Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತನ್ನ ಕನಸಿನ ಯೋಜನೆ ಸಾಕಾರಗೊಳ್ಳುತ್ತಿದೆ:...

ತನ್ನ ಕನಸಿನ ಯೋಜನೆ ಸಾಕಾರಗೊಳ್ಳುತ್ತಿದೆ: ಮಾಜಿ ಸಚಿವ ರಮಾನಾಥ ರೈ ಸಂತಸ

ಕಡೇಶಿವಾಲಯ-ಅಜಿಲಮೊಗರು ಸಂಪರ್ಕಿಸುವ ಸೌಹಾರ್ದ ಸೇತುವೆ ಕಾಮಗಾರಿ ವೀಕ್ಷಣೆ

ವಾರ್ತಾಭಾರತಿವಾರ್ತಾಭಾರತಿ10 Jun 2019 6:00 PM IST
share
ತನ್ನ ಕನಸಿನ ಯೋಜನೆ ಸಾಕಾರಗೊಳ್ಳುತ್ತಿದೆ: ಮಾಜಿ ಸಚಿವ ರಮಾನಾಥ ರೈ ಸಂತಸ

ಬಂಟ್ವಾಳ, ಜೂ. 10: "ಕಡೇಶಿವಾಲಯ-ಅಜಿಲಮೊಗರನ್ನು ಸಂಪರ್ಕಿಸುವ ಸೌಹಾರ್ದ ಸೇತುವೆ ನನ್ನ ಕನಸಿನ ಯೋಜನೆಯಾಗಿದ್ದು, ಇದೀಗ ಸಕಾರಗೊಳ್ಳುತ್ತಿರುವುದು ತನಗೆ ಖುಷಿ ತಂದಿದೆ" ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಸೋಮವಾರ ಕಡೇಶಿವಾಲಯದಲ್ಲಿ ಸೇತುವೆ ಕಾಮಗಾರಿಯನ್ನು ವೀಕ್ಷಿಸಿದ ಬಳಿಕ ಇಲ್ಲಿನ ದೇವಸ್ಥಾನದ ಮುಂಭಾಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದಕ್ಕೆ ಸೌಹಾರ್ದ ಸೇತುವೆ ಎಂಬ ಹೆಸರನ್ನಿಟ್ಟದ್ದೇ ತಾನು. ಇದು ನನ್ನದೇ ಕಲ್ಪನೆಯಾಗಿದೆ. ಕಡೇಶಿವಾಲಯ ಮತ್ತು ಅಜಿಲಮೊಗರನ್ನು ಸಂಪರ್ಕಿಸುವ ಸೇತುವೆಗೆ ಸ್ಥಳೀಯರು ತಾನು ಸಚಿವನಾಗಿದ್ದಾಗ ಬೇಡಿಕೆಯನ್ನಿಟ್ಟಿದ್ದರು. ಇದರಿಂದ ಸ್ಥಳೀಯರ  ಬೇಡಿಕೆಯ ಮೇರೆಗೆ  ಸರಕಾರಕ್ಕೆ ಪ್ರಸ್ತಾಪ ಸಲ್ಲಿಸಿದ್ದೆ. ಕಾಮಗಾರಿಗೆ ಮಂಜೂರಾತಿ ಕೊಡಿಸಿ, ಟೆಂಡರ್ ಪ್ರಕ್ರಿಯೆಯವರೆಗೂ ತನ್ನ ಅವಧಿಯಲ್ಲಿ ನಡೆದಿದೆ ಎಂದು ರೈ ಹೇಳಿದರು.

ಸ್ಥಳೀಯರು ಈ ಕುರಿತು ಹಲವಾರು ಬಾರಿ ಬೇಡಿಕೆ ಇಟ್ಟಿದ್ದು, ಕಡೇಶಿವಾಲಯ ಮತ್ತು ಮಣಿನಾಲ್ಕೂರು ಸಂಪರ್ಕ ಕೊಂಡಿಯಾಗಿರುವ ಈ ಸೇತುವೆ ನಿರ್ಮಾಣ ಕುರಿತು ಸರಕಾರಕ್ಕೆ ಪ್ರಸ್ತಾಪಿಸಿದ್ದೆ. ಮಂಜೂರುಗೊಳ್ಳುವುದು ಖಚಿತ ಎಂದಾದಾಗ 2016ರಲ್ಲಿ ತಾನು ಈ ಕುರಿತು ಘೋಷಣೆ ಮಾಡಿ, ಎರಡೂ ಧರ್ಮಗಳ ಸಂಪರ್ಕ ಸೇತುವೆಯಾದ ಕಾರಣ, ಸೌಹಾರ್ದ ಸೇತುವೆ ಎಂಬ ಹೆಸರನ್ನಿಟ್ಟಿದ್ದೆ. ಪಿಡಬ್ಲ್ಯುಡಿ ಯಿಂದ ಗಡಿಯಾರ-ಮಾವಿನಕಟ್ಟೆವರೆಗೆ ಸೇತುವೆಯನ್ನು ಸೇರಿಸಿ 31 ಕೋಟಿ ರೂ.ಗಳ ಅಂದಾಜುಪಟ್ಟಿ ಸಲ್ಲಿಸಲಾಗಿತ್ತು. ಬಳಿಕ ಇದನ್ನು ಕೆಆರ್‍ಡಿಸಿಎಲ್‍ಗೆ ನೀಡಲಾಯಿತು. 2017ನೇ ಇಸವಿಯಲ್ಲಿ ಸೇತುವೆ ಕಾಮಗಾರಿಗೆ ಮಂಜೂರಾತಿ ದೊರಕಿತು. 19.84 ಕೋಟಿ ರೂಗಳ ವೆಚ್ಚದಲ್ಲಿ ನಿರ್ಮಿಸಲಾಗುವ ಸೇತುವೆ ಕಾಮಗಾರಿಗೆ 2018ರಲ್ಲಿ ಟೆಂಡರ್ ಪ್ರಕ್ರಿಯೆಗಳು ಮುಗಿದಿದ್ದವು, ಇದೀಗ ಕಾಮಗಾರಿ ನಡೆಯುತ್ತಿದ್ದು, ಒಟ್ಟು 30 ತಿಂಗಳಲ್ಲಿ ಕೆಲಸ ಅಂತಿಮಗೊಳ್ಳಬೇಕಿದೆ ಎಂದರು.

ತಾನು ಸಚಿವನಾಗಿದ್ದಾಗ ಚಾಲನೆ ನೀಡಿದ ಕೆಲಸಗಳಾದ ಪಶ್ಚಿಮವಾಹಿನಿ, ಬಹುಗ್ರಾಮ ಕುಡಿಯುವ ನೀರು ಯೋಜನೆ ಕಾಮಗಾರಿಗಳು ಸಕಾಲಕ್ಕೆ ಜನರಿಗೆ ಉಪಯೋಗಕ್ಕೆ ದೊರಕಬೇಕು. ಈ ಕುರಿತು ತಾನು ಸದಾ ಗಮನಹರಿಸುತ್ತಿರುತ್ತೇನೆ ಎಂದ ರೈ, ಕಡೇಶಿವಾಲಯ ಗಡಿಯಾರ ರಸ್ತೆ ಅಭಿವೃದ್ಧಿ ಕುರಿತೂ ಚಿಂತನೆ ನಡೆದಿತ್ತು ಎಂದರು.

312 ಮೀಟರ್ ಉದ್ದ:

ಸೇತುವೆ 312 ಮೀಟರ್ ಉದ್ದ, 10.5 ಮೀಟರ್ ಎತ್ತರವಿರಲಿದೆ. 19.84 ಕೋಟಿ ರೂ ವೆಚ್ಚವಾಗಲಿದ್ದು, 13 ಪಿಲ್ಲರ್, 14 ಫೌಂಡೇಶನ್‍ಗಳು ನಡೆಯಲಿವೆ. ಇಲ್ಲಿದ ರಸ್ತೆ 7.5 ಮೀಟರ್ ಅಗಲವುಳ್ಳದ್ದಾಗಲಿದ್ದು, ಸುಮಾರು 30ತಿಂಗಳೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಕಾಮಗಾರಿ ಕುರಿತು ಇಂಜಿನಿಯರ್ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಬಿ.ಪದ್ಮಶೇಖರ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ಮಂಜುಳಾ ಮಾವೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಮಣಿನಾಲ್ಕೂರು ಗ್ರಾಪಂ ಅಧ್ಯಕ್ಷೆ ಗೀತಾ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಪ್ರಮುಖರಾದ ಮಾಯಿಲಪ್ಪ ಸಾಲಿಯಾನ್, ಸಂಪತ್ ಕುಮಾರ್ ಶೆಟ್ಟಿ, ಈಶ್ವರ ಪೂಜಾರಿ, ಕೆಆರ್ ಡಿಸಿಎಲ್ ಅಸಿಸ್ಟೆಂಟ್ ಇಂಜಿನಿಯರ್ ಮಂಜೇಶ್, ಗುತ್ತಿಗೆದಾರ ರಾಘವನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X