ಟಿಪ್ಪರ್ ಢಿಕ್ಕಿ: ಬೈಕ್ ಸವಾರ ಮೃತ್ಯು

ಮಂಡ್ಯ, ಜೂ.8: ಟಿಪ್ಪರ್ ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಹಿಂಬದಿ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ಮಳವಳ್ಳಿ ತಾಲೂಕಿನ ಬಾಚಹಳ್ಳಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.
ಕೋಲಾರ ಜಿಲ್ಲೆ ರಾಮತ್ ನಗರದ ತೌಷಿದ್ ಪಾಷ (38) ಅಪಘಾತದಲ್ಲಿ ಸಾವನ್ನಪ್ಪಿದ್ದು, ಗಂಭೀರ ಗಾಯಗೊಂಡಿರುವ ಹಿಂಬಂದಿ ಸವಾರ ನವೀದ್ ಅಹ್ಮದ್ ಅವರನ್ನು ಮಳವಳ್ಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಳವಳ್ಳಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





