Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಂಚಿಯಲ್ಲಿ ಯೋಗ ದಿನಾಚರಣೆಯ ಪ್ರಧಾನ...

ರಾಂಚಿಯಲ್ಲಿ ಯೋಗ ದಿನಾಚರಣೆಯ ಪ್ರಧಾನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ8 Jun 2019 7:56 PM IST
share
ರಾಂಚಿಯಲ್ಲಿ ಯೋಗ ದಿನಾಚರಣೆಯ ಪ್ರಧಾನ ಕಾರ್ಯಕ್ರಮ

ಹೊಸದಿಲ್ಲಿ, ಜೂ.8: ಜೂನ್ 21ರಂದು ನಡೆಯಲಿರುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಧಾನ ಕಾರ್ಯಕ್ರಮವನ್ನು ಜಾಖರ್ಂಡ್ ರಾಜಧಾನಿ ರಾಂಚಿಯಲ್ಲಿ ಆಯೋಜಿಸಲಾಗಿದ್ದು ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ ಎಂದು ಆಯುಷ್ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.

ರಾಂಚಿಯ ಪ್ರಭಾತ್ ತಾರಾ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸುಮಾರು 30 ಸಾವಿರ ಜನ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಪ್ರಧಾನ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಜೂನ್ 13ರಂದು ರಾಂಚಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯ ಸರಕಾರದ ಹಲವು ಉನ್ನತಾಧಿಕಾರಿಗಳು, ಯೋಗ ಸಂಘಟಕರು ಹಾಗೂ ಯೋಗ ಶಿಕ್ಷಕರು ಪಾಲ್ಗೊಳ್ಳಲಿದ್ದಾರೆ. ದಿಲ್ಲಿಯಲ್ಲಿ ಪ್ರಧಾನ ಕಾರ್ಯಕ್ರಮ ದಿಲ್ಲಿ ನಗರಪಾಲಿಕೆ ಆಶ್ರಯದಲ್ಲಿ ರಾಜಪಥ್‌ನಲ್ಲಿ ನಡೆಯಲಿದೆ.

ಅಲ್ಲದೆ ಕೆಂಪು ಕೋಟೆ, ನೆಹರೂ ಪಾರ್ಕ್, ಲೋಧಿ ಗಾರ್ಡನ್, ತಲ್‌ಕಟೋರ ಗಾರ್ಡನ್, ಯಮುನಾ ಸ್ಪೋರ್ಟ್ಸ್ ಕಾಂಪ್ಲೆಕ್ಸ್, ಸ್ವರ್ಣ ಜಯಂತಿ ಪಾರ್ಕ್- ರೋಹಿಣಿ ಮತ್ತು ದ್ವಾರಕಾ ವಿಭಾಗ-11ರಲ್ಲೂ ಯೋಗ ಕಾರ್ಯಕ್ರಮ ನಡೆಯಲಿದೆ ಎಂದು ಆಯುಷ್ ಇಲಾಖಾಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ಸರಕಾರದ ಸಚಿವಾಲಯ, ವಿಭಾಗಗಳು, ಎಲ್ಲಾ ರಾಜ್ಯ ಸರಕಾರಗಳು ಹಾಗೂ ಇತರ ಸಂಬಂಧಿತ ಸಂಸ್ಥೆಗಳು ಸಂಘಟಿತ ರೀತಿಯಲ್ಲಿ ಕಾರ್ಯ ನಿರ್ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಹಾಗೂ ಯೋಗದಿಂದ ಲಭಿಸುವ ಆರೋಗ್ಯಭಾಗ್ಯವನ್ನು ಸಾರ್ವಜನಿಕರಿಗೆ ತಿಳಿಯಪಡಿಸಬೇಕು ಎಂದು ಆಯುಷ್ ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ. ಯೋಗ ದಿನಾಚರಣೆಯ ಯಶಸ್ಸಿಗೆ ಕೈಜೋಡಿಸಿರುವ ದೇಶದ ಪ್ರಮುಖ ಯೋಗಗುರುಗಳು ಸಾಮಾನ್ಯ ಯೋಗ ಶಿಷ್ಟಾಚಾರವನ್ನು ರೂಪಿಸಿದ್ದಾರೆ. 45 ನಿಮಿಷಗಳ ಈ ಕಾರ್ಯಕ್ರಮದಲ್ಲಿ ಯೋಗಾಸನಗಳ ಸರಣಿ ಪ್ರದರ್ಶನ ಇರುತ್ತದೆ ಎಂದು ಇಲಾಖೆ ತಿಳಿಸಿದೆ.

 ಜೂನ್ 21ರ ಯೋಗದಿನಾಚರಣೆಯ ಸಿದ್ಧತೆಗಾಗಿ ಪ್ರಮುಖ ಉದ್ಯಮ ಸಂಸ್ಥೆಗಳಾದ ಸಿಐಐ, ಎಫ್‌ಐಸಿಸಿಐ, ಇನ್‌ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರಿ, ಶಿಕ್ಷಣ ಸಂಸ್ಥೆಗಳಾದ ಸಿಬಿಎಸ್‌ಇ, ಎನ್‌ಸಿಇಆರ್‌ಟಿ, ಯುಜಿಸಿ, ಡಿಎವಿ ಮುಂತಾದ ಸಂಸ್ಥೆಗಳು ಈಗಾಗಲೇ ಹಲವು ಕಾರ್ಯಕ್ರಮ ಹಮ್ಮಿಕೊಂಡಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X