Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗಿನಲ್ಲಿ ಮುಂಗಾರು ಹನಿ ಸಿಂಚನ: ಎರಡು...

ಕೊಡಗಿನಲ್ಲಿ ಮುಂಗಾರು ಹನಿ ಸಿಂಚನ: ಎರಡು ದಿನಗಳಲ್ಲಿ ಉತ್ತಮ ಮಳೆ ಸಾಧ್ಯತೆ

ವಾರ್ತಾಭಾರತಿವಾರ್ತಾಭಾರತಿ10 Jun 2019 11:59 PM IST
share
ಕೊಡಗಿನಲ್ಲಿ ಮುಂಗಾರು ಹನಿ ಸಿಂಚನ: ಎರಡು ದಿನಗಳಲ್ಲಿ ಉತ್ತಮ ಮಳೆ ಸಾಧ್ಯತೆ

ಮಡಿಕೇರಿ, ಜೂ.10: ಕಾವೇರಿನಾಡು ಕೊಡಗಿನಲ್ಲಿ ಮುಂಗಾರು ಹನಿ ಸಿಂಚನವಾಗಿದೆ. ಹವಾಮಾನ ಇಲಾಖೆಯ ಪೂರ್ವ ಸೂಚನೆಗೆ ಪೂರಕವೆಂಬಂತೆ ಇಂದು ಮುಂಜಾನೆಯಿಂದಲೆ ಮೋಡ ಕವಿದ ಮಂಜಿನ ವಾತಾವರಣದೊಂದಿಗೆ, ನಿರಂತರವಾಗಿ ಹನಿ ಮಳೆ ಕಾಣಿಸಿಕೊಂಡಿದ್ದು, ಮಳೆಗಾಲದ ವಾತಾವರಣ ಅನಾವರಣಗೊಂಡಿದೆ.

ನೆರೆಯ ಕೇರಳಕ್ಕೆ ಇದೇ ಜೂ.6 ರಂದು ನೈಋತ್ಯ ಮಾರುತಗಳ ಪ್ರವೇಶದಿಂದ ಅಧಿಕೃತವಾಗಿ ಮಳೆಗಾಲ ಆರಂಭವಾಗಿದ್ದು, ಹವಾಮಾನ ಇಲಾಖೆ ಕೊಡಗು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ನೀಡಿತ್ತು. ಅದರ ಪ್ರಕಾರ ದಟ್ಟ ಮೋಡಗಳು ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಹನಿಮಳೆಗೆ ಕಾರಣವಾಗಿರುವುದರಿಂದ, ಉರಿಬಿಸಿಲ ಬೇಗೆ ಮರೆಯಾಗಿ ತಣ್ಣನೆಯ ವಾತಾವರಣ ಮನೆ ಮಾಡಿದೆ.

ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂಗಾರು ಮಾರುತಗಳು ಕ್ಷೀಣಗೊಂಡಿರುವ ಕಾರಣದಿಂದ ತುಂತುರು ಮಳೆ ಕಾಣಿಸಿಕೊಂಡಿದೆ. ಮುಂದಿನ ಒಂದೆರಡು ದಿನಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಈಗಾಗಲೆ ಜಿಲ್ಲಾ ವ್ಯಾಪ್ತಿಯಲ್ಲಿ ಮಳೆಯ ವಾತಾವರಣ ಕಂಡು ಬಂದಿರುವುದರಿಂದ ಶಾಲಾ ಮಕ್ಕಳಾದಿಯಾಗಿ ಸಾರ್ವಜನಿಕರು ಕೊಡೆ, ರೈನ್‍ಕೋಟ್‍ಗಳೊಂದಿಗೆ ತೆರಳುತ್ತಿರುವ ದೃಶ್ಯ ಮಳೆಗಾಲಕ್ಕೆ ಮತ್ತಷ್ಟು ಪುಷ್ಟಿ ನೀಡಿದೆ.

ಕೊಡಗಿನಲ್ಲಿ ಜೂನ್ ತಿಂಗಳ ಮಳೆಯೊಂದಿಗೆ ಭತ್ತದ ಕೃಷಿ ಚಟುವಟಿಕೆಗಳು, ತೋಟಗಳಲ್ಲಿ ಕಾಫಿ ಗಿಡಗಳಿಗೆ ಗೊಬ್ಬರವನ್ನು ನೀಡುವ ಕಾರ್ಯ ಚುರುಕುಗೊಳ್ಳಲಿದೆ. ಇಲ್ಲಿಯವರೆಗೆ ಜಿಲ್ಲೆಯ ವಿವಿಧೆಡೆಗಳಲ್ಲಿ ಆಗೊಮ್ಮೆ ಈಗೊಮ್ಮೆ ಮಳೆಯಾಗುತ್ತಿತ್ತಾದರು, ಮಳೆಗಿಂತಲೂ ಹೆಚ್ಚಿನ ಬಿಸಿಲಿನ ಕಾವು ಜಿಲ್ಲೆಯ ಜನತೆಯನ್ನು ಹೈರಾಣಾಗಿಸಿತ್ತು. 

ಜನತೆಯಲ್ಲಿ ಮಳೆಗಾಲದ ಹರ್ಷದೊಂದಿಗೆ ಕಳೆದ ವರ್ಷದ ಮಳೆಹಾನಿಯ ಕಹಿ ಅನುಭವವು ತಳುಕು ಹಾಕಿಕೊಳ್ಳತೊಡಗಿದೆ. ಈ ಬಾರಿಯ ವರ್ಷಾಧಾರೆ ಮತ್ತೆ ಅಂತಹದ್ದೇ ವಿಕೋಪಗಳಿಗೆ ಕಾರಣವಾಗದಿರಲಿ ಎಂದು ಜನತೆ ಪ್ರಾರ್ಥಿಸಿಕೊಳ್ಳುತ್ತಿದ್ದಾರೆ.

ಜೀವನದಿ ಕಾವೇರಿಯ ಒಡಲು ತುಂಬುವ ಕೊಡಗು ಜಿಲ್ಲೆಯಲ್ಲಿ ನದಿಗಳು ತುಂಬಿ ಹರಿದರೆ ಮಾತ್ರ ನೆರೆ ಜಿಲ್ಲೆ ಹಾಗೂ ರಾಜ್ಯದ ಕೋಟ್ಯಾಂತರ ಜನ ನೆಮ್ಮದಿಯಾಗಿರಲು ಸಾಧ್ಯವಾಗಲಿದೆ. ಈ ಬಾರಿ ಯಾವುದೇ ಅನಾಹುತವನ್ನು ಸೃಷ್ಟಿಸದೆ ಜನೋಪಕಾರಿ ಮಳೆಯಾಗಲಿ ಎಂದು ಪರಿಸರ ಪ್ರಿಯರು ಆಶಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X