Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಿಂಚಣಿ ಅದಾಲತ್ ಅರ್ಥಪೂರ್ಣ ಕೆಲಸ: ಶಾಸಕಿ...

ಪಿಂಚಣಿ ಅದಾಲತ್ ಅರ್ಥಪೂರ್ಣ ಕೆಲಸ: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್

ವಾರ್ತಾಭಾರತಿವಾರ್ತಾಭಾರತಿ9 Jun 2019 10:40 PM IST
share
ಪಿಂಚಣಿ ಅದಾಲತ್ ಅರ್ಥಪೂರ್ಣ ಕೆಲಸ: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ, ಜೂ.9: ಸರಕಾರ ಬಡ ಜನರಿಗಾಗಿ ನೂರಾರು ಯೋಜನೆಗಳನ್ನು ಜಾರಿಗೆ ತರುತ್ತದೆ. ಆದರೆ, ಅರ್ಹರಿಗೆ ಈ ಯೋಜನೆಗಳ ಸೌಲಭ್ಯ ನಿಜವಾಗಿಯೂ ತಲುಪುತ್ತಿದೆಯೇ ಇಲ್ಲವೇ ಎಂಬುದು ಈ ರೀತಿಯ ಅದಾಲತ್ ಕಾರ್ಯಕ್ರಮಗಳಿಂದ ತಿಳಿಯುತ್ತದೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಹಾಗೂ ಮೈಸೂರು ಮಿನರಲ್ಸ್ ನಿಗಮದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ರವಿವಾರ ತಮ್ಮ ಕ್ಷೇತ್ರದಲ್ಲಿ ಆಯೋಜಿಸಿದ್ದ ಮೂರು ದಿನಗಳ ಪಿಂಚಣಿ ಅದಾಲತ್‌ನ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಿಂಚಣಿ ಅದಾಲತ್ ನಿಜವಾಗಿಯೂ ಅರ್ಥಪೂರ್ಣವಾದ ಕೆಲಸ ಎಂದರು.

ರಸ್ತೆ, ಚರಂಡಿಗಳ ಕೆಲಸವನ್ನು ಎಲ್ಲರೂ ಮಾಡುತ್ತಾರೆ. ಆದರೆ ಮಾಡಬೇಕಾದ ನಿಜವಾದ ಕೆಲಸ ಇಲ್ಲಿದೆ. ಸರಕಾರ ಬಡ ಜನರಿಗಾಗಿ ನೂರಾರು ಯೋಜನೆಗಳನ್ನು ತರುತ್ತದೆ. ಆದರೆ ಅರ್ಹರಿಗೆ ತಲುಪುತ್ತಲೇ ಇಲ್ಲ ಎನ್ನುವ ನೈಜ್ಯ ಸತ್ಯ ಇಂತಹ ಅದಾಲತ್ ನಡೆಸಿದಾಗ ತಿಳಿಯುತ್ತದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಮಧ್ಯವರ್ತಿಗಳ ಕಾರಣದಿಂದಲೋ, ಅಧಿಕಾರಿಗಳ ನಿರ್ಲಕ್ಷದಿಂದಲೋ ಗೊತ್ತಿಲ್ಲ. ಇಂದೊ, ನಾಳೆಯೋ ಸಾಯುವಂತಹ ಸ್ಥಿತಿಯಲ್ಲಿರುವವರಿಗೆ ಪಿಂಚಣಿ ಸಿಕ್ಕಿಲ್ಲ. ಕಾಲಿಲ್ಲದವರಿಗೆ, ಕೈಯಿಲ್ಲದವರಿಗೆ, ಕಣ್ಣಿಲ್ಲದವರಿಗೆ ಮಾಸಾಶನ ಕೊಟ್ಟಿಲ್ಲ. ಎಂತೆಂತಹ ದಯನೀಯ ಸ್ಥಿತಿಯಲ್ಲಿರುವವರೆಲ್ಲ ಅರ್ಜಿ ಹಿಡಿದು ಬರುತ್ತಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು. ಈ ಜನರು ಪಡುತ್ತಿರುವ ಪಾಡು ನೋಡಿದರೆ ಕರುಳು ಕಿತ್ತು ಬರುತ್ತದೆ. ಇಂತವರ ಮನೆ ಬಾಗಿಲಿಗೆ ಹೋಗಿ ಕಿಂಚಿತ್ ಸಹಾಯ ಮಾಡುವ ಅವಕಾಶ ನನಗೆ ಸಿಕ್ಕಿದ್ದು ಯಾವ ಜನ್ಮದ ಪುಣ್ಯವೋ ತಿಳಿಯುತ್ತಿಲ್ಲ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಭಾವುಕರಾದರು. 

ಅಧಿಕಾರಿಗಳ ತಂಡದೊಂದಿಗೆ ಕುದ್ರೆಮನಿ, ತುರಮುರಿ ಮತ್ತು ಉಚಗಾಂವ್ ಗ್ರಾಮಗಳಲ್ಲಿ 3 ದಿನ ನಿರಂತರವಾಗಿ ಪಿಂಚಣಿ ಅದಾಲತ್ ನಡೆಸಲಾಯಿತು. ಮಾಸಾಶನಕ್ಕಾಗಿ 400ಕ್ಕೂ ಹೆಚ್ಚು ಹಾಗೂ ಪಡಿತರ ಚೀಟಿಗಾಗಿ 100ಕ್ಕೂ ಹೆಚ್ಚು ಅರ್ಜಿಗಳು ಬಂದವು. ಅರ್ಹರಿದ್ದವರಿಗೆ ಸ್ಥಳದಲ್ಲೇ ಮಂಜೂರು ಮಾಡಲು ಲಕ್ಷ್ಮಿ ಹೆಬ್ಬಾಳ್ಕರ್ ಅಧಿಕಾರಿಗಳಿಗೆ ಸೂಚಿಸಿದರು. ಉಳಿದವನ್ನು ಪರಿಶೀಲಿಸಿ, ವಾರದೊಳಗೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಆದೇಶಿಸಿದರು. ಕಳೆದ ವರ್ಷ ಸಾಂಬ್ರಾ ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ಪಿಂಚಣಿ ಅದಾಲತ್ ನಡೆಸಿದಾಗ 800 ಜನರಿಗೆ ಪಿಂಚಣಿ ಮಂಜೂರು ಮಾಡಿಸಲಾಗಿತ್ತು. ಇನ್ನುಳಿದ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲೂ ಶೀಘ್ರದಲ್ಲೆ ಪಿಂಚಣಿ ಅದಾಲತ್ ನಡೆಸುವುದಾಗಿ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

ನೇತ್ರ ಚಿಕಿತ್ಸೆ ವೆಚ್ಚ ಭರಿಸುವ ಭರವಸೆ: ಉಚಗಾಂವ್‌ನಲ್ಲಿ ಶನಿವಾರ ನಡೆದ ಉಚಿತ ಕಣ್ಣು ತಪಾಸಣೆ ಶಿಬಿರದಲ್ಲಿ 150ಕ್ಕೂ ಹೆಚ್ಚು ಜನರು ಕಣ್ಣು ತಪಾಸಣೆ ಮಾಡಿಸಿಕೊಂಡರು. ಅವರಲ್ಲಿ 57 ಜನರಿಗೆ ಕನ್ನಡಕ ಅಗತ್ಯವಾಗಿದ್ದು, 27 ಜನರಿಗೆ ಶಸ್ತ್ರ ಚಿಕಿತ್ಸೆ ಅಗತ್ಯವಿದ್ದು, ಎಲ್ಲವನ್ನೂ ಉಚಿತವಾಗಿ ಮಾಡಿಸಿಕೊಂಡುವುದಾಗಿ ಅವರು ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X