ಲಾರಿ ಢಿಕ್ಕಿ: ಮೆಟ್ರೋ ಗುತ್ತಿಗೆ ನೌಕರ ಮೃತ್ಯು

ಬೆಂಗಳೂರು, ಜೂ.8: ಹಿಂದಿನಿಂದ ವೇಗವಾಗಿ ಬಂದ ಲಾರಿ ಢಿಕ್ಕಿ ಹೊಡೆದು ಬೈಕ್‌ನಲ್ಲಿ ಹೋಗುತ್ತಿದ್ದ ನಮ್ಮ ಮೆಟ್ರೋ ಗುತ್ತಿಗೆ ನೌಕರ ಮೃತಪಟ್ಟಿರುವ ಘಟನೆ ಇಲ್ಲಿನ ಪೀಣ್ಯ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ದಾಸನಪುರದ ಜಗದೀಶ್(25) ಮೃತಪಟ್ಟ ನೌಕರ ಎಂದು ಪೊಲೀಸರು ಗುರುತಿಸಿದ್ದಾರೆ.
ಖಾಸಗಿ ಕಂಪೆನಿಯ ಜೊತೆಗೆ ಮೆಟ್ರೋದಲ್ಲಿ ಗುತ್ತಿಗೆ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಜಗದೀಶ್ ರಾತ್ರಿ 10ರ ವೇಳೆ ಮನೆಯಿಂದ ರಾತ್ರಿ ಪಾಳಯದ ಕೆಲಸಕ್ಕೆ ಬೈಕ್‌ನಲ್ಲಿ ಹೋಗುತ್ತಿದ್ದರು. ಮಾರ್ಗಮಧ್ಯೆ ತುಮಕೂರು ರಸ್ತೆಯ ಮೇಲುಸೇತುವೆ ರಸ್ತೆಯಲ್ಲಿ ಪೀಣ್ಯ ಮೆಟ್ರೋ ನಿಲ್ದಾಣದ ಬಳಿ ಬರುತ್ತಿದ್ದಾಗ ಹಿಂದಿನಿಂದ ಬಂದ ಲಾರಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ
ಢಿಕ್ಕಿಯ ರಭಸಕ್ಕೆ ಕೆಳಗೆ ಬಿದ್ದ ಜಗದೀಶ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿರುವ ಪೀಣ್ಯ ಸಂಚಾರ ಪೊಲೀಸರು, ಲಾರಿ ಚಾಲಕನನ್ನು ಬಂಧಿಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ.
Next Story





