ವಾರಸುದಾರರಿಗೆ ಸೂಚನೆ
ಉಡುಪಿ, ಜೂ.10: ಕಾಪು ಪಡು ಗ್ರಾಮದ ಲೈಟ್‌ಹೌಸ್ ರಸ್ತೆಯಲ್ಲಿರುವ ಭಜನಾ ಮಂದಿರದ ಹಿಂಬದಿಯ ಮನೆಯಲ್ಲಿ ವಾಸವಿದ್ದ ಸುರೇಶ್ (65) ಎಂಬುವರು ತೀವ್ರವಾಗಿ ಅಸ್ವಸ್ಥಗೊಂಡು ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಾ ಗಿದ್ದು, ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.
ಮೃತ ವ್ಯಕ್ತಿಯ ವಾರಸುದಾರರು ಯಾರಾದರೂ ಇದ್ದಲ್ಲಿ ಕಾಪು ಪೊಲೀಸ್ ಠಾಣೆ ದೂರವಾಣಿ:0820-2551033, ಮೊಬೈಲ್:9480805449, ಉಡುಪಿ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2520333, 9480805431ನ್ನು ಸಂಪರ್ಕಿಸುವಂತೆ ಕಾಪು ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story





