ್ನೆಲೆಯಲ್ಲಿ ಸುಲ್ತಾನ್‌ಬತ್ತೇರಿಯಲ್ಲಿ ನಡೆಸಲು ಉದ್ದೇಶಿಸಿರುವ ಕಾಮಗಾರಿಯ ಬಗ್ಗೆ ದ.ಕ. ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆಗೆ ಯಾವುದೇ ಮಾಹಿತಿ ಇಲ್ಲ.

ಈ ಕೋಟೆಯ ನಿರ್ಮಾಣಕ್ಕೂ ಒಂದು ಐತಿಹಾಸಿಕ ಕಾರಣವಿದೆ. ಅಂದರೆ ಗುರುಪುರ ನದಿಗೆ ಯುದ್ಧ ನೌಕೆಗಳು ಬರುವುದನ್ನು ತಡೆಯಲು ಟಿಪ್ಪು ಸುಲ್ತಾನನು ಕಾವಲು ಕೋಟೆಯಾದ ಈ ಸುಲ್ತಾನ್ ಬತ್ತೇರಿಯನ್ನು ನಿರ್ಮಿಸಿದ್ದ. ಇದು ಸಣ್ಣದಾದ ಒಂದು ಕಾವಲು ಗೋಪುರವಾದರೂ ಸಹ ಕೋಟೆಯಂತೆ ಕಾಣುತ್ತಿದೆ. ಪಿರಂಗಿಗಳ ಮೂಲಕ ಗುಂಡುಗಳನ್ನು ಹಾರಿಸುವ ಸಲುವಾಗಿ ಇದು ರಚಿತವಾಗಿದೆ ಎಂದು ಇಲ್ಲಿ ಅಳವಡಿಸಲಾದ ದಾಖಲೆಯಲ್ಲಿ ಉಲ್ಲೇಖಿಸಲಾಗಿದೆ.

1784ರಲ್ಲಿ ಗುರುಪುರ ನದಿಯ ತಟದಲ್ಲಿ ನಿರ್ಮಾಣಗೊಂಡ ಈ ಕೋಟೆಯು ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ಅಧೀನಕ್ಕೊಳಪಟ್ಟಿವೆ. ಅಂದರೆ ಪ್ರಾಚೀನ ಸ್ಮಾರಕ, ಪುರಾತತ್ವ ಸ್ಥಳ ಹಾಗೂ ಅವಶೇಷಗಳ ಅಧಿನಿಯಮ 1985ರ ಪ್ರಕಾರ ಸಂರಕ್ಷಿತ ಸ್ಮಾರಕ ಅಂದರೆ ರಾಷ್ಟ್ರೀಯ ಮಹತ್ವದ ಸ್ಮಾರಕ ಎಂದು ಘೋಷಿಸಲಾಗಿದೆ.ಸುಲ್ತಾನ್‌ಬತ್ತೇರಿ ಕೋಟೆಯ ಮಹತ್ವವನ್ನು ಸಾರುವ ಫಲಕವೊಂದು ಇಲ್ಲಿ ಎಡಬದಿಯಲ್ಲಿದ್ದರೆ, ‘ಹಾನಿಗೈದರೆ ಶಿಕೆ’್ಷ ಎಂಬ ದಂಡದ ಎಚ್ಚರಿಕೆ ಫಲಕವು ಬಲಬದಿಯಲ್ಲಿದೆ. ಅದು ಬಿಟ್ಟರೆ ಇಲ್ಲಿ ಬೇರೇನೂ ಕಾಣಲು ಸಿಗುವುದಿಲ್ಲ. ಐತಿಹಾಸಿಕ ಸ್ಮಾರಕವಾಗಿ ಗುರುತಿಸಲ್ಪಟ್ಟಿರುವ ಈ ಕೋಟೆಗೆ ಅಗತ್ಯ ಸೌಲಭ್ಯಗಳೇ ಇಲ್ಲ. ಜತೆಗೆ, ಇಲ್ಲಿನ ಕೋಟೆಯ ರಕ್ಷಣೆಗೆ ಕಾವಲುಗಾರರಿಲ್ಲ. ವಿದೇಶದಿಂದ ಬರುವ ಪ್ರವಾಸಿಗರಿಗೆ ಮಾಹಿತಿ ನೀಡಲು ಮಾರ್ಗದರ್ಶಕರೂ ಇಲ್ಲ !

share
ವಾರ್ತಾಭಾರತಿ
ವಾರ್ತಾಭಾರತಿ
Next Story
X