Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆಸ್ತಿ ತೆರಿಗೆ ಸದ್ಯಕ್ಕೆ ಹೆಚ್ಚಳವಿಲ್ಲ:...

ಆಸ್ತಿ ತೆರಿಗೆ ಸದ್ಯಕ್ಕೆ ಹೆಚ್ಚಳವಿಲ್ಲ: ಬಿಬಿಎಂಪಿ ಮೇಯರ್ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ11 Jun 2019 10:26 PM IST
share
ಆಸ್ತಿ ತೆರಿಗೆ ಸದ್ಯಕ್ಕೆ ಹೆಚ್ಚಳವಿಲ್ಲ: ಬಿಬಿಎಂಪಿ ಮೇಯರ್ ಸ್ಪಷ್ಟನೆ

ಬೆಂಗಳೂರು, ಜೂ.11: ಈಗಾಗಲೇ ಸಾಕಷ್ಟು ಮಂದಿ ತೆರಿಗೆ ಕಟ್ಟಿರುವುದರಿಂದ ಹೆಚ್ಚುವರಿ ತೆರಿಗೆಯನ್ನು ಸಂಗ್ರಹಿಸುವುದು ಕಷ್ಟವಾಗುತ್ತದೆ. ಅದಕ್ಕಾಗಿ ಸದ್ಯ ತೆರಿಗೆ ಹೆಚ್ಚಳವನ್ನು ಮಾಡುತ್ತಿಲ್ಲ ಎಂದು ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಈಗ ಅರ್ಧದಲ್ಲಿ ತೆರಿಗೆ ಹೆಚ್ಚಳ ಮಾಡಿದರೆ ಸಾರ್ವಜನಿಕರ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ತೆರಿಗೆ ಹೆಚ್ಚಳ ಮಾಡುವ ಪ್ರಸ್ತಾಪವನ್ನು ಕೈ ಬಿಡುವ ಕುರಿತು ಚಿಂತನೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ನಗರದ ಆಸ್ತಿ ಮಾಲಕರಿಗೆ ಬಿಬಿಎಂಪಿ ತಾತ್ಕಾಲಿಕ ರಿಲೀಫ್ ನೀಡಿದ್ದು, ಮನೆಗಳಿಗೆ ಶೇ.25, ವಾಣಿಜ್ಯ ಕಟ್ಟಡಗಳಿಗೆ ಶೇ.30ರಷ್ಟು ತೆರಿಗೆ ಹೆಚ್ಚಳ ಮಾಡಲು ಬಿಬಿಎಂಪಿ ನಿರ್ಧರಿಸಿದ್ದರಿಂದ ಹಿಂದೆ ಬಂದಿದೆ. ತೆರಿಗೆ ಹೆಚ್ಚಳ ಮಾಡುವ ಸಂಬಂಧ ಸರಕಾರಕ್ಕೂ ಪ್ರಸ್ತಾವನೆ ಸಲ್ಲಿಸಲು ಪಾಲಿಕೆ ಮುಂದಾಗಿತ್ತು. ಆದರೆ, ಪ್ರಸಕ್ತ ಆರ್ಥಿಕ ವರ್ಷ ಆರಂಭವಾಗಿರುವ ಹಿನ್ನೆಲೆಯಲ್ಲಿ ಹಾಗೂ ಸಾರ್ವಜನಿಕರಿಗೆ ಹೊರೆಯಾಗುವುದನ್ನು ತಪ್ಪಿಸುವ ಹಿನ್ನೆಲೆಯಲ್ಲಿ ಸದ್ಯಕ್ಕೆ ತೆರಿಗೆ ಹೆಚ್ಚಳ ಮಾಡದಿರಲು ನಿರ್ಧರಿಸಲಾಗಿದೆ.

ಈಗಾಗಲೇ ಶೇ.50ರಷ್ಟು ಜನರು ತೆರಿಗೆ ಪಾವತಿಸಿದ್ದಾರೆ. ಈಗ ಮಧ್ಯಂತರ ತೆರಿಗೆ ಹೆಚ್ಚಳ ಮಾಡಿದರೆ ಜನರ ವಿರೋಧ ಎದುರಿಸಬೇಕಾಗುತ್ತದೆ ಎಂಬ ಕಾರಣದಿಂದ ತೆರಿಗೆ ಹೆಚ್ಚಳ ಪ್ರಸ್ತಾಪವನ್ನು ಬಿಬಿಎಂಪಿ ಆಡಳಿತ ಪಕ್ಷ ಕೈಬಿಟ್ಟಿದ್ದು, 2020ನೆ ವರ್ಷಕ್ಕೆ ತೆರಿಗೆ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಆಯುಕ್ತ ಮಂಜುನಾಥ್ ಪ್ರಸಾದ್ ಕಳೆದ ಮೂರು ವರ್ಷಗಳಿಂದ ಆಸ್ತಿ ತೆರಿಗೆ ಪರಿಷ್ಕರಣೆ ಮಾಡಲಾಗಿಲ್ಲ. ಕೆಎಂಸಿ ಕಾಯ್ದೆ ಪ್ರಕಾರ ಪ್ರತಿ ಮೂರು ವರ್ಷಕ್ಕೊಮ್ಮೆ ಆಸ್ತಿ ತೆರಿಗೆ ಪರಿಷ್ಕರಣೆ ಮಾಡುವುದು ಮಾಮೂಲು. ಅನಿವಾರ್ಯ ಕಾರಣಗಳಿಂದ ಈ ಸಾಲಿನಲ್ಲಿ ಆಸ್ತಿ ತೆರಿಗೆ ಹೆಚ್ಚಳ ಮಾಡುವುದು ಅನಿವಾರ್ಯ ಎಂದು ತೆರಿಗೆ ಹೆಚ್ಚಳದ ಸುಳಿವು ನೀಡಿದ್ದರು.

ಆಡಳಿತ ಪಕ್ಷದ ನಾಯಕ ಅಬ್ದುಲ್ ವಾಜಿದ್ ಕೂಡ ಸಾಧಕ-ಬಾಧಕಗಳನ್ನು ಪರಿಶೀಲಿಸಿ ಆಸ್ತಿ ತೆರಿಗೆ ಹೆಚ್ಚಳ ಮಾಡುವ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಮರ್ಥಿಸಿಕೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X