ಕಡ್ತಲ ಗ್ರಾಪಂ: ಸ್ವಚ್ಛ ಮೇವ ಜಯತೆ ಆಂದೋಲನ

ಉಡುಪಿ, ಜೂ.11: ಕಡ್ತಲ ಗ್ರಾಪಂ ವ್ಯಾಪ್ತಿಯಲ್ಲಿ ‘ಸ್ವಚ್ಛ ಮೇವ ಜಯತೆ’ ಆಂದೋಲನ ಕಾರ್ಯಕ್ರಮ ಮಂಗಳವಾರ ಸರಕಾರಿ ಪದವಿ ಪೂರ್ವ ಕಾಲೇಜು ದೊಂಡೇರಂಗಡಿಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಚಂದ್ರಿಕಾ ಕಿಣಿ ಉದ್ಘಾಟಿಸಿ, ಸ್ವಚ್ಛತೆಯ ಬಗ್ಗೆ ಮಾಹಿತಿ ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪರ್ಜಾನ ಎಂ. ಅವರು ಸ್ವಚ್ಛ ಮೇವ ಜಯತೆ ಆಂದೋಲನದ ಬಗ್ಗೆ ವಿವರಣೆ ನೀಡಿ ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾಲೇಜಿನ ಪ್ರಾಂಶುಪಾಲರು, ಶಾಲಾ ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು ತೆಂಗಿನ ಸಸಿ ನೆಟ್ಟು ಸ್ವಚ್ಛ ಮೇವ ಜಯತೆಗೆ ಚಾಲನೆ ನೀಡಿದರು. ನಂತರ ಶಾಲಾ ಮಕ್ಕಳಿಂದ ಜಾಥಾ ನಡೆಯಿತು. ಈ ಸಂದಭರ್ದಲ್ಲಿ ಆಶಾ ಕಾರ್ಯಕರ್ತೆಯರು, ಎಸ್‌ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು.
Next Story





