ಚಾಮರಾಜನಗರದಲ್ಲಿ ಧಾರಾಕಾರ ಮಳೆ

ಸಾಂದರ್ಭಿಕ ಚಿತ್ರ
ಚಾಮರಾಜನಗರ, ಜೂ.9: ಕೇರಳ ರಾಜ್ಯದಿಂದ ಗಡಿ ಚಾಮರಾಜನಗರ ಜಿಲ್ಲೆಯತ್ತ ಮುಂಗಾರು ಮಳೆ ಪ್ರವೇಶ ಮಾಡಿದೆ. ಈ ಹಿನ್ನಲೆಯಲ್ಲಿ ಅಂತರಾಜ್ಯ ಗಡಿಯಲ್ಲಿ ಮಳೆಯಾಗಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದೆ.
ಕರ್ನಾಟಕ ಕೇರಳ ಗಡಿ ಚಾಮರಾಜನಗರ ಜಿಲ್ಲೆಗೆ ಇಂದು ಮದ್ಯಾಹ್ನದ ವೇಳೆಗೆ ಮುಂಗಾರು ಮಳೆ ಪ್ರವೇಶ ಮಾಡಿದ್ದು, ಬಂಡೀಪುರ, ಹಿಮವದ್ ಗೋಪಾಲಸ್ವಾಮಿ ಬೆಟ್ಟ, ಮೂಲೆಹೊಳೆ ಸೇರಿದಂತೆ ಹಲವಾರು ಭಾಗದಲ್ಲಿ ಧಾರಾಕಾರ ಮಳೆಯಾಗಿದ್ದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದೆ.
ಕೇರಳದ ಮೂಲಕ ಕರ್ನಾಟಕದ ಗಡಿಯೊಳಗೆ ಮುಂಗಾರು ಮಳೆ ಪ್ರವೇಶ ಮಾಡಿದ್ದ ಪರಿಣಾಮವಾಗಿ ಬಿಳಿಗಿರಿರಂಗನಬೆಟ್ಟ, ಬೇಡಗುಳಿ, ತಮಿಳುನಾಡಿನ ಗಡಿಯಲ್ಲೂ ಮಳೆಯಾಗುತ್ತಿದೆ ಎನ್ನುವ ಮಾಹಿತಿಗಳು ಲಭ್ಯವಾಗಿದೆ.
ಬಿಸಿಲಿನ ತಾಪಕ್ಕೆ ಬಸವಳಿದ್ದ ಗಡಿ ಚಾಮರಾಜನಗರ ಜಿಲ್ಲೆಯ ಜನತೆ ಹಾಗೂ ಅನ್ನದಾತರು, ಮುಂಗಾರು ಮಳೆ ಆಗಮನದಿಂದ ಸಂತಸಗೊಂಡಿದ್ದು, ಕೃಷಿ ಚಟುವಟಿಕೆಯಲ್ಲಿ ತೊಡಗಲಿದ್ದಾರೆ.
Next Story





