Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಿಫಾ ವೈರಸ್; ಭಯ ಬೇಡ, ಎಚ್ಚರವಿರಲಿ:...

ನಿಫಾ ವೈರಸ್; ಭಯ ಬೇಡ, ಎಚ್ಚರವಿರಲಿ: ಡಾ.ವಾಸುದೇವ

ವಾರ್ತಾಭಾರತಿವಾರ್ತಾಭಾರತಿ11 Jun 2019 8:51 PM IST
share
ನಿಫಾ ವೈರಸ್; ಭಯ ಬೇಡ, ಎಚ್ಚರವಿರಲಿ: ಡಾ.ವಾಸುದೇವ

ಉಡುಪಿ, ಜೂ.11: ನಿಫಾ ವೈರಸ್ ಕುರಿತಂತೆ ಜಿಲ್ಲೆಯ ಜನತೆ ಯಾವುದೇ ರೀತಿ ಆತಂಕ ಪಡುವ ಅಗತ್ಯ ಇಲ್ಲ. ಜ್ವರ ಅಥವಾ ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಕಾಣಿಸಿಕೊಂಡರೂ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದು ಮುಂಜಾಗ್ರತೆ ವಹಿಸುವಂತೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ವಾಸುದೇವ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಮಂಗಳವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಕಣ್ಗಾವಲು ಸಮಿತಿಯ ಅಂತರ್ ಇಲಾಖಾ ಸಮನ್ವಯ ಸಮಿತಿ ಸೆಯಲ್ಲಿ ಅವರು ಮಾತನಾಡುತಿದ್ದರು.

ಸಾಮಾನ್ಯವಾಗಿ ಜ್ವರ, ತಲೆನೋವು, ತಲೆ ಸುತ್ತುವಿಕೆ, ದಿಗ್ಬ್ರಮೆ, ಮಾನಸಿಕ ಗೊಂದಲ, ಜ್ಞಾನ ತಪ್ಪುವುದು ನಿಫಾ ವೈರಸ್‌ನ ಲಕ್ಷಣಗಳಾಗಿವೆ. ಈ ಲಕ್ಷಣಗಳು ಕಂಡುಬಂದರೆ ಕೂಡಲೆ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಮಾರ್ಗದರ್ಶನ ಪಡೆಯುವಂತೆ ಸಲಹೆ ನೀಡಿದರು.

ನಿಫಾ ವೈರಸ್ ಬಾವಲಿ ತಿಂದು ಬಿಟ್ಟ ಹಣ್ಣುಗಳನ್ನು ಸೇವಿಸುವುದರಿಂದ ಅಥವಾ ಆ ಹಣ್ಣನ್ನು ಸೇವಿಸಿದ ಹಂದಿ ಅಥವಾ ಇತರ ಪ್ರಾಣಿಗಳಿಂದ ವೈರಸ್ ಸೋಂಕಿತ ವ್ಯಕ್ತಿಯಿಂದ ವ್ಯಕ್ತಿಗೆ ಹರಡುವ ಸಾಧ್ಯತೆ ಇರುವುದರಿಂದ ಬಾವಲಿ ಅಥವಾ ಯಾವುದೇ ಪ್ರಾಣಿ ತಿಂದು ಬಿಟ್ಟಂತಹ ಹಣ್ಣುಗಳನ್ನು ಯಾರೂ ತಿನ್ನದಂತೆ ಅವರು ಸಲಹೆ ನೀಡಿದರು.

ಕೇರಳದ ಎರ್ನಾಕುಲಂನಲ್ಲಿ ಈಗಾಗಲೇ 2 ನಿಫಾ ವೈರಸ್ ಪತ್ತೆಯಾಗಿರುವ ಪ್ರಕರಣಗಳು ದಾಖಲಾಗಿದ್ದು, ಕೇರಳದಿಂದ ಬರುವಂತಹ ಪ್ರವಾಸಿಗರು, ಚಿಕಿತ್ಸೆಗಾಗಿ ಬರುವವರು, ನರ್ಸಿಂಗ್ ಕಲಿಯಲು ಬರುವ ವಿದ್ಯಾರ್ಥಿಗಳಿಗೆ ವೈರಸ್ ಹರಡದಂತೆ ಹಾಗೂ ನಿಫಾ ವೈರಸ್ ಸೋಂಕಿತರಿಂದ ಇತರರಿಗೆ ಹರಡದಂತೆ ತಡೆಗಟ್ಟುವ ಸಲುವಾಗಿ ಕೆಲ ತಿಂಗಳ ಕಾಲ ಈಗಾಗಲೇ ಜಿಲ್ಲೆಯಲ್ಲಿರುವರನ್ನು ವಾಪಸ್ಸು ಹೋಗದಂತೆ ಹಾಗೂ ಅಲ್ಲಿಂದ ಯಾರೂ ಈ ಕಡೆ ಬಾರದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ನಿಫಾ ವೈರಸ್ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕೇ ಹೊರತು ಭಯಪಡಿಸಬಾರದು. ಬಾವಲಿ ತಿಂದ ಹಣ್ಣುಗಳಿಂದ ನಿಫಾ ವೈರಸ್ ಹರಡುತ್ತದೆ ಎಂದ ಮಾತ್ರಕ್ಕೆ ಬಾವಲಿಯನ್ನು ನಾಶ ಮಾಡುವುದು ಸರಿಯಲ್ಲ. ಬಾವಲಿಯನ್ನು ನಾಶ ಮಾಡುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದ ಅವರು, ಬಾವಲಿಗಳು ಹೆಚ್ಚಾಗಿರುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಳ್ಳಬೇಕು ಎಂದರು.

ವೈರಾಣು ಜ್ವರವನ್ನು ತಡೆಗಟ್ಟುವ ಬಗ್ಗೆ ಡಾ. ವಾಸುದೇವ ಮಾಹಿತಿ ನೀಡಿ, ಕೈಗಳನ್ನು ಸಂಪೂರ್ಣವಾಗಿ ಶುದ್ದೀಕರಿಸುವುದು ತಡೆಗಟ್ಟುವಿಕೆಯ ಬಹುಮುಖ್ಯ ಕ್ರಮ ಎಂದರು. ಬಾವಲಿ ಹೆಚ್ಚಾಗಿರುವ ಪ್ರದೇಶದಲ್ಲಿ ಸಂಗ್ರಹಿಸಿದ ಸೇಂದಿ/ನೀರಾ ಸಂಗ್ರಹಿಸುವಾಗ, ಬಾವಲಿ ಅದನ್ನು ಕುಡಿದು ನಿಫಾ ವೈರಸ್ ಹರಡುವ ಸಾಧ್ಯತೆ ಇದ್ದು, ಇದನ್ನು ತಡೆಗಟ್ಟಲು ಸೇಂದಿ ಸಂಗ್ರಹಿಸುವಾಗ ಮುನ್ನೆಚ್ಚರಿಕಾ ಕ್ರಮವಾಗಿ ಬಲೆಗಳನ್ನು ಹಾಕಿ ಮುಚ್ಚಬೇಕು. ಹಣ್ಣು ಮತ್ತು ಒಣ ಖರ್ಜೂರ ವನ್ನು ಸೇವಿಸುವ ಮೊದಲು ಸಂಪೂರ್ಣವಾಗಿ ಶುದ್ಧೀಕರಿಸಬೇಕು. ಅನಾರೋಗ್ಯದ ಹಂದಿಗಳು ಹಾಗೂ ಇತರ ಪ್ರಾಣಿಗಳ ನೇರ ಸಂಪರ್ಕವನ್ನು ತಪ್ಪಿಸಬೇಕು ಎಂದರು.

ಬಾವಲಿಗಳಿರುವ ಬಾವಿಯ ನೀರನ್ನು ಕುಡಿಯುವಾಗ ಕುದಿಸಿಯೇ ಕುಡಿಯ ಬೇಕು ಹಾಗೂ ಬಾವಲಿಗಳ ಪ್ರವೇಶವನ್ನು ತಪ್ಪಿಸಲು ತೆರೆದ ಬಾವಿಗೆ ಜಾಲರಿ ಯನ್ನು ಅಳವಡಿಸಬೇಕು. ಸೋಂಕಿತ ರೋಗಿಯನ್ನು ನಿರ್ವಹಿಸುವಾಗ ಆಸ್ಪತ್ರೆಯ ಸಿಬ್ಬಂದಿಗಳು ಮಾಸ್ಕ್ ಮತು ಗ್ಲೌಸ್‌ಗಳನ್ನು ಬಳಸುವುದು ತುಂಬಾ ಅವಶ್ಯಕ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪ್ರಭಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಜಿ ರಾಮ, ಉಡುಪಿ ತಾಲೂಕು ಆರೋಗ್ಯಾಧಿಕಾರಿ ನಾಗರತ್ನ, ಕಾರ್ಕಳ ತಾಲೂಕು ಆರೋಗ್ಯಾಧಿಕಾರಿ ಡಾ.ಕೃಷ್ಣಾನಂದ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X