Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭೂ ಸ್ವಾದೀನ ಕಾಯ್ದೆ ತಿದ್ದುಪಡಿ...

ಭೂ ಸ್ವಾದೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತರಿಂದ ಹೆದ್ದಾರಿ ತಡೆ: ಪ್ರತಿಭಟನೆಕಾರರ ಬಂಧನ, ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ10 Jun 2019 6:24 PM IST
share
ಭೂ ಸ್ವಾದೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತರಿಂದ ಹೆದ್ದಾರಿ ತಡೆ: ಪ್ರತಿಭಟನೆಕಾರರ ಬಂಧನ, ಬಿಡುಗಡೆ

ಚಿಕ್ಕಮಗಳೂರು, ಜೂ.10: ಭೂಸ್ವಾಧೀನ ಕಾಯ್ದೆ ತಿದ್ದುಪಡಿ ಕೈಬಿಡುವುದು, ಸ್ವಾಮಿನಾಥನ್ ವರದಿ ಜಾರಿ, ರೈತರ ಸಂಪೂರ್ಣ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರುಸೇನೆ ಕಾರ್ಯಕರ್ತರು ಸೋಮವಾರ ನಗರ ಸಮೀಪದಲ್ಲಿ ಹೆದ್ದಾರಿ ತಡೆದು ಧರಣಿ ನಡೆಸಿದರು. 

ರಾಷ್ಟ್ರೀಯ ಹೆದ್ದಾರಿ 173 ಕಡೂರು-ಚಿಕ್ಕಮಗಳೂರು ರಸ್ತೆಯ ಎಐಟಿ ವೃತ್ತದ ಬಳಿ ರಸ್ತೆ ತಡೆ ನಡೆಸಿ ಧರಣಿ ಹಮ್ಮಿಕೊಂಡಿದ್ದ ರೈತಸಂಘ ಮತ್ತು ಹಸಿರು ಸೇನೆಯ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಸ್ಥಳದಲಿದ್ದ ಪೊಲೀಸರು ರಸ್ತೆ ತಡೆ ನಡೆಸಿದ ಪ್ರತಿಭಟನಕಾರರನ್ನು ಬಂಧಿಸಿ ನಂತರ ಬಿಡುಗಡೆಗೊಳಿಸಿದರು.

ರಸ್ತೆ ತಡೆಯ ನೇತೃತ್ವ ವಹಿಸಿದ್ದ ರೈತಸಂಘದ ಜಿಲ್ಲಾಧ್ಯಕ್ಷ ದುಗ್ಗಪ್ಪಗೌಡ ಮಾತನಾಡಿ, ರಾಜ್ಯ ಸರಕಾರ ಉದ್ದೇಶಿಸಿರುವ ಭೂಸ್ವಾಧೀನ ಕಾಯಿದೆ ತಿದ್ದುಪಡಿ ವಾಪಾಸ್ ಪಡೆಯಬೇಕು. ಭೂಸ್ವಾಧೀನ ಕಾಯ್ದೆಗೆ 2013ರಲ್ಲಿ ಯುಪಿಎ ಸರಕಾರ ತಿದ್ದುಪಡಿ ತಂದಿದೆ. ಈ ತಿದ್ದುಪಡಿಯು ರೈತರಿಗೆ ಅನುಕೂಲವಾಗಿದೆ. ಆದರೆ ರಾಜ್ಯ ಸರಕಾರ ಹಿಂದಿನ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿರುವುದರಿಂದ ಭೂಸ್ವಾಧೀನ ಕಾಯ್ದೆಯು ರೈತರಿಗೆ ಮರಣ ಶಾಸನವಾಗಲಿದೆ ಎಂದ ಅವರು, ಭೂಸ್ವಾಧೀನ ಕಾಯ್ದೆಗೆ ಒಂದು ವೇಳೆ ತಿದ್ದುಪಡಿ ತಂದಲ್ಲಿ ಕಾಯ್ದೆಯಲ್ಲಿರುವ ಕೆಲವೊಂದು ಅಂಶಗಳನ್ನು ಜಿಲ್ಲಾಧಿಕಾರಿಯ ವಿವೇಚನೆಗೆ ಬಿಡಲಾಗುತ್ತದೆ. ಇದರಿಂದ ರೈತ ಸಮುದಾಯಕ್ಕೆ ಅನಾನುಕೂಲವಾಗಲಿದೆ. ಕೂಡಲೇ ರಾಜ್ಯ ಸರಕಾರ ಭೂಸ್ವಾಧೀನ ಕಾಯ್ದೆಗೆ ತಂದಿರುವ ತಿದ್ದುಪಡಿಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು. 

ಸಂಘದ ಕಾರ್ಯಾಧ್ಯಕ್ಷ ದಯಾಕರ್ ಮಾತನಾಡಿ, ರೈತರಿಗೆ ಅಗತ್ಯವಾಗಿ ಬೇಕಾಗಿರುವ ವಿದ್ಯುತ್ ಸೌಲಭ್ಯವನ್ನು ಕಲ್ಪಿಸುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ. ತ್ರಿಫೇಸ್ ವಿದ್ಯುತ್‍ನ್ನು ಕೆಲವೇ ಗಂಟೆ ನೀಡುತ್ತಿದ್ದು ಇದರಿಂದ ಕುಡಿಯುವ ನೀರು ಸೇರಿದಂತೆ ರೈತನ ಹೊಲಗದ್ದೆಗಳಿಗೆ ತೀವ್ರ ತೊಂದರೆಯಾಗಿದೆ. ಹವಾಮಾನ ವೈಪರೀತ್ಯ, ಬೆಲೆ ಕುಸಿತ, ಇನ್ನಿತರೆ ಸಮಸ್ಯೆಗಳಿಂದಾಗಿ ರೈತರು ಸಾಲದ ಸುಳಿಗೆ ಸಿಲುಕಿ ಆತ್ಮಹತ್ಯೆಯ ದಾರಿ ಹಿಡಿಯುತ್ತಿದ್ದಾರೆ. ಅತೀ ಹೆಚ್ಚು ರೈತರ ಆತ್ಮಹತ್ಯೆ ಪ್ರಕರಣ ನಡೆದಿರುವ 2ನೇ ರಾಜ್ಯ ಎಂಬ ಕುಖ್ಯಾತಿಗೆ ಕರ್ನಾಟಕ ಒಳಗಾಗಿದೆ. ಹೆಚ್.ಡಿ.ಕುಮಾರಸ್ವಾಮಿ ಅವರು ಚುನಾವಣಾ ಪೂರ್ವದಲ್ಲಿ ಅಧಿಕಾರಕ್ಕೆ ಬಂದ ಕೂಡಲೆ ರೈತರ ಎಲ್ಲ ಸಾಲವನ್ನೂ ಸಂಪೂರ್ಣ ಮನ್ನಾ ಮಾಡುವುದಾಗಿ ಘೋಷಿಸಿದ್ದರು. ಕೂಡಲೇ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕೆಂದು ಒತ್ತಾಯಿಸಿದರು. 

ಪ್ರತಿಭಟನೆಯಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಎಂ.ಮಹೇಶ್, ಕೆ.ನಾಗರಾಜ್, ಮಂಜೇಗೌಡ, ನಿರಂಜನ ಮೂರ್ತಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X