ನದಿಯಲ್ಲಿ 5 ವರ್ಷದ ಬಾಲಕಿಯ ಮೃತದೇಹ ಪತ್ತೆ: ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ; ಪೊಲೀಸ್

ಉಜ್ಜೈನಿ, ಜೂ. 8: ಮಧ್ಯಪ್ರದೇಶದ ಉಜ್ಜೈನಿಯ ನದಿಯಲ್ಲಿ ಶುಕ್ರವಾರ ಐದು ವರ್ಷದ ಬಾಲಕಿಯ ಮೃತದೇಹ ಪತ್ತೆಯಾಗಿದ್ದು, ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆಗೈಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
‘‘ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆಗೈಯಲಾಗಿದೆ. ನಾವು ತನಿಖೆಗೆ ವಿಶೇಷ ತನಿಖಾ ತಂಡ ರಚಿಸಿದ್ದೇವೆ. ಶಂಕಿತರ ವಿಚಾರಣೆ ನಡೆಸುತ್ತಿದ್ದೇವೆ.’’ ಎಂದು ಉಜ್ಜೈನಿಯ ಪೊಲೀಸ್ ಅಧೀಕ್ಷಕ ಸಚಿನ್ ಆತುಲ್ಕರ್ ತಿಳಿಸಿದ್ದಾರೆ.
ಬಾಲಕಿ ನಾಪತ್ತೆಯಾದ ಬಳಿಕ ಕುಟುಂಬದ ಸದಸ್ಯರು ಶುಕ್ರವಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅನಂತರ ಪೊಲೀಸರು ಶಿಪ್ರಾ ನದಿಯಲ್ಲಿ ಬಾಲಕಿಯ ಮೃತದೇಹ ತೇಲುತ್ತಿರುವುದನ್ನು ಪತ್ತೆ ಮಾಡಿದ್ದರು.
ದೇಹದ ಮೇಲಿನ ಗಾಯದ ಗುರುತು ಗಮನಿಸಿದಾಗ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಸಾಧ್ಯತೆ ಇದೆ. ಪ್ರಕರಣಕ್ಕೆ ಸಂಬಂಧಿಸಿ ಬಾಲಕಿಯ ಮಾವ ಸಹಿತ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story





