ಕೌಟುಂಬಿಕ ಕಲಹ ಹಿನ್ನೆಲೆ: ಉದ್ಯೋಗಿ ಆತ್ಮಹತ್ಯೆ

ಬೆಂಗಳೂರು, ಜೂ.7: ಕೌಟುಂಬಿಕ ಕಲಹ ಹಿನ್ನೆಲೆ ಐಟಿಪಿಎಲ್ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಆರ್‌ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.
ಮೇಡಹಳ್ಳಿಯ ನಾಯಕ ಲೇಔಟ್‌ನ ದಿನೇಶ್ ಕುಮಾರ್(31) ಎಂಬಾತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.
ಐಟಿಪಿಎಲ್‌ನ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದ ದಿನೇಶ್ ಕುಮಾರ್, ಗುರುವಾರ ರಾತ್ರಿ 7ರ ವೇಳೆ ಕೆಲಸ ಮುಗಿಸಿಕೊಂಡು ಮನೆಗೆ ಬಂದಿದ್ದಾರೆ. ಅದಾದ ಕೆಲವೇ ಸಮಯದಲ್ಲಿ ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಎಷ್ಟುಬಾರಿ ಮೊಬೈಲ್ ಕರೆ ಮಾಡಿದರೂ ಸ್ವೀಕರಿಸದಿದ್ದರಿಂದ ಆತಂಕಗೊಂಡು ತವರಿಗೆ ಹೋಗಿದ್ದ ಪತ್ನಿ ಪಕ್ಕದ ಮನೆಯವರಿಗೆ ವಿಷಯ ತಿಳಿಸಿದ್ದಾರೆ.
ಪಕ್ಕದ ಮನೆಯವರು ಬಾಗಿಲು ಮುರಿದು ಒಳಹೋಗಿ ನೋಡಿದಾಗ ದಿನೇಶ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಪ್ರಕರಣ ದಾಖಲಿಸಿರುವ ಕೆಆರ್ ಪುರಂ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story





