ಕುದ್ರೋಳಿ: ಇತ್ತಂಡಗಳ ಮಧ್ಯೆ ಹೊಡೆದಾಟ
ಮಂಗಳೂರು, ಜೂ.8: ಕ್ಷುಲ್ಲಕ ಕಾರಣಕ್ಕಾಗಿ ಕುದ್ರೂಳಿಯ ಹಳೆಗೇಟ್ ಬಳಿ ಇತ್ತಂಡಗಳ ಮಧ್ಯೆ ಹೊಡೆದಾಟ ನಡೆದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ರಾಜೇಶ್ ಎಂಬವರ ಮೇಲೆ ಹಲ್ಲೆ ಧನುಶ್, ದೀಕ್ಷಿತ್ ಮತ್ತಿತರರು ಹಲ್ಲೆ ನಡೆಸಿದ್ದರೆನ್ನಲಾಗಿದೆ. ಜಗ್ಗು ಎಂಬವರ ಮದುವೆ ಕಾರ್ಯಕ್ರಮದಲ್ಲಿ ರಾಜೇಶ್ ಮತ್ತಿತರರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಅದೇ ದ್ವೇಷದಿಂದ ಕುದ್ರೋಳಿ ಹಳೆಗೇಟ್ ರಸ್ತೆಯಲ್ಲಿ ರಾತ್ರಿ ಸುಮಾರು 1 ಗಂಟೆಯ ವೇಳೆಗೆ ಹೊಡೆದಾಡಿಕೊಂಡರು ಎನ್ನಲಾಗಿದೆ.
ಹಲ್ಲೆಗೊಳಗಾದ ರಾಜೇಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಪಿಗಳ ವಿರುದ್ಧ ಬಂದರು ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





