ಜೂ.12: ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ
ಉಡುಪಿ, ಜೂ.10: ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಉಡುಪಿ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘ ಉಡುಪಿ, ವಕೀಲರ ಸಂಘ ಉಡುಪಿ, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಜೂ.12ರಂದು ಬೆಳಗ್ಗೆ 9:30ಕ್ಕೆ ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಸಿ.ಎಂ.ಜೋಷಿ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story





