ಜೂ.12: ಉಡುಪಿ ಚೈಲ್ಡ್ ಲೈನ್‌ನಿಂದ ಬಾಲಕಾರ್ಮಿಕ ವಿರೋಧಿ ದಿನಾಚರಣೆ
ಉಡುಪಿ, ಜೂ.10: ಕುಕ್ಕಿಕಟ್ಟೆಯ ಶ್ರೀಕೃಷ್ಣ ಬಾಲನಿಕೇತನ ಇಲ್ಲಿಉಡುಪಿ ಚೈಲ್ಡ್ ಲೈನ್ ಮತ್ತು ಬೀದರ್ ರೈಲ್ವೆ ಮಕ್ಕಳ ಸಹಾಯವಾಣಿಯಿಂದ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಹಾಗೂ ಚೈಲ್ಡ್ ಲೈನ್ ಸಿಬ್ಬಂದಿ ಮತ್ತು ಎಲ್ಲಾ ಪಾಲುದಾರ ಸಂಸ್ಥೆಗಳಿಗೆ ತರಬೇತಿ ಕಾರ್ಯಕ್ರಮದ ಉದ್ಘಾಟನೆ ಜೂ.12ರ ಬುಧವಾರದಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ.
ಉಡುಪಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಿ.ಎಂ. ಜೋಶಿ ಉದ್ಘಾಟಿಸಲಿದ್ದು,ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ ಲೆಲೆ, ಬಾಲನ್ಯಾಯ ಮಂಡಳಿ ಅಧ್ಯಕ್ಷೆ ಲಾವಣ್ಯ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರೋನಾಲ್ಡ್ ಫುರ್ಟಾಡೊ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಗ್ರೇಸಿ ಗೊನ್ಸಾಲ್ವೆಸ್, ಚೆನ್ನೈ ಪ್ರಾದೇಶಿಕ ಮುಖ್ಯ ಸಂಯೋಜನಾಧಿಕಾರಿ ಚಿತ್ರಾ ಆಂಚನ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಉಡುಪಿ ಚೈಲ್ಡ್ ಲೈನ್ ನಿರ್ದೇಶಕ ರಾಮಚಂದ್ರ ಉಪಾಧ್ಯಾಯ ತಿಳಿಸಿದ್ದಾರೆ.





