Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಯುಎನ್‌ಎಸ್‌ಸಿ ನಿರ್ಬಂಧ ಸಮಿತಿಯಲ್ಲಿ...

ಯುಎನ್‌ಎಸ್‌ಸಿ ನಿರ್ಬಂಧ ಸಮಿತಿಯಲ್ಲಿ ಪಾರದರ್ಶಕತೆಯ ಕೊರತೆ: ಭಾರತದ ಟೀಕೆ

ವಾರ್ತಾಭಾರತಿವಾರ್ತಾಭಾರತಿ7 Jun 2019 9:33 PM IST
share
ಯುಎನ್‌ಎಸ್‌ಸಿ ನಿರ್ಬಂಧ ಸಮಿತಿಯಲ್ಲಿ ಪಾರದರ್ಶಕತೆಯ ಕೊರತೆ: ಭಾರತದ ಟೀಕೆ

ವಿಶ್ವಸಂಸ್ಥೆ,ಜೂ.7: ಪಾಕಿಸ್ತಾನ ಮೂಲದ ಜೈಶೆ ಮುಹಮ್ಮದ್‌ನ ಮುಖ್ಯಸ್ಥ ಮಸೂದ್ ಅಝರ್‌ನನ್ನು ಜಾಗತಿಕ ಭಯೋತ್ಪಾದಕನೆಂದು ಕಪ್ಪುಪಟ್ಟಿಯಲ್ಲಿ ಸೇರಿಸಲು ದಶಕಕ್ಕೂ ಹೆಚ್ಚಿನ ಸಮಯವನ್ನು ತೆಗೆದುಕೊಂಡ ವಿಶ್ವಸಂಸ್ಥೆಯ ಭದ್ರತಾ ಮಂಡಳಿ (ಯುಎನ್‌ಎಸ್‌ಸಿ)ಯ ನಿರ್ಬಂಧಗಳ ಸಮಿತಿಯ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆಯ ಕೊರತೆಯನ್ನು ಭಾರತವು ಕಟುವಾಗಿ ಟೀಕಿಸಿದೆ.

ಭದ್ರತಾ ಮಂಡಳಿಯಲ್ಲಿನ ಅಂಗಸಂಸ್ಥೆಗಳ ಅಪ್ರತ್ಯಕ್ಷ ಮುಖವನ್ನು ಪ್ರಸ್ತಾಪಿಸಿದ ವಿಶ್ವಸಂಸ್ಥೆಯಲ್ಲಿ ಭಾರತದ ಉಪ ಕಾಯಂ ಪ್ರತಿನಿಧಿ ಕೆ.ನಾಗರಾಜ ನಾಯ್ಡು ಅವರು,ಇಂತಹ ಹಲವಾರು ಸಂಸ್ಥೆಗಳನ್ನು ಸೃಷ್ಟಿಸಿರುವುದನ್ನು ಮತ್ತು ವ್ಯಕ್ತಿಗಳನ್ನು ಮತ್ತು ಸಂಸ್ಥೆಗಳನ್ನು ಕಪ್ಪುಪಟ್ಟಿಗೆ ಸೇರಿಸುವ ಮತ್ತು ತೆಗೆದುಹಾಕುವವ ನಿರ್ಧಾರಗಳನ್ನು ಕೈಗೊಳ್ಳುವಂತಹ ನಿರ್ಣಾಯಕ ಜವಾಬ್ದಾರಿಗಳನ್ನು ಅವುಗಳಿಗೆ ವಹಿಸುತ್ತಿರುವುದನ್ನು ಈ ಎಲ್ಲ ವರ್ಷಗಳಲ್ಲಿ ನೋಡುತ್ತಲೇ ಬಂದಿದ್ದೇವೆ ಎಂದರು.

ಗುರುವಾರ ಯುಎನ್‌ಎಸ್‌ಸಿಯಲ್ಲಿ ಮಂಡಳಿಯ ಕಾರ್ಯ ವಿಧಾನಗಳ ಕುರಿತು ಬಹಿರಂಗ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ನಾಯ್ಡು,ಈ ಅಂಗಸಂಸ್ಥೆಗಳು ವಿಭಿನ್ನ ಮತ್ತು ಸಿದ್ಧ ಕಾರ್ಯ ವಿಧಾನಗಳನ್ನು ಹೊಂದಿರುವುದು ಮಾತ್ರವಲ್ಲ,ಅವು ಸನದಿನಲ್ಲಿ ಅಥವಾ ಮಂಡಳಿಯ ನಿರ್ಣಯಗಳಲ್ಲಿ ಯಾವುದೇ ಕಾನೂನು ಸಮರ್ಥನೆಯನ್ನು ಹೊಂದಿರದ ಅಸ್ಪಷ್ಟ ಪದ್ಧತಿಗಳನ್ನೂ ಅನುಸರಿಸುತ್ತಿವೆ. ಈ ಸಮಿತಿಗಳು ತಮ್ಮ ಕಾರ್ಯದಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಳ್ಳುತ್ತಿಲ್ಲ ಮತ್ತು ಇವುಗಳ ವಿವಿಧ ನಿರ್ಣಯಗಳ ಬಗ್ಗೆ ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳಲ್ಲಿ ಅಥವಾ ಅಂತರರಾಷ್ಟ್ರೀಯ ಸಮುದಾಯದಲ್ಲಿ ಅರಿವನ್ನು ಮೂಡಿಸುವ ಯಾವುದೇ ಪ್ರಯತ್ನಗಳು ನಡೆಯುತ್ತಿಲ್ಲ ಎಂದರು.

ವ್ಯಕ್ತಿಗಳನ್ನು ಅಥವಾ ಸಂಸ್ಥೆಗಳನ್ನು ಕಪ್ಪುಪಟ್ಟಿಗೆ ಸೇರಿಸುವ ಈ ಸಮಿತಿಗಳ ನಿರ್ಧಾರಗಳು ಸದಸ್ಯ ರಾಷ್ಟ್ರಗಳಿಗೆ ಗೊತ್ತಾಗುವ,ಆದರೆ ಸದಸ್ಯ ರಾಷ್ಟ್ರಗಳು ಕಪ್ಪುಪಟ್ಟಿಯಲ್ಲಿ ಸೇರ್ಪಡೆಗೆ ಸಲ್ಲಿಸುವ ಕೋರಿಕೆಗಳನ್ನು ತಿರಸ್ಕರಿಸುವ ನಿರ್ಧಾರಗಳನ್ನೆಂದಿಗೂ ಬಹಿರಂಗಗೊಳಿಸದ ಪದ್ಧತಿಯನ್ನು ಉಲ್ಲೇಖಿಸಿದ ನಾಯ್ಡು,ಭಯೋತ್ಪಾದಕ ನಾಯಕರನ್ನು ಕಪ್ಪುಪಟ್ಟಿಗೆ ಸೇರಿಸುವ ಸದಸ್ಯ ರಾಷ್ಟ್ರಗಳ ಪ್ರಯತ್ನ ಇತರ ಸದಸ್ಯರ ಗಮನಕ್ಕೆ ಬರುವುದಿಲ್ಲ,ಅದೇ ರೀತಿ ತಮ್ಮ ಹೆಸರನ್ನು ಕಪ್ಪುಪಟ್ಟಿಯಿಂದ ತೆಗೆಸಲು ಭಯೋತ್ಪಾದಕ ನಾಯಕರು ನಡೆಸುವ ಪ್ರಯತ್ನಗಳೂ ಗಮನಕ್ಕೆ ಬರುವುದಿಲ್ಲ ಎಂದು ಹೇಳಿದರು.

ಭದ್ರತಾ ಮಂಡಳಿಯು ಮಸೂದ್ ಅಝರ್‌ನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಿಸುವಂತೆ ಮಾಡಲು ತನ್ನ ಮತ್ತು ಮಿತ್ರರಾಷ್ಟ್ರಗಳಾದ ಅಮೆರಿಕ,ಬ್ರಿಟನ್ ಮತ್ತು ಫ್ರಾನ್ಸ್‌ಗಳ ಹತ್ತು ವರ್ಷಗಳ ಪ್ರಯತ್ನದಲ್ಲಿ ಭಾರತವು ಕೊನೆಗೂ ಕಳೆದ ಮೇ ತಿಂಗಳಲ್ಲಿ ಯಶಸ್ವಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X