ಬಂಟ್ವಾಳ: ಸರಕಾರಿ ಬಸ್ - ದ್ವಿಚಕ್ರ ವಾಹನ ಢಿಕ್ಕಿ: ಇಬ್ಬರಿಗೆ ಗಾಯ
ಬಂಟ್ವಾಳ: ಸರಕಾರಿ ಬಸ್‍ವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರವಾಹನದ ಸವಾರರಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟು ಎಂಬಲ್ಲಿ ಶುಕ್ರವಾರ ನಡೆದಿದೆ.
ಬೆಳ್ತಂಗಡಿ ನಿವಾಸಿಗಳಾದ ಶಶಿಧರ್ (29) ಮತ್ತು ಅವರ ಸಂಬಂಧಿ ಮೋಹಿತಾ (28) ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ.
ಮಂಗಳೂರು ಕಡೆಗೆ ಹೋಗುತ್ತಿದ್ದ ಬಸ್ ಜಕ್ರಿಬೆಟ್ಟು ಎಂಬಲ್ಲಿ ದ್ವಿಚಕ್ರವಾಹನಕ್ಕೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತ ಸಂದರ್ಭ ಅದೇ ದಾರಿಯಲ್ಲಿ ಸಾಗುತ್ತಿದ್ದ ಬೆಳ್ತಂಗಡಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಮಾಜಿ ಶಾಸಕ ವಸಂತ ಬಂಗೇರ ಅವರ ಕಾರಿನ ಚಾಲಕ ನೌಶಾದ್ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸುವ ಮೂಲಕ ಸಮಯ ಪ್ರಜ್ಞೆ ಮೆರೆದರು.
ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್ಸೈ ಮಂಜುನಾಥ್ ಹಾಗೂ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Next Story





